ಕೋವಿಡ್-19 ನಿಯಂತ್ರಣ; ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ: ವಿ.ಸೋಮಣ್ಣ

0
99

ಮಡಿಕೇರಿ -ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೋವಿಡ್-19 ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಈ ಹಿನ್ನೆಲೆ ಕೋವಿಡ್-19 ನಿಯಂತ್ರಿಸುವಲ್ಲಿ ಮಡಿಕೇರಿ, ವಿರಾಜಪೇಟೆ, ಪೊನ್ನಂಪೇಟೆ, ಕುಶಾಲನಗರ ಮತ್ತು ಸೋಮವಾರಪೇಟೆ ತಾಲ್ಲೂಕು ಕೇಂದ್ರಗಳಲ್ಲಿ ಕೂಡಲೇ ಸಹಾಯವಾಣಿ ಕೇಂದ್ರ ಆರಂಭಿಸುವಂತೆ ಕೊಡಗು ಜಿಲ್ಲಾ ಉಸ್ತುವಾರಿ ವಿ.ಸೋಮಣ್ಣ ಅವರು ಸೂಚಿಸಿದ್ದಾರೆ.
ನಗರದ ಜಿ.ಪಂ. ಸಭಾಂಗಣದಲ್ಲಿ ಕೋವಿಡ್ ನಿಯಂತ್ರಣ ಸಂಬಂಧ ನಡೆದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ ಇಲಾಖೆ ಜೊತೆ, ಪೊಲೀಸ್, ಕಂದಾಯ, ಸ್ಥಳೀಯ ಸಂಸ್ಥೆಗಳು ಸಹ ಕೈಜೋಡಿಸಬೇಕು. ಆ ನಿಟ್ಟಿನಲ್ಲಿ ಸರ್ಕಾರದ ಮಾರ್ಗಸೂಚಿಯನ್ನು ಪಾಲಿಸುವಲ್ಲಿ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಅಧಿಕಾರಿಗಳು ರಜೆ ಇದೆ ಎಂದು ಕೇಂದ್ರ ಸ್ಥಾನ ಬಿಟ್ಟು ತೆರಳುವಂತಿಲ್ಲ. ರಜೆ ದಿನದಲ್ಲಿಯೂ ಸಹ ಕೇಂದ್ರ ಸ್ಥಾನದಲ್ಲಿದ್ದು ಶ್ರದ್ಧೆಯಿಂದ ಕೆಲಸ ನಿರ್ವಹಿಸಬೇಕು. ಕೋವಿಡ್ ನಿಯಂತ್ರಿಸುವ ನಿಟ್ಟಿನಲ್ಲಿ ಇಲಾಖೆಗಳು ಮುಖ್ಯಸ್ಥರು ಹಾಗೂ ಸಿಬ್ಬಂದಿಗಳು ತಮ್ಮ ತಮ್ಮ ಹಂತದಲ್ಲಿ ಸರ್ಕಾರದ ಮಾರ್ಗಸೂಚಿಯ ಬಗ್ಗೆ ಅರಿವು ಮೂಡಿಸಿ ಪಾಲಿಸುವಂತಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಸೂಚಿಸಿದರು.
ಜಿಲ್ಲಾ ಆಸ್ಪತ್ರೆಯಲ್ಲಿ 13 ಸಾವಿರ ಲೀಟರ್ ಸಾಮಥ್ರ್ಯದ ಆಕ್ಸಿಜನ್ ಟ್ಯಾಂಕ್ ನಿರ್ಮಿಸಲಾಗಿದೆ. ಆದ್ದರಿಂದ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಆಮ್ಲಜನಕದ ಕೊರತೆಯಿಲ್ಲ. ಆ ನಿಟ್ಟಿನಲ್ಲಿ ಕೋವಿಡ್ ನಿಯಂತ್ರಣ ಸಂಬಂಧ ಅಗತ್ಯ ಕ್ರಮ ಕೈಗೊಳ್ಳುವಲ್ಲಿ ಮುನ್ನೆಚ್ಚರಿಕೆ ವಹಿಸಬೇಕು ಎಂದು ಸಚಿವರು ನಿರ್ದೇಶನ ನೀಡಿದರು.
‘ಕೋವಿಶೀಲ್ಡ್, ಕೋವಾಕ್ಸಿನ್, ರೆಮ್‍ಡಿಸಿವಿರ್ ಲಸಿಕೆಯನ್ನು ಕಾಲ ಕಾಲಕ್ಕೆ ಜಿಲ್ಲೆಗೆ ಪೂರೈಸುವ ನಿಟ್ಟಿನಲ್ಲಿ ಸಂಬಂಧಪಟ್ಟವರ ಜೊತೆ ಚರ್ಚಿಸಲಾಗುವುದು. ಆದ್ದರಿಂದ ಲಸಿಕೆ ಮತ್ತು ಇನ್ನಿತರ ಸಂಬಂಧ ಅಗತ್ಯ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ನಿರ್ದೇಶನ ನೀಡಿದರು.’
