ನಿಯಮ ಉಲ್ಲಂಘಿಸಿದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ ಅನುಸಾರ ಕ್ರಮ ವಿವಿಧ ಹಬ್ಬಗಳು, ಜಾತ್ರೆಗಳು,ಜಯಂತಿಗಳಲ್ಲಿ ಗುಂಪುಗೂಡುವಿಕೆ, ಸಾರ್ವಜನಿಕ ಸಭೆ ನಿಷೇಧಿಸಿ ಡಿಸಿ ಪವನ ಕುಮಾರ್ ಮಾಲಪಾಟಿ ಆದೇಶ

0
210

ಬಳ್ಳಾರಿ,ಮಾ.26 : ಸಾರ್ವನಿಕರ ಆರೋಗ್ಯದ ಹಿತದೃಷ್ಟಿಯಿಂದ ಹಾಗೂ ನೋವೆಲ್ ಕೊರೋನಾ ವೈರಾಣು ಹೆಚ್ಚಾಗಿ ಹರಡದಂತೆ ತಡೆಯುವ ಉದ್ದೇಶದಿಂದ ಯುಗಾದಿ, ಹೋಳಿ, ಷಬ್-ಎ-ಬರಾತ್, ಗುಡ್‍ಫ್ರೈಡೇ, ಜಾತ್ರಾ ಉತ್ಸವಗಳು, ಸಮಾಜ ಸುಧಾರಕರು ಹಾಗೂ ಗಣ್ಯರ ಜಂಯಂತಿಗಳು ಸೇರಿದಂತೆ ಹಬ್ಬಗಳಲ್ಲಿ ಹೆಚ್ಚಿನ ಜನ ಸೇರಿ ಗುಂಪುಗೂಡುವುದು ಮತ್ತು ಸಾರ್ವಜನಿಕ ಸಭೆ ನಡೆಸುವುದು ನಿಷೇಧಿಸಿ ಜಿಲ್ಲಾದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಪಾಟಿ ಅವರು ಆದೇಶ ಹೊರಡಿಸಿದ್ದಾರೆ.
ವಿಪತ್ತು ನಿರ್ವಹಣಾ ಕಾಯ್ದೆ 2005ರ ಕಲಂ 34ರಲ್ಲಿನ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಏ.30ರವರೆಗೆ ವಿವಿಧ ಹಬ್ಬಗಳು,ಜಾತ್ರೆಗಳು,ಜಯಂತಿಗಳಲ್ಲಿ ಗುಂಪುಗೂಡುವಿಕೆ,ಸಾರ್ವಜನಿಕ ಸಭೆಗಳನ್ನು ನಿಷೇಧಿಸಿ ಜಿಲ್ಲಾದಂಡಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಹೆಚ್ಚಿನ ಜನ ಸೇರುವ ಸಮಾರಂಭಗಳು, ಆಚರಣೆಗಳು ಸಾರ್ವಜನಿಕರು ಗುಂಪು ಸೇರಬಹುದಾದ ಇತರೆ ಚಟುವಟಿಕೆಗಳು ಮತ್ತು ಸಾರ್ವಜನಿಕರ ಬಹಿರಂಗ ಸಭೆಗಳನ್ನು ಮಾಡುವುದು ನಿಷೆಧಿಸಲಾಗಿದ್ದು, ನಿಯಮ ಉಲ್ಲಂಘಿಸಿದವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ಕಲಂ 51 ರಿಂದ 60 ರ ಅನ್ವಯವಾಗುವ ಐಪಿಸಿ ಸೆಕ್ಷನ್ 188 ರಂತೆ ಹಾಗೂ ಕರ್ನಾಟಕ ಸರ್ಕಾರದ ಸಾಂಕ್ರಾಮಿಕ ರೋಗಗಳ ಕಾಯ್ದೆ 2020ರ ಕಲಂ(4), (5) ಮತ್ತು (10)ರಂತೆ ಕ್ರಮಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು,ಜಿಪಂ ಸಿಇಒ,ವಿಜಯನಗರ ಜಿಲ್ಲೆಯ ವಿಶೇಷ ಅಧಿಕಾರಿಗಳು, ಜಿಲ್ಲೆಯಲ್ಲಿರುವ ಬಳ್ಳಾರಿ,ಹೊಸಪೇಟೆ,ಹರಪನಳ್ಳಿ ಸಹಾಯಕ ಆಯುಕ್ತರು ಹಾಗೂ ಎಲ್ಲ ತಾಲೂಕುಗಳ ತಹಸೀಲ್ದಾರರಿಗೆ ಹಾಗೂ ಈ ಆದೇಶದ ಅನುಸಾರ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಅವರು ಸೂಚಿಸಿದ್ದಾರೆ.
*ಸೊಂಕು ಹೆಚ್ಚಳದ ಆತಂಕದ ಹಿನ್ನೆಲೆಯಲ್ಲಿ ಈ ಕ್ರಮ: ವಿವಿಧ ಹಬ್ಬಗಳು, ಜಾತ್ರಾ ಮಹೋತ್ಸವಗಳು, ಸಮಾಜ ಸುಧಾರಕರ ಜಯಂತಿಗಳು ಹಾಗೂ ಸಾರ್ವಜನಿಕರು ಗುಂಪು ಸೇರಬಹುದಾದ ಇತರ ಚಟುವಟಿಕೆಗಳು,ಸೊಂಕು ಹರಡುವಿಕೆಯನ್ನು ಗಣನೀಯವಾಗಿ ಹೆಚ್ಚಿಸುವ ಆತಂಕದ ಜೊತೆಗೆ ಕೋವಿಡ್ ನಿಯಂತ್ರಣದಲ್ಲಿ ಇದುವರೆಗೆ ಸಾಧಿಸಲಾಗಿರುವ ಎಲ್ಲ ಪ್ರಯತ್ನಗಳಿಗೆ ಹಿನ್ನಡೆಯಾಗುವ ಸಾಧ್ಯತೆಗಳಿವೆ; ಈ ಹಿನ್ನೆಲೆಯಲ್ಲಿ ಹಾಗೂ ಸರಕಾರದ ಆದೇಶದ ಅನುಸಾರ ಈ ಕ್ರಮಕೈಗೊಳ್ಳಲಾಗಿದೆ ಎಂದು ಅವರು ತಮ್ಮ ಆದೇಶದಪತ್ರದಲ್ಲಿ ವಿವರಿಸಿದ್ದಾರೆ.

LEAVE A REPLY

Please enter your comment!
Please enter your name here