ಕೋವಿಡ್ 19 ಪ್ರಕರಣ ಹೆಚ್ಚಳ ಎಚ್ಚರದಿಂದ ಕಾರ್ಯನಿರ್ವಹಿಸಿ: ಅನ್ಬುಕುಮಾರ್

0
94

ಮಡಿಕೇರಿ -ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ.ಅನ್ಬುಕುಮಾರ್ ಅವರು ನಗರದ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ಬುಧವಾರ ಭೇಟಿ ನೀಡಿ ಪರಿಶೀಲಿಸಿದರು.
ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಡಾ.ಕಾರ್ಯಪ್ಪ, ಅಧೀಕ್ಷಕರಾದ ಡಾ.ಲೋಕೇಶ್, ಸ್ಥಾನಿಕ ವೈದ್ಯಾಧಿಕಾರಿ ಡಾ.ರೂಪೇಶ್ ಗೋಪಾಲ್ ಅವರಿಂದ ಕೊಡಗು ವೈದ್ಯಕೀಯ ವಿಜ್ಞಾನ ಕಾಲೇಜಿನಲ್ಲಿ ತಜ್ಞ ವೈದ್ಯರ ಸಂಖ್ಯೆ, ಖಾಲಿ ಹುದ್ದೆಗಳು, ಕೋವಿಡ್ 19 ತಡೆಯುವಲ್ಲಿ ಅನುಸರಿಸುತ್ತಿರುವ ಕ್ರಮಗಳು, ಪಾಸಿಟಿವ್ ಬಂದವರಿಗೆ ಉತ್ತಮ ಚಿಕಿತ್ಸೆ, ಔಷಧಿ ಸೌಲಭ್ಯ, ಆಮ್ಲಜನಕ ಪೂರೈಕೆ ಮತ್ತಿತರ ಬಗ್ಗೆ ಬಗ್ಗೆ ಮಾಹಿತಿ ಪಡೆದರು.
ಕಫ್ರ್ಯೂ ಜಾರಿಯಲ್ಲಿದ್ದರೂ ಸಹ ಕೋವಿಡ್ ಪ್ರಕರಣಗಳು ಕಡಿಮೆಯಾಗುತ್ತಿಲ್ಲ, ಆದ್ದರಿಂದ ಪ್ರತಿಯೊಂದು ಹಂತದ ವೈದ್ಯಾಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಯಾವುದೇ ರೀತಿಯ ಲೋಪ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು ನಿರ್ದೇಶನ ನೀಡಿದರು.
ಕೋವಿಡ್ 19 ತಡೆಯುವ ನಿಟ್ಟಿನಲ್ಲಿ ಸರಿಯಾದ ಸಿದ್ಧತೆಯಿಂದ ಕಾರ್ಯನಿರ್ವಹಿಸಬೇಕು. ಸೋಂಕಿತರ ಬಗ್ಗೆ ಸದಾ ಎಚ್ಚರ ವಹಿಸಬೇಕು. ಕೋವಿಡ್ 19 ಪ್ರಕರಣಗಳು ಅಧಿಕವಾಗುತ್ತಿರುವುದರಿಂದ ವೈದ್ಯಕೀಯ ಕಾಲೇಜಿನಲ್ಲಿಯೂ ಸಹ ಸಾಮಾನ್ಯ ವಾರ್ಡ್ ತೆರೆಯಬಹುದಾಗಿದೆ. ಆ ನಿಟ್ಟಿನಲ್ಲಿ ಗಮನಹರಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು ಸಲಹೆ ಮಾಡಿದರು.
ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಡಾ.ಕಾರ್ಯಪ್ಪ, ಅಧೀಕ್ಷಕರಾದ ಡಾ.ಲೋಕೇಶ್, ಸ್ಥಾನಿಕ ವೈದ್ಯಾಧಿಕಾರಿ ಡಾ.ರೂಪೇಶ್ ಗೋಪಾಲ್ ಅವರು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ಬೇಕಿರುವ ಅಗತ್ಯ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಅರವಳಿಕೆ ತಜ್ಞರಾದ ಡಾ.ಪ್ರದೀಪ್ ಅವರು ಕೋವಿಡ್ 19 ಸೋಂಕಿತರ ಬಗ್ಗೆ ಮಾಹಿತಿ ನೀಡಿದರು.
ಜಿಲ್ಲಾ ಕೋವಿಡ್ ಆಸ್ಪತ್ರೆಗೆ ಭೇಟಿ ನೀಡುವುದಕ್ಕೂ ಮೊದಲು ಕೂಡಿಗೆಯ ಕೋವಿಡ್ ಆರೈಕೆ ಕೇಂದ್ರಕ್ಕೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ.ಅನ್ಬುಕುಮಾರ್ ಅವರು ಭೇಟಿ ನೀಡಿ ಪರಿಶೀಲಿಸಿದರು.
ಕೋವಿಡ್ ಆರೈಕೆ ಕೇಂದ್ರಗಳಲ್ಲಿ ಕೋವಿಡ್ 19 ಸೋಂಕಿತರಿಗೆ ಕಾಲಕಾಲಕ್ಕೆ ಔಷಧಿ ಮತ್ತು ಊಟೋಪಚಾರ ಒದಗಿಸಬೇಕು. ಕುಡಿಯಲು ಬಿಸಿ ನೀರು ನೀಡಬೇಕು. ಯಾವುದೇ ರೀತಿಯ ಕುಂದುಕೊರತೆ ಉಂಟಾಗದಂತೆ ಗಮನಹರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಡಿಡಿಪಿಐ ಪಿ.ಎಸ್. ಮಚ್ಚಾಡೋ ಇದ್ದರು.

LEAVE A REPLY

Please enter your comment!
Please enter your name here