ಕೋವಿಡ್ ಕೇರ್ ಸೆಂಟರ್‍ಗಳಲ್ಲಿ ಎಲ್ಲಾ ರೀತಿಯ ಅಗತ್ಯ ಆರೋಗ್ಯ ಸೇವೆಗಳು ಇರಬೇಕು. ಬೆಡ್‍ಗಳನ್ನು ಹೆಚ್ಚಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದರು.
ಕೋವಿಡ್ -19 ಎರಡನೇ ಅಲೆಯಿಂದ ಕಠಿಣ ಪರಿಸ್ಥಿತಿ ಎದುರಿಸುವಂತಾಗಿದೆ. ಆದ್ದರಿಂದ ಅಧಿಕಾರಿಗಳು ತಮ್ಮ ಆರೋಗ್ಯದ ಜೊತೆಗೆ ತಮ್ಮ ಕರ್ತವ್ಯವನ್ನು ಅರಿತುಕೊಂಡು ಕಾರ್ಯ ನಿರ್ವಹಿಸಬೇಕಿದೆ ಎಂದರು.
ಜಿಲ್ಲಾಡಳಿತದ ಜೊತೆ ವಾರಕ್ಕೆ ಮೂರು ಬಾರಿಯಾದರೂ ಕೋವಿಡ್ ನಿಯಂತ್ರಣ ಸಂಬಂಧ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚಿಸಲಾಗುತ್ತದೆ ಎಂದು ವಿ.ಸೋಮಣ್ಣ ಅವರು ಹೇಳಿದರು.
ಶಾಸಕರಾದ ಕೆ.ಜಿ.ಬೋಪಯ್ಯ ಅವರು ಕೇರಳ ಗಡಿಭಾಗದ ಚೆಕ್‍ಪೋಸ್ಟ್‍ಗಳಲ್ಲಿ ಅಗತ್ಯ ತಪಾಸಣೆ ಮಾಡಬೇಕು. 72 ಗಂಟೆಯೊಳಗಿನ ಕೋವಿಡ್ ಪರೀಕ್ಷೆಯ ನೆಗೆಟಿವ್ ವರದಿಯನ್ನು ತೋರಿಸಿದ್ದಲ್ಲಿ ಅವರನ್ನು ಜಿಲ್ಲೆಗೆ ಪ್ರವೇಶಿಸಲು ಅವಕಾಶ ಮಾಡಬೇಕು ಎಂದು ಸಲಹೆ ಮಾಡಿದರು.
ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್ ಅವರು ಮಾತನಾಡಿ ಹೋಂ ಐಸೋಲೇಷನ್‍ನಲ್ಲಿ ಇರುವವರಿಗೆ ಕೈಗೆ ಶೀಲ್ ಮಾಡಬೇಕು. ಜೊತೆಗೆ ಮನೆಗೆ ಪೋಸ್ಟರ್ ಅಂಟಿಸಬೇಕು ಎಂದು ಅವರು ಸಲಹೆ ಮಾಡಿದರು.
ಸಂಸದರಾದ ಪ್ರತಾಪ್ ಸಿಂಹ ಅವರು ಮಾತನಾಡಿ ಸರ್ಕಾರ ಮೇ, 01 ರಿಂದ 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ನೀಡಲು ಮುಂದಾಗಿದೆ. ಆ ನಿಟ್ಟಿನಲ್ಲಿ ಸದ್ಯ 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಹಾಕಲಾಗುತ್ತಿದ್ದು, ಲಸಿಕೆ ಹಾಕುವ ನಿಟ್ಟಿನಲ್ಲಿ ಇನ್ನಷ್ಟು ಗುರಿ ಸಾಧಿಸಬೇಕು ಎಂದು ಅವರು ಹೇಳಿದರು.
ಕೋವಿಡ್-19 ಪಾಸಿಟಿವ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆ ಬೆಡ್‍ಗಳನ್ನು ಹೆಚ್ಚಿಸಿಕೊಳ್ಳಬೇಕು. ಇನ್ನೂ ಎರಡು ತಿಂಗಳು ಅಥವಾ ಮೂರು ತಿಂಗಳವರೆಗೆ ಕೋವಿಡ್ ಪಾಸಿಟಿವ್ ಪ್ರಕರಣ ಲೆಕ್ಕಾಚಾರ ಮಾಡಿಕೊಂಡು ಅಗತ್ಯ ತಯಾರಿ ಮಾಡಿಕೊಳ್ಳಬೇಕು. ಕಳೆದ ಬಾರಿಯಂತೆ ಈ ಬಾರಿಯು ಎಲ್ಲಾ ಹಂತದ ಅಧಿಕಾರಿಗಳು ಕೋವಿಡ್ ನಿಯಂತ್ರಣಕ್ಕೆ ಕೈಜೋಡಿಸಬೇಕು ಎಂದು ಅವರು ಹೇಳಿದರು.
ವಿವಿಧ ಧಾರ್ಮಿಕ ಮುಖಂಡರನ್ನು ಭೇಟಿ ಮಾಡಿ ಲಸಿಕೆ ಹಾಕಿಸಿಕೊಳ್ಳಲು ಮನವರಿಕೆ ಮಾಡಬೇಕು ಎಂದು ಸಂಸದರು ಸಲಹೆ ಮಾಡಿದರು. ಜಿಲ್ಲಾಡಳಿತ ಜೊತೆ ಕಂದಾಯ, ಜಿಲ್ಲಾ ಪಂಚಾಯಿತಿ, ಸ್ಥಳೀಯ ಸಂಸ್ಥೆಗಳು ಹೀಗೆ ಎಲ್ಲರೂ ಕೈಜೋಡಿಸಿ ಕಾರ್ಯ ನಿರ್ವಹಿಸಬೇಕು ಎಂದು ಅವರು ಹೇಳಿದರು.
ವಿಧಾನ ಪರಿಷತ್ ಸದಸ್ಯರಾದ ಸುನಿಲ್ ಸುಬ್ರಮಣಿ ಅವರು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು ಕರ್ತವ್ಯ ನಿರ್ವಹಿಸಬೇಕು ಎಂದರು. ವಿಧಾನ ಪರಿಷತ್ ಸದಸ್ಯರಾದ ವೀಣಾ ಅಚ್ಚಯ್ಯ ಅವರು ಕೋವಿಡ್ ನಿಯಂತ್ರಣ ಸಂಬಂಧ ಅಗತ್ಯ ಸಲಹೆ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್ ಅವರು ಮಾತನಾಡಿ ಜಿಲ್ಲೆಯಲ್ಲಿ ಏಪ್ರಿಲ್, 22 ರವರೆಗೆ 2,06,916 ಕೋವಿಡ್ ಪರೀಕ್ಷೆ ಮಾಡಲಾಗಿದೆ. ಅದರಲ್ಲಿ 1,72,273 ಆರ್‍ಟಿಪಿಸಿಆರ್ ಪರೀಕ್ಷೆ, 34,643 ರ್ಯಾಪಿಡ್ ಆಂಟಿಜನ್ ಪರೀಕ್ಷೆ ಮಾಡಲಾಗಿದೆ. ಅದರಲ್ಲಿ 7,3650 ಪಾಸಿಟಿವ್ ಬಂದಿದೆ. 6562 ಮಂದಿ ಗುಣಮುಖರಾಗಿದ್ದಾರೆ. 713 ಸಕ್ರಿಯ ಪ್ರಕರಣಗಳಿದ್ದು, 90 ಮರಣ ಪ್ರಕರಣಗಳು ವರದಿಯಾಗಿದೆ. 87 ಮಂದಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು, 626 ಮಂದಿ ಹೋಮ್ ಐಸೋಲೇಷನಲ್ಲಿ ಇದ್ದಾರೆ.
ಕೊಡಗು ವೈದ್ಯಕಿಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಡಾ.ಕಾರ್ಯಪ್ಪ ಅವರು ಮಾತನಾಡಿ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ 250 ಹಾಸಿಗೆ ಇದ್ದು, 150 ಆಕ್ಸಿಜನ್ ಬೆಡ್ ಇದೆ ಎಂದು ಅವರು ಮಾಹಿತಿ ನೀಡಿದರು.
ಪಶ್ಚಿಮ ಘಟ್ಟ ಕಾರ್ಯಪಡೆಯ ಅಧ್ಯಕ್ಷರಾದ ಶಾಂತೆಯಂಡ ರವಿಕುಶಾಲಪ್ಪ, ಜಿ.ಪಂ.ಅಧ್ಯಕ್ಷರಾದ ಬಿ.ಎ.ಹರೀಶ್, ಉಪಾಧ್ಯಕ್ಷರಾದ ಲೋಕೇಶ್ವರಿ ಗೋಪಾಲ್, ಜಿಲ್ಲಾಧಿಕಾರಿ ಚಾರುಲತ ಸೋಮಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರ, ಉಪ ವಿಭಾಗಾಧಿಕಾರಿ ಪಿ.ಶ್ರೀನಿವಾಸ್, ತಹಶೀಲ್ದಾರ್ ಮಹೇಶ್ ಇತರರು ಇದ್ದರು.
