ನರೇಗಾ ಕಾರ್ಮಿಕರಿಗೆ ಆರೋಗ್ಯ ಶಿಬಿರ

0
80

ಧಾರವಾಡ : ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಉಮಚಗಿ ಮತ್ತು ಕೋಳಿವಾಡ ಗ್ರಾಮ ಪಂಚಾಯಿತಿಯಲ್ಲಿ ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ನೋಂದಾಯಿತ ಕೂಲಿ ಕಾರ್ಮಿಕರಿಗೆ ಕೆಲಸ ನಿರ್ವಹಿಸುವ ಸ್ಥಳದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಬಿ. ಸುಶೀಲಾ ಅವರ ಅಧ್ಯಕ್ಷತೆಯಲ್ಲಿ ಆರೋಗ್ಯ ಶಿಬಿರವನ್ನು ಏರ್ಪಡಿಸುವ ಮೂಲಕ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣೆಯನ್ನು ಮಾಡಲಾಯಿತು.

ಈ ಸಂದರ್ಭದಲ್ಲಿ ಹುಬ್ಬಳ್ಳಿ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಗಂಗಾಧರ ಕಂದಕೂರ ಹಾಗೂ ಗ್ರಾಮೀಣ ಉದ್ಯೋಗ ಸಹಾಯಕ ನಿರ್ದೇಶಕ ಪಾಂಡುರಂಗ ಹಟ್ಟಿ ಮತ್ತು ಐಇಸಿ ಸಂಯೋಜಕರಾದ ರಮೇಶ ಲಮಾಣಿ, ತಾಂತ್ರಿಕ ಸಹಾಯಕರು, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here