ಸರ್ಕಾರದ ಮಾರ್ಗಸೂಚಿಗಳನ್ನು ಸಾರ್ವಜನಿಕರು ಪಾಲಿಸುವುದು ಕಡ್ಡಾಯ: ಎಸ್ಪಿ ಯತೀಶ ಎನ್.

0
107

ಗದಗ. ಕೋವಿಡ್-19 2ನೇ ಅಲೆ ಸೋಂಕು ಹರಡುವುದನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿಗಳನ್ನು ಸಾರ್ವಜನಿಕರು ಪಾಲಿಸುವುದು ಕಡ್ಡಾಯ ಎಂದು ಜಿಲ್ಲಾ ಪೊಲೀಸ್ ಇಲಾಖೆ ಪ್ರಕಟಣೆ ತಿಳಿಸಿದೆ.

ಮೇ 10ರ ಬೆಳಗ್ಗೆ 6 ರಿಂದ ಮೇ 24ರ ಬೆಳಗಿನ 6ರ ವರೆಗೆ ಕೋವಿಡ್-19 ಸಾಂಕ್ರಾಮಿಕ ರೋಗ ಹರಡುವಿಕೆಯ ಸರಪಳಿ ತುಂಡರಿಸಲು ಸರ್ಕಾರದಿಂದ ಜಾರಿಗೊಳಿಸಿರುವ ಪರಿಷ್ಕöÈತ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವ ಕುರಿತು ಜಿಲ್ಲೆಯಾದ್ಯಂತ ದಂಡ ಪ್ರಕ್ರಿಯೆ ಸಂಹಿತೆ 1973ರ ಕಲಂ 144ರ ಮೇರೆಗೆ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದ್ದು, ಜಿಲ್ಲೆಯ ಎಲ್ಲ ಠಾಣೆಯ ಅಧಿಕಾರಿಗಳು, ಸಿಬ್ಬಂದಿ ಆಯಾ ವ್ಯಾಪ್ತಿಯಲ್ಲಿ ಪೆಟ್ರೋಲಿಂಗ, ಪಿಕ್ಸ್ ಪಾಯಿಂಟ್ ಗಳಲ್ಲಿ ಸೂಕ್ತ ಬಂದೋಬಸ್ತ್ ನಿಯೋಜಿಸಿ ಕ್ರಮ ಕೈಗೊಳ್ಳಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಉಪಯೋಗ ಮಾಡಿಕೊಂಡು ವೈರಸ್ ಹರಡುವುದನ್ನು ತಡೆಗಟ್ಟಲು ಸಹಕರಿಸಬೇಕಿದೆ. ತುರ್ತು ಸಂದರ್ಭ ಹೊರತುಪಡಿಸಿ ಸಾರ್ವಜನಿಕರು ವಿನಾಕಾರಣ ವಾಹನಗಳನ್ನು ತೆಗೆದುಕೊಂಡು ರಸ್ತೆ ಸಂಚಾರ ಮಾಡಕೂಡದು. ಅನಗತ್ಯವಾಗಿ ರಸ್ತೆಯಲ್ಲಿ ಓಡಾಡದೇ ಸರ್ಕಾರ ನಿಗದಿಪಡಿಸಿದ ಅವಧಿಯಲ್ಲಿ ಮಾತ್ರ ಪಾದಚಾರಿಯಾಗಿ ಆಗಮಿಸಿ ಅಗತ್ಯ ವಸ್ತುಗಳನ್ನು ಖರೀದಿಸಬಹುದಾಗಿದೆ. ಹೋಟೆಲ್ ಸಿಬ್ಬಂದಿಯವರೇ ಸಾರ್ವಜನಿಕ ಮನೆಗಳಿಗೆ ಉಪಹಾರ ತಲುಪಿಸಬಹುದಾಗಿದೆ. ಸರ್ಕಾರದ ನಿಯಮಗಳನ್ನು ಉಲ್ಲಂಘನೆ ಮಾಡಿದವರ ವಿರುದ್ಧ ಕಾನೂನು ರೀತ್ಯಾ ಕಠಿಣ ಕ್ರಮ ಕೈಗೊಳ್ಳಲಾಗುವುದು. ಜಿಲ್ಲೆ ಹಾಗೂ ಅಂತರ ಜಿಲ್ಲೆ ವಾಹನ ಸಂಚಾರ ಸಂಪೂರ್ಣ ನಿಷೇಧಿಸಿದ್ದು, ಇಲಾಖೆ ವತಿಯಿಂದ ಯಾವುದೇ ಪಾಸ್‌ಗಳನ್ನು ವಿತರಿಸುತ್ತಿಲ್ಲ. ಸಾರ್ವಜನಿಕರು ಸಹಕರಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್., ಅವರು ಪ್ರಕಟಣೆ ಮೂಲಕ ಕೋರಿದ್ದಾರೆ.

LEAVE A REPLY

Please enter your comment!
Please enter your name here