ಇನ್ನಷ್ಟು ಮಾಹಿತಿ: ಕೋರೊನಾ ಮಹಾಮಾರಿಯ ಎರಡನೇ ಅಲೆಯ ಸಂದಿಗ್ಧ ಪರಿಸ್ಥಿತಿಯಲ್ಲಿ ಜನತೆಗೆ ಸೂಕ್ತ ಆರೋಗ್ಯ ಸೇವೆಯನ್ನು ಒದಗಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ವಸತಿ ಸಚಿವರಾದ ವಿ.ಸೋಮಣ್ಣ ಅವರು ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ನಡೆದ ಕೋವಿಡ್-19ರ ಸೋಂಕು ನಿಯಂತ್ರಣ ಮತ್ತು ಸೋಂಕಿತರ ಚಿಕಿತ್ಸೆಗೆ ಸಂಬಂಧಿಸಿದಂತೆ ಕೈಗೊಂಡ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ತೀವ್ರಗತಿಯಲ್ಲಿ ಹರಡುತ್ತಿರುವ ಕೋವಿಡ್-19 ನಿಯಂತ್ರಿಸುವ ನಿಟ್ಟಿನಲ್ಲಿ ಸರ್ಕಾರದ ಮಾರ್ಗಸೂಚಿಯನ್ನು ಪ್ರತಿಯೊಬ್ಬರೂ ಪಾಲಿಸಬೇಕು. ಗೃಹ ಸಂಪರ್ಕ ತಡೆಯಲ್ಲಿರುವವರು ಇತತರನ್ನು ಸಂಪರ್ಕಿಸದಂತೆ ಅವರ ಮೇಲೆ ನೀಗಾ ವಹಿಸಬೇಕು ಎಂದು ಸಚಿವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಲ್ಲೆಯ ಐದು ತಾಲ್ಲೂಕುಗಳಲ್ಲಿ ಕೋವಿಡ್-19 ಸಹಾಯವಾಣಿಯನ್ನು ತಕ್ಷಣವೇ ಪ್ರಾರಂಭಿಸಲು ಅಧಿಕಾರಿಗಳಿಗೆ ಸೂಚಿಸಿದರು. ಈ ಸಹಾಯವಾಣಿಯು ದಿನದ 24 ಗಂಟೆಯೂ ಕಾರ್ಯ ನಿರ್ವಹಿಸಬೇಕು. ಪ್ರತಿಯೊಂದು ಸಹಾಯವಾಣಿ ಕೇಂದ್ರದಲ್ಲಿ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಬೇಕು ಎಂದು ಸಚಿವರು ನಿರ್ದೇಶನ ನೀಡಿದರು.
ಅಧಿಕಾರಿಗಳು ಕೋವಿಡ್-19 ಗಾಂಭೀರ್ಯತೆ ಅರ್ಥ ಮಾಡಿಕೊಂಡು ಕಾರ್ಯನಿರ್ವಹಿಸಬೇಕು. ಕೋವಿಡ್ ಲಸಿಕೆ ಕೊರತೆಯಾಗದಂತೆ ಎಚ್ಚರವಹಿಸಬೇಕು. ಲಸಿಕೆಗಳು ಕಡಿಮೆ ಇದ್ದಿಲ್ಲಿ ಮಾಹಿತಿಯನ್ನು ಸಲ್ಲಿಸದಲ್ಲಿ ಲಸಿಕೆಗಳನ್ನು ಸರಬರಾಜು ಮಾಡಲಾಗುವುದು. ಯಾವುದೇ ಕಾರಣಕ್ಕೂ ಜನರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಕೋವಿಡ್-19 ಮಹಾಮಾರಿಯಿಂದ ಜನರ ರಕ್ಷಣೆ ಮಾಡುವುದು ಅಧಿಕಾರಿಗಳ ಕರ್ತವ್ಯವಾಗಿದೆ ಯಾವುದೇ ರೀತಿಯ ದೂರುಗಳಿಗೆ ಅಧಿಕಾರಿಗಳು ಆಸ್ಪದ ನೀಡದ ರೀತಿಯಲ್ಲಿ ಕಾರ್ಯನಿರ್ವಹಿಸಬೇಕು. ಇಂತಹ ಸಂದಿಗ್ದ ಪರಿಸ್ಥಿಯಲ್ಲಿ ಇತರ ಇಲಾಖೆಗಳ ಸಹಕಾರ ಅತ್ಯಗತ್ಯವಾಗಿದ್ದು. ಜಿಲ್ಲಾಡಳಿತದೊಂದಿಗೆ ಎಲ್ಲರೂ ಸಹಕರಿಸಬೇಕು ಎಂದು ಸಚಿವರು ಹೇಳಿದರು.
