ಅಣಜಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ

0
82

ದಾವಣಗೆರೆ ಮೇ 13.ದಾವಣಗೆರೆ ಜಿಲ್ಲೆ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ ಇವರು ಗುರುವಾರ ಅಣಜಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿಯ ವೈದ್ಯಕೀಯ ಸಿಬ್ಬಂದಿಗಳಿಗೆ ವ್ಯಾಕ್ಸಿನೇಷನ್ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು ಈ ಮೂಲಕ ಜನರನ್ನು ವ್ಯಾಕ್ಸಿನ್ ಪಡೆÉದುಕೊಳ್ಳಲು ಪ್ರೇರೆಪಿಸಬೇಕು ಎಂದು ತಿಳಿಸಿದ ಅವರು,
ಪ್ರಾಥಮಿಕ ಆರೋಗ್ಯ ಕೇಂದ್ರದ ಸ್ವಚ್ಚತೆ ಮತ್ತು ವ್ಯವಸ್ಥೆಗಳನ್ನು ಪರಿಶೀಲಿಸಿ ವ್ಯಾಕ್ಸಿನ್ ಪಡೆದುಕೊಳ್ಳಲು ಜನ ಮೊದಲು ಹಿಂದೇಟು ಹಾಕುವಂತ ಪರಿಸ್ಥಿತಿ ