ಜಿಲ್ಲಾ ಉಸ್ತುವಾರಿ ಸಚಿವರಿಂದ ಜಗಳೂರು ತಾಲ್ಲೂಕು ಆಸ್ಪತ್ರೆ ಭೇಟಿ

0
97

ದಾವಣಗೆರೆ;ನಗರಾಭಿವೃದ್ದಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ ಇವರು ಮೇ 7 ರಂದು ಜಗಳೂರು ತಾಲ್ಲೂಕು ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ, ಕೊರೊನಾ ನಿಯಂತ್ರಣಕ್ಕೆ ಅಲ್ಲಿನ ವೈದ್ಯರು ತೆಗೆದುಕೊಂಡಿರುವ ಕ್ರಮಗಳು ಮತ್ತು ಸೋಂಕಿತರಿಗೆ ಸಮರ್ಪಕವಾಗಿ ಚಿಕಿತ್ಸೆ ನೀಡಲಾಗುತ್ತಿದೆಯೇ ಎಂದು ಪರಿಶೀಲಿಸಿದರು.
ಅಲ್ಲದೇ ತಾಲ್ಲೂಕು ಆಡಳಿತ ಸೋಂಕು ನಿಯಂತ್ರಣಕ್ಕೆ ಯಾವೆಲ್ಲ ರೀತಿಯಲ್ಲಿ ಕಾರ್ಯ ಪಡೆ ರಚಿಸಿ ಕಾರ್ಯ ನಿರ್ವಹಿಸುತ್ತಿದೆ ಎಂಬ ಮಾಹಿತಿಯನ್ನು ಪಡೆದರು.
ಈ ವೇಳೆ ಸಂಸದರಾದ ಡಾ.ಜಿ.ಎಂ.ಸಿದ್ದೇಶ್ವರ, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹನುಮಂತರಾಯ, ಜಿ.ಪಂ ಸಿಇಓ ಡಾ.ವಿಜಯ ಮಹಾಂತೇಶ ದಾನಮ್ಮನವರ್,ಜಗಳೂರು ತಹಶೀಲ್ದಾರ್ ನಾಗವೇಣಿ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here