ಜಿಲ್ಲೆಯ ಕೇರಳ ಗಡಿಭಾಗದಲ್ಲಿನ ಚೆಕ್‍ಪೊಸ್ಟ್‍ಗಳಲ್ಲಿ ತಪಾಸಣೆಯನ್ನು ಇನ್ನೂ ಬೀಗಿಗೊಳಿಸಬೇಕು. ಕೋವಿಡ್-19 ನೆಗೆಟಿವ್ ವರದಿ ಇಲ್ಲದ ಯಾರನ್ನು ಜಿಲ್ಲೆಯಲ್ಲಿ ಪ್ರವೇಶಿಸದಂತೆ ಎಚ್ಚರ ವಹಿಸಬೇಕು ಎಂದು ಸಚಿವರು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಂಸದರಾದ ಪ್ರತಾಪ ಸಿಂಹ ಅವರು ಮಾತನಾಡಿ ಕಳೆದ ವರ್ಷ ಕೋವಿಡ್ ಸಂದರ್ಭದಲ್ಲಿ ಸಿದ್ಧತೆ ಮಡಕೊಂಡು ಕಾರ್ಯ ನಿರ್ವಹಿಸಲಾಗಿತ್ತು ಅದೇ ರೀತಿಯಲ್ಲಿ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು. ಕೋವಿಡ್ ಲಸಿಕೆಯನ್ನು ಪಡೆಯಲು ಜನರು ಹಿಂಜರಿಯುತ್ತಿದ್ದು, ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ಅಧಿಕಾರಿಗಳು ಮಾಡಬೇಕು ಎಂದು ಅವರು ಹೇಳಿದರು.
ಮುಂಬರುವ ದಿನಗಳಲ್ಲಿ ಕೋವಿಡ್ ಪ್ರಕರಣಗಳು ಗರಿಷ್ಠ ಮಟ್ಟಕ್ಕೆ ತಲುಪುವ ಸಂಭವವಿದ್ದು, ಅಧಿಕಾರಿಗಳು ಈಗಲೇ ಎಚ್ಚೆತ್ತುಗೊಂಡು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.
ಮನೆಯಲ್ಲೇ ಹೋಂ ಐಸೋಲೇóಷನ್ ಆಗಿರುವ ಸೋಂಕಿತರಿಗೆ ಕೋವಿಡ್ ಮುದ್ರೆ ಹಾಗೂ ಅವರ ಮನೆಗಳಿಗೆ ಕರಪತ್ರವನ್ನು ಕಡ್ಡಾಯವಾಗಿ ಅಳವಡಿಸಬೇಕು ಎಂದು ಸಂಸದರು ಅಧಿಕಾರಿಗಳಿಗೆ ಸೂಚಿಸಿದರು.
ಜನರಿಗೆ ಯಾವುದೇ ರೀತಿಯ ಆರೋಗ್ಯ ಸಮಸ್ಯೆಯಾದರೆ ಸಹಾಯವಾಣಿ ಸಂಪರ್ಕಿಸಬೇಕು. ಸಹಾಯವಾಣಿ ಮೂಲಕ ಅವರಿಗೆ ಸೂಕ್ತ ಆರೋಗ್ಯ ನೇರವು ಒದಗಿಸಲು ಸಹಾಯವಾಣಿ ಸಹಕಾರಿಯಾಗಲಿದೆ ಎಂದು ಸಂಸದರು ತಿಳಿಸಿದರು.
ಶಾಸಕರಾದ ಕೆ.ಜಿ.ಬೋಪಯ್ಯ ಅವರು ಮಾತನಾಡಿ ತಾಲ್ಲೂಕು ಆಸ್ಪತ್ರೆಗಳನ್ನು ಪೂರ್ಣವಾಗಿ ಕೋವಿಡ್ ಆಸ್ಪತ್ರೆ ಮಾಡಲಾಗಿದ್ದು, ಇದರಿಂದ ಉಳಿದ ರೋಗದಿಂದ ಬಳಲುತ್ತಿರುವ ಜನರಿಗೆ ತೊಂದರೆಯಾಗುತ್ತಿದೆ, ಬೇಕಿದ್ದರೆ ಆಸ್ಪತ್ರೆಯ ಒಂದು ಭಾಗವನ್ನು ಕೋವಿಡ್-19 ಗೆ ಮೀಸಲಿಡಲಿ ಎಂದು ಸಲಹೆ ಮಾಡಿದರು.
