ಸಿಂಧನೂರಿನಲ್ಲಿ ಹಸಿರುಕ್ರಾಂತಿ ಹರಿಕಾರ,ಭಾರತದ ಮಾಜಿ ಉಪ ಪ್ರಧಾನಿ, ಡಾ||ಬಾಬು ಜಗಜೀವನ್ ರಾಮ್ ಜಯಂತಿ ಆಚರಣೆ

0
113

ಸಿಂಧನೂರು ನಗರದ ಪಿಡಬ್ಲ್ಯೂಡಿ ಕ್ಯಾಂಪ್ ನಲ್ಲಿರುವ ಭಾರತದ ಮಾಜಿ ಉಪಪ್ರಧಾನಿ,ಹಸಿರು ಕ್ರಾಂತಿಯ ಹರಿಕಾರ ಡಾ|| ಬಾಬು ಜಗಜೀವನ್ ರಾಮ್ ವೃತ್ತಕ್ಕೆ ಮಾಲಾರ್ಪಣೆ ಮಾಡುವ ಮೂಲಕ ಅವರು ಜಯಂತಿಯನ್ನು ಆಚರಿಸಲಾಯಿತು.

ಬಾಬು ಜಗಜೀವನ ರಾಮ್ ಅವರು” ಬಾಬೂಜಿ ಎಂದು ಖ್ಯಾತರಾಗಿದ್ದರು. ಇವರು ಸ್ವಾತಂತ್ರ ಹೋರಾಟಗಾರರಷ್ಟೆ ಅಲ್ಲದೇ, ಬಿಹಾರದ ದಲಿತ ಕುಟುಂಬದಲ್ಲಿ ಜನಿಸಿದ ಇವರು ನೆಹರು ಅವರ ಮಂತ್ರಿಮಂಡಲದಲ್ಲಿ ಸಚಿವರಾಗಿ,ಮೊರಾರ್ಜಿ ದೇಸಾಯಿಯವರ ಕಾಲದಲ್ಲಿ ಭಾರತದ ಉಪ ಪ್ರಧಾನಿಯೂ ಆಗಿದ್ದರು. ಜಗಜೀವನ ರಾಮ್ ರವರು ಅಸ್ಪ್ರಶ್ಯತಾ ನಿವಾರಣೆಯ ಹೋರಾಟದ ಮಹಾನ್ ದಲಿತ ನಾಯಕರಾಗಿದ್ದರು.

ಈ ಸಂದರ್ಭದಲ್ಲಿ ಕೊಪ್ಪಳ ಸಂಸದರಾದ ಕರಡಿ ಸಂಗಣ್ಣ, ಯಲಬುರ್ಗಾ ಶಾಸಕ ಹಾಲಪ್ಪಾಚಾರ್, ನಗರಸಭೆ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್,ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಅಮರೇಗೌಡ ವಿರುಪಾಪುರ,ಕನ್ನಡ ಪರ ಸಂಘಟನೆಗಳ ಮುಖಂಡರು,ದಲಿತ ಪರ ಸಂಘಟನೆಗಳ ಮುಖಂಡರು, ಸಾರ್ವಜನಿಕರು ಇದ್ದರು.

ವರದಿ:ಅವಿನಾಶ ದೇಶಪಾಂಡೆ

LEAVE A REPLY

Please enter your comment!
Please enter your name here