ಆಕ್ಸಿಜನ್ ಪ್ಲಾಂಟ್ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ಸಲ್ಲಿಸಿದ ಜಿಲ್ಲಾ ಉಸ್ತುವಾರಿ ಸಚಿವರು

0
78

ಮಂಡ್ಯ.ಮೇ.12 – ರಾಜ್ಯದಲ್ಲಿ ಮೊಟ್ಟಮೊದಲ ಬಾರಿಗೆ ಮಂಡ್ಯದಲ್ಲಿ ಆಕ್ಸಿಜನ್ ಪ್ಲಾಂಟ್ ಸ್ಥಾಪನೆಗೆ ಸರ್ಕಾರದಿಂದ ಅನುಮತಿ ನೀಡಿದ್ದು, ಶೀಘ್ರದಲ್ಲಿ ಆಕ್ಸಿಜನ್ ಘಟಕ ಆರಂಭಗೊಳ್ಳಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸಿ ನಾರಾಯಣಗೌಡ ಹೇಳಿದರು.
ಮಂಡ್ಯದ ಮಿಮ್ಸ್ ಬಳಿ ಆಕ್ಸಿಜನ್ ಪ್ಲಾಂಟ್ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಸರ್ಕಾರ ಮಂಡ್ಯ ಹಾಗೂ ಮಳವಳ್ಳಿ ಯಲ್ಲಿ ಆಕ್ಸಿಜನ್ ಪ್ಲಾಂಟ್ ಗೆ ಅವಕಾಶ ನೀಡಿದೆ ಎಂದರು.
ಇಷ್ಟು ದಿನ ಬೇರೆ ಕಡೆಯಿಂದ ಆಕ್ಸಿಜನ್ ತರಿಸಿಕೊಳ್ತಿದ್ದೆವು ಮುಂದೆ ಈ ಸಮಸ್ಯೆ ಸಂಭವಿಸುವುದಿಲ್ಲ, ಈ ನಿಟ್ಟಿನಲ್ಲಿ ನಮ್ಮ ಪ್ರತಿ ತಾಲ್ಲೂಕಿನಲ್ಲೂ ಆಕ್ಸಿಜನ್ ಪ್ಲಾಂಟ್ ನಿರ್ಮಾಣವಾಗಬೇಕು ಎಂದರು.
ಆಕ್ಸಿಜನ್ ಸಮಸ್ಯೆಗಳ ಸರಿದೂಗಿಸಲು, ಆಕ್ಸಿಜನ್ ಬೆಡ್ ಸಮಸ್ಯೆ ಸರಿಪಡಿಸಲು ಬಸ್ ನಲ್ಲಿ 6 ರಿಂದ 8 ಜನಕ್ಕೆ ಆಕ್ಸಿಜನ್ ಕೊಡುವ ಹೊಸ ಪ್ಲಾನ್ ಮಾಡಲಾಗುತ್ತಿದೆ ಎಂದರು.
ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳು ಈಗಾಗಲೇ ಚಾಲನೆ ನೀಡಿದ್ದು, ಇದನ್ನು ಜಿಲ್ಲೆಯಲ್ಲಿ ಜಾರಿಗೆ ತರಲು ಸಿಎಂ ಜೊತೆ ಮಾತನಾಡಿ ಮನವಿ ಮಾಡಲಾಗಿದೆ ಶೀಘ್ರವಾಗಿ ಈ ಯೋಜನೆ ಜಾರಿಗೆ ಬರುತ್ತದೆ ಎಂದರು.
ಎಲ್ಲಾರು ಸಹ ಕಡ್ಡಾಯವಾಗಿ ಕೊರೊನಾ ನಿಯಮ ಪಾಲನೆ ಮಾಡಿ ಎಂದು ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ ಶಾಸಕ ಎಂ.ಶ್ರೀನಿವಾಸ್, ವಿಧಾನ ಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ, ನಗರಸಭೆ ಅಧ್ಯಕ್ಷ ಮಂಜು, ಮಿಮ್ಸ್ ನಿರ್ದೇಶಕ ಡಾ.ಹರೀಶ್ ಭಾಗಿಯಾಗಿದ್ದರು.

LEAVE A REPLY

Please enter your comment!
Please enter your name here