ಕೋವಿಡ್ ಲಸಿಕೆ ಕೊರತೆ ಇದ್ದಲ್ಲಿ ತುರ್ತಾಗಿ ಲಸಿಕೆಯನ್ನು ತರಿಸಲು ಕ್ರಮ ವಹಿಸಬೇಕು. ಸಹಾಯವಾಣಿಗೆ ನೇಮಕಗೊಂಡ ಆಧಿಕಾರಿಗಳು ತಾಲ್ಲೂಕುವಾರು ಪ್ರತಿದಿನ ಕೋವಿಡ್ ಮಾಹಿತಿಯನ್ನು ಒದಗಿಸಬೇಕು ಎಂದು ಅವರು ಹೇಳಿದರು.
ಗೃಹ ಸಂಪರ್ಕ ತಡೆಯಲ್ಲಿರುವವರು ಮನೆಯಿಂದ ಹೊರಬರದಂತೆ ಕ್ರಮವಹಿಸಬೇಕು. ಹಾಗೂ ಕೆರಳದ ಗಡಿಭಾಗದಲ್ಲಿ ನ ಚೆಕ್ ಪೊಸ್ಟ್‍ಗಳಲ್ಲಿ ತಪಾಸಣೆಯನ್ನು ಬೀಗಿ ಮಾಡಬೇಕು ನೆಗೆಟಿವ್ ವರದಿ ಇಲ್ಲದ ಜನರನ್ನು ಜಿಲ್ಲೆಯಲ್ಲಿ ಪ್ರವೇಶಿಸಲು ಅನುಮತಿ ನೀಡಬಾರದು ಎಂದು ಅವರು ಹೇಳಿದರು.
ಶಾಸಕರಾದ ಅಪ್ಪಚ್ಚುರಂಜನ್ ಅವರು ಮಾತನಡಿ ಹೋಂ ಐಸೋಲೇóಷನ್ ಆಗಿರುವ ಸೋಂಕಿತರಿಗೆ ಕೋವಿಡ್ ಮುದ್ರೆ ಹಾಕುವ ಕಾರ್ಯವಾಗಬೇಕು ಆಗ ಕೋವಿಡ್ ಗಾಂಭೀರ್ಯತೆ ಅರಿವಾಗುತ್ತದೆ ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯರಾದ ವೀಣಾ ಅಚ್ಚಯ್ಯ ಅವರು ಮಾತನಾಡಿ ಆರೋಗ್ಯ ಸೇವೆಯಲ್ಲಿ ವಿಳಂಬ ಧೋರಣೆ ಮಾಡದೇ ಆರೋಗ್ಯ ಸಮಸ್ಯೆ ಉಲ್ಬಣಗೊಂಡವರನ್ನು ಕೂಡಲೇ ದಾಖಲಿಸಕೊಂಡು ಚಿಕಿತ್ಸೆ ನೀಡಬೇಕು ಎಂದು ಹೇಳಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ ಅವರು ಜಿಲ್ಲೆಯಲ್ಲಿ ಏಪ್ರಿಲ್, 22 ರವರೆಗೆ 206916 ಕೋವಿಡ್ ಪರೀಕ್ಷೆ ಮಾಡಲಾಗಿದೆ. ಅದರಲ್ಲಿ 1,72,273 ಆರ್‍ಟಿಪಿಸಿಆರ್ ಪರೀಕ್ಷೆ, 34,643 ರ್ಯಾಪಿಡ್ ಆಂಟಿಜನ್ ಪರೀಕ್ಷೆ ಮಾಡಲಾಗಿದೆ. ಅದರಲ್ಲಿ 7,3650 ಪಾಸಿಟಿವ್ ಬಂದಿದೆ. 6562 ಮಂದಿ ಗುಣಮುಖರಾಗಿದ್ದಾರೆ. 713 ಸಕ್ರಿಯ ಪ್ರಕರಣಗಳಿದ್ದು, 90 ಮರಣ ಪ್ರಕರಣಗಳು ವರದಿಯಾಗಿದೆ. 87 ಮಂದಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು, 626 ಮಂದಿ ಹೋಮ್ ಐಸೋಲೇಷನಲ್ಲಿ ಇದ್ದಾರೆ ಎಂದು ಸಚಿವರಿಗೆ ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ಪ್ರತಿ ದಿನ ಕೋವಿಡ್ ಪರೀಕ್ಷೆಯ ಗುರಿ ಹೆಚ್ಚಿಸಲಾಗಿದ್ದು, ಪ್ರತಿ ದಿನ 900 ಆರ್‍ಟಿಪಿಸಿಆರ್ ಮತ್ತು 