ಸೋಂಕಿತರ ಆರೋಗ್ಯ ಸಂವರ್ಧನೆಗೆ ಕ್ರಮವಹಿಸಿ:ಡಾ.ಕೆ.ಸಿ ನಾರಾಯಣಗೌಡ

0
89

ಮಂಡ್ಯ. – ಕೋವಿಡ್ ನಿಯಂತ್ರಣಕ್ಕಾಗಿ ಕೈಗೊಂಡಿರುವ ಅಗತ್ಯ ಸುರಕ್ಷತಾ ಕ್ರಮಗಳು ಹಾಗೂ ಕೋವಿಡ್ ಹೆಲ್ತ್ ಕೇರ್ ಸೆಂಟರ್ ನಲ್ಲಿ ಸೋಂಕಿತರ ಆರೋಗ್ಯ ಸಂವರ್ಧನೆಗೆ ಕೈಗೊಂಡಿರುವ ಚಿಕಿತ್ಸೆ ಬಗ್ಗೆ ಕ್ರಮವಹಿಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸಿ ನಾರಾಯಣಗೌಡ ಹೇಳಿದರು.
ಕೃಷ್ಣರಾಜಪೇಟೆಯ ಸಚಿವರ ನಿವಾಸದಲ್ಲಿ ಕೊರೋನಾ ನಿಯಂತ್ರಣ, ಆಕ್ಸಿಜನ್ ಸಮಸ್ಯೆ ನಿವಾರಣೆ ಕುರಿತು ತಾಲ್ಲೂಕು ಮಟ್ಟದ ಅಧಿಕಾರಿಗಳ ಜೊತೆ ನಡೆದ ಸಭೆಯಲ್ಲಿ ಮಾತನಾಡಿದ ಅವರು,
ಹಿರಿಕಳಲೆ ಗ್ರಾಮದಲ್ಲಿ 20ಕ್ಕೂ ಹೆಚ್ಚಿನ ಸೋಂಕಿತರು ಕಂಡುಬಂದಿದ್ದು ಗ್ರಾಮವನ್ನು ಸೀಲ್ ಡೌನ್ ಮಾಡಿ ಕಂಟೋನ್ಮೆಂಟ್ ಜೋನ್ ಎಂದು ಘೋಷಿಸಲಾಗಿದೆ ಎಂದು ತಿಳಿಸಿದರು.
ಗ್ರಾಮೀಣ ಪ್ರದೇಶದ ಜನರು ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಮಾಸ್ಕ್ ಧರಿಸಿಕೊಂಡು, ಸ್ಯಾನಿಟೈಸರ್ ನಲ್ಲಿ ಕೈತೊಳೆದು ಸಾಮಾಜಿಕ ಅಂತರದೊಂದಿಗೆ ಸೋಂಕು ಹರಡುವುದನ್ನು ನಿಯಂತ್ರಿಸಲು ತಾಲ್ಲೂಕು ಆಡಳಿತದೊಂದಿಗೆ ಸಹಕರಿಸಬೇಕು ಎಂದು ಮಾಡಿದರು.
ಪ್ರಾಣವಾಯು ಆಕ್ಸಿಜನ್ ಮತ್ತು ರೆಡಮಿಸಿವರ್ ಲಸಿಕೆ ದಾಸ್ತಾನಿನ ಬಗ್ಗೆ ಮಾಹಿತಿ ಪಡೆದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಎಂ.ಶಿವಮೂರ್ತಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಮಧುಸೂದನ್ ಮತ್ತು ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಎಂ.ಎಸ್.ಜಯಂತ್ ಸಚಿವರ ಸಮಾಲೋಚನೆಯಲ್ಲಿ ಭಾಗವಹಿಸಿದರು.

LEAVE A REPLY

Please enter your comment!
Please enter your name here