ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಭಗವಾನ ಮಹಾವೀರ ಜಯಂತಿ ಆಚರಣೆ

0
135

ಧಾರವಾಡ.ಏ.25: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಇಂದು ಬೆಳಿಗ್ಗೆ ಜಿಲ್ಲಾದಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶ್ರೀ ಭಗವಾನ ಮಹಾವೀರ ಜಯಂತಿಯನ್ನು ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು ಸರಳವಾಗಿ ಆಚರಿಸಲಾಯಿತು.

ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ ಅವರು ಭಗವಾನ ಮಹಾವೀರರ ಭಾವಚಿತ್ರಕ್ಕೆ ಪೂಜೆ ಮಾಡಿ, ಪುಷ್ಪಾರ್ಪಣೆ ಸಲ್ಲಿಸಿ ನಮಿಸಿದರು. ಈ ಸಂದರ್ಭದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೆ.ಚಿದಂಬರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಮಂಜುಳಾ ಎಲಿಗಾರ , ಜಿಲ್ಲಾ ಮಿಮಾ ಅಧಿಕಾರಿ ಜೆ.ಸಿ.ಕಠಾರೆ, ಆಹಾರ ಇಲಾಖೆಯ ಅಧಿಕಾರಿ ಶಿವಶಂಕರ ಹಿರೇಮಠ ಸೇರಿದಂತೆ ಇತರರು ಇದ್ದರು

LEAVE A REPLY

Please enter your comment!
Please enter your name here