100 ಆರ್‍ಎಟಿ ರಂತೆ ಪ್ರತಿ ದಿನ ಒಟ್ಟು 1000 ಪರೀಕ್ಷೆ ಮಾಡಲು ಗುರಿಯನ್ನು ನಿಗಧಿಪಡಿಸಲಾಗಿದೆ. ಜಿಲ್ಲೆಯಲ್ಲಿ ಕೋವಿಡ್ ಪರೀಕ್ಷೆ ನಡೆಸಲು ಒಟ್ಟು 9 ಸಂಚಾರಿ ತಂಡಗಳನ್ನು ರಚಿಸಲಾಗಿದ್ದು, ಗ್ರಾಮ ಮಟ್ಟದಲ್ಲಿ ಹಾಗೂ ವಾರ್ಡ್ ಮಟ್ಟದಲ್ಲಿ ಆರೋಗ್ಯ ತಪಾಸಣಾ ತಂಡಕ್ಕೆ ಸಹಕರಿಸುವ ನಿಟ್ಟಿನಲ್ಲಿ ಟಾಸ್ಕ್‍ಪೋರ್ಸ್ ರಚಿಸಲಾಗಿದೆ. ಆರೋಗ್ಯ ತಪಾಸಣಾ ತಂಡಕ್ಕೆ ಹೆಚ್ಚುವರಿಯಾಗಿ ಆಂಬ್ಯುಲೆನ್ಸ್‍ಗಳು ಹಾಗೂ ಬಾಡಿಗೆ ಆಧಾರದಲ್ಲಿ ವಾಹನಗಳನ್ನು ಒದಗಿಸಲು ಕ್ರಮವಹಿಸಲಾಗಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಸುಸಜ್ಜಿತವಾದ 56 ಬೆಡ್‍ಗಳ ತೀವ್ರ ನಿಗಾ ಘಟಕ ಕಾರ್ಯ ನಿರ್ವಹಿಸುತ್ತದೆ. ಹಾಗೂ ಇಲ್ಲಿ ಮಕ್ಕಳ ಮತ್ತು ನವಜಾತ ಶಿಶುಗಳಿಗೆ ವಿಶೇಷ ಸೌಲಭ್ಯವಿರುತ್ತದೆ. ಕೋವಿಡ್ ರೋಗಿಗಳಿಗೆ ಡಯಾಲಿಸಿಸ್‍ಗೆ ವಿಶೇಷ ಸೌಲಭ್ಯ ಕಲ್ಪಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು 26+6 ಒಟ್ಟು 32 ವೆಂಟಿಲೇಟರ್ ಸೌಲಭ್ಯವಿರುತ್ತದೆ.
13 ಕೆ.ಎಲ್ ಆಮ್ಲಜನಕ ಘಟಕ ಸ್ಥಾಪಿಸಲಾಗಿದ್ದು ಅಕ್ಟೋಬರ್ 10 2020 ರಿಂದ ಕಾರ್ಯ ನಿರ್ವಹಿಸುತ್ತಿದೆ. ಜಿಲ್ಲೆಯಲ್ಲಿ ಒಂದು ಖಾಸಗಿ ಆಸ್ಪತ್ರೆಯನ್ನು ವಿಪತ್ತು ನಿರ್ವಹಣೆ ಕಾಯ್ದೆಯನ್ವಯ ಹಸ್ತಾಂತರ ಪಡೆದುಕೊಂಡಿದ್ದು ಸಾರ್ವಜನಿಕರಿಗೆ ನಾನ್ ಕೋವಿಡ್ ಸೇವೆಗಳನ್ನು ಒದಗಿಸಲಾಗುತ್ತದೆ.
ಜಿಲ್ಲೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಹಾಗೂ ಮುಖಗವಸು ಧರಿಸದ ಸಾರ್ವಜನಿಕರ ಮೇಲೆ ಕಟ್ಟುನಿಟ್ಟಿನ ಕ್ರಮ. ಜಿಲ್ಲೆಯಲ್ಲಿ ಸುದ್ದಿ ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಜಿಲ್ಲೆಯಲ್ಲಿ ಪಾಸಿಟಿವ್ ಪ್ರಕರಣ ಹೆಚ್ಚಾಗಿ ಕಂಡುಬರುತ್ತಿದ್ದು, ಈಗಿರುವ 3 ಸಿ.ಸಿ.ಸಿ (300 ಹಾಸಿಗೆಗಳ) ಜೊತೆಗೆ ಹೆಚ್ಚುವರಿಯಾಗಿ 3 ಸಿಸಿಸಿ (400 ಹಾಸಿಗೆಗಳ) ಒಟ್ಟು 700 ಹಾಸಿಗೆಗಳಿಗೆ ಹೆಚ್ಚಿಸಲು ಕ್ರಮವಹಿಸಲಾಗಿದೆ.
