ಕೋವಿಡ್ ಜಾಗೃತಿಗೆ ಮಾಸ್ಕ್ ಧರಿಸಿ ವ್ಯಕ್ತಿಗೆ ಅಂತರ ಕಾಪಾಡಿಕೊಳ್ಳಿ- ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಾಧೀಶರಾದ ಉಮೇಶ ಅಡಿಗ ಸೂಚನೆ

0
84

ಧಾರವಾಡ : ಕೊವಿಡ್-19 ಎರಡನೇ ಅಲೆಯು ವೇಗವಾಗಿ ಹರಡುತ್ತಿದ್ದು, ಪ್ರತಿಯೊಬ್ಬ ಸಾರ್ವಜನಿಕರೂ ಮಾಸ್ಕ್ ಧರಿಸುವಿಕೆ, ವ್ಯಕ್ತಿಗತ ಅಂತರ ಕಾಪಾಡಿಕೊಳ್ಳುವುದು, ಅರ್ಹ ವ್ಯಕ್ತಿಗಳು ಲಸಿಕೆ ಹಾಕಿಸಿಕೊಂಡು ಆರೋಗ್ಯ ರಕ್ಷಿಸಿಕೊಳ್ಳಬೇಕೆಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ, ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಉಮೇಶ ಎಂ.ಅಡಿಗ ಮನವಿ ಮಾಡಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರವು ಕೂಡ ಈ ನಿಟ್ಟಿನಲ್ಲಿ ನಿರ್ದೇಶನಗಳನ್ನು ನೀಡಿದೆ.

ನಿರಂತರ ಜಾಗೃತಿ ಮೂಲಕವೇ ಜನರ ಆರೋಗ್ಯ ರಕ್ಷಿಸಬಹುದು. ಪತ್ರಿಕೆ, ದೃಶ್ಯ ಮಾಧ್ಯಮಗಳು, ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಸರ್ಕಾರದ ವಿವಿಧ ಇಲಾಖೆಗಳ ನಡುವೆ ಸಮನ್ವಯ ಸಾಧಿಸಿ, ಕೋವಿಡ್ ಜಾಗೃತಿ ಚಟುವಟಿಕೆಗಳು ಹಾಗೂ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಬರುವ ಮೇ 1 ರಿಂದ 18 ವರ್ಷ ಮೇಲ್ಪಟ್ಟವರಿಗೆಲ್ಲರಿಗೂ ಕೋವಿಡ್ ನಿರೋಧಕ ಲಸಿಕೆ ನೀಡಲಾಗುವುದು. ಜಿಲ್ಲೆಯ ಜನತೆ ಈ ಸದವಕಾಶ ಬಳಸಿಕೊಂಡು ಆರೋಗ್ಯ ರಕ್ಷಣೆಗೆ ಆದ್ಯತೆ ನೀಡಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here