ತಪ್ಪದೆ ಕೋವಿಡ್ ಲಸಿಕೆ ಹಾಕಿಸಿಕೊಳ್ಳುವಂತೆ ಕೂಡ್ಲಿಗಿ ಮುಖ್ಯಾಧಿಕಾರಿ ಮನವಿ

0
109

ಕೂಡ್ಲಿಗಿ.ಏ.3:- ದೇಶದಲ್ಲಿ ಮತ್ತೆ ಕೊರೋನಾ ಎರಡನೇ ಅಬ್ಬರ ಶುರುವಾಗುತ್ತಿದ್ದು ಅದರ ನಿಯಂತ್ರಣಕ್ಕೆ ತಪ್ಪದೆ 45ವರ್ಷ ಮೇಲ್ಪಟ್ಟ ಮಧುಮೇಹ ಮತ್ತು ರಕ್ತದೊತ್ತಡದಿಂದ ಬಳಲುತ್ತಿರುವ ರೋಗಿಗಳು ತಪ್ಪದೆ ಕೋವಿಡ್ ಲಸಿಕೆ ಹಾಕಿಸಿಕೊಳ್ಳುವಂತೆ ಸಿಬ್ಬಂದಿಯೊಂದಿಗೆ ಮನೆ ಮನೆಗೆ ತೆರಳಿ ಕೂಡ್ಲಿಗಿ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಫಕ್ರುದ್ದೀನ್ ಮನವಿ ಮಾಡಿದ್ದಾರೆ. ಅವರು ಶುಕ್ರವಾರ ಕೂಡ್ಲಿಗಿ ಪಟ್ಟಣ ಪಂಚಾಯತಿ ವ್ಯಾಪ್ತಿಯ ಅಮರದೇವರಗುಡ್ಡ ಗ್ರಾಮದಲ್ಲಿನ ಮನೆಮನೆಗೆ ತೆರಳಿ ಕೋವಿಡ್ ಲಸಿಕೆ ಹಾಕಿಸಿಕೊಳ್ಳುವಂತೆ ಮನವಿ ಮಾಡಿ ಕೋವಿಡ್ ಲಸಿಕೆ ಹಾಕಿಸಿಕೊಂಡರೆ ಏನಾದರು ಅಪಾಯವಾಗುತ್ತದೇನೋ ಎಂಬ ಭಯಬೇಡ ಈಗಾಗಲೇ ಆರೋಗ್ಯ, ಕಂದಾಯ, ಪಟ್ಟಣ ಪಂಚಾಯತಿ, ಸಿಡಿಪಿಒ ಇಲಾಖೆ ಅಧಿಕಾರಿಗಳು ಸಿಬ್ಬಂದಿ ವರ್ಗ ಈಗಾಗಲೇ ಎರಡು ಮೂರು ಬಾರಿ ಲಸಿಕೆ ಹಾಕಿಸಿಕೊಂಡಿದ್ದು ಯಾವುದೇ ಅಡ್ಡ ಪರಿಣಾಮ ಆಗಿಲ್ಲವೆಂದು ಲಸಿಕೆ ಕುರಿತು ವಿವರಣೆ ನೀಡಿ ತಪ್ಪದೆ ಕೊರೋನಾ ನಿಯಂತ್ರಣಕ್ಕೆ ಕೋವಿಡ್ ಲಸಿಕೆ ಹಾಕಿಸಿಕೊಳ್ಳುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು ಲಸಿಕೆ ಹಾಕಿಸಿಕೊಳ್ಳಲು ಮುಂದಾದವರಿಗೆ ಆಟೋ ವ್ಯವಸ್ಥೆ ಕಲ್ಪಿಸುವುದಾಗಿಯೂ ತಿಳಿಸಿದರು. ಪಟ್ಟಣದ ವಾರ್ಡ್ ವಾರ್ಡ್ ಗಳಲ್ಲಿ ಮನೆಮನೆಗೆ ಪಟ್ಟಣ ಪಂಚಾಯತಿ ಸಿಬ್ಬಂದಿ ಜೊತೆಗೆ ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು ಹಾಗೂ ಇತರರು ಸಹ ಮನೆ ಮನೆಗೆ ತೆರಳಿ ಕೋವಿಡ್ ಲಸಿಕೆ ಹಾಕಿಸಿಕೊಂಡು ಮಹಾಮಾರಿ ಎರಡನೇ ಅಲೆಯನ್ನು ಸಹ ನಿಯಂತ್ರಿಸುವಂತೆ ಫಕ್ರುದ್ದೀನ್ ಪಟ್ಟಣ ಪಂಚಾಯತಿಯ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here