ಜಿಲೆಯಲ್ಲಿ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಮೊಡರೇಟ್(Modrate) ಪ್ರಕರಣಗಳನ್ನು ಸಾ.ಆ. ವಿರಾಜಪೇಟೆ, ಸೋಮವಾರಪೇಟೆ, ಸ.ಆ.ಕೇಂದ್ರ ಪಾಲಿಬೆಟ್ಟ ಹಾಗೂ ಕುಟ್ಟದಲ್ಲಿ ಆಕ್ಷಿಜನೇಟೆಡ್ ಬೆಡ್(Oxygenated Bed) ಗಳಾಗಿ ಪರಿವರ್ತಿಸಿ ಪಾಸಿಟಿವ್ ಪ್ರಕರಣಗಳನ್ನು ದಾಖಲಿಸಲು ಕ್ರಮವಹಿಸಲಾಗಿದೆ ಎಂದರು.
ಕೋವಿಡ್ -19 ಲಸಿಕಾ ಪ್ರಗತಿಯನ್ನು ಹೆಚ್ಚಿಸಲು ಕ್ರಮ ತೆಗೆದುಕೊಳ್ಳಲಾಗಿದೆ. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಡಿ.ಟಿ.ಎಫ್ ಸಭೆಯನ್ನು ನಡೆಸಿ ಜಿಲ್ಲೆಯ ಎಲ್ಲಾ ಕಾರ್ಯಕ್ರಮ ಅನುಷ್ಟಾನಾಧೀಕಾರಿಗಳಿಗೆ ತಮ್ಮ ಇಲಾಖೆಯ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ಹಾಕಿಸಲು ಸೂಚಿಸಲಾಗಿದೆ. ಉಪ ಕೇಂದ್ರಗಳಲ್ಲಿ ಲಸಿಕೆಯನ್ನು ನೀಡಲು ಕ್ರಿಯಾ ಯೋಜನೆಯನ್ನು ತಯಾರಿಸಿ ಮಾನವ ಸಂಪನ್ಮೂಲವನ್ನು ಒದಗಿಸಲಾಗಿದೆ. ಗ್ರಾಮ ಪಂಚಾಯತ್ ಮುಖಾಂತರ 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲು ಪ್ರಚಾರ ನಡೆಸಲು ತಿಳಿಸಿದೆ. ಸರ್ಕಾರಿ ರಜೆಗಳನ್ನು ಸೇರಿಸಿ ಕ್ರಿಯಾ ಯೋಜನೆಯನ್ನು ತಯಾರಿಸಲಾಗಿದೆ. ಮಾಧ್ಯಮಗಳು ಹಾಗೂ ಪತ್ರಿಕೆಗಳ ಮುಖಾಂತರ ಮಾಹಿತಿಯನ್ನು ನೀಡಲಾಗಿದೆ ಎಂದರು.
ಕೋವಿಡ್ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್‍ಗಳ ಮೇಲುಸ್ತುವಾರಿಯನ್ನು ನುರಿತ ತಜ್ಞರ ಸಮಿತಿಗೆ ವಹಿಸಲಾಗಿದೆ. ಜಿಲ್ಲೆಯಲ್ಲಿ 100 ಹಾಸಿಗೆಗಳುಳ್ಳ ಕೋವಿಡ್ ಆಸ್ಪತ್ರೆ(ಡಿಸಿಎಚ್), 150 ಹಾಸಿಗೆ ಸಾಮಥ್ರ್ಯವುಳ್ಳ ಡಿಸಿಎಚ್‍ಸಿಗಳಿದ್ದು ಈ ಪೈಕಿ 150 ಹಾಸಿಗೆಗಳಿಗೆ ಆಕ್ಸಿಜನ್ ಸರಬರಾಜು ವ್ಯವಸ್ಥೆ ಇರುತ್ತದೆ ಎಂದು ಕೊಡಗು ವೈದ್ಯಕೀಯ ಶಿಕ್ಷಣ ಸಂಸ್ಥೆಯ ನಿರ್ದೇಶಕರಾದ ಡಾ. ಕಾರ್ಯಪ್ಪ ಅವರು ಸಚಿವರಿಗೆ ಮಾಹಿತಿ ನೀಡಿದರು.

LEAVE A REPLY

Please enter your comment!
Please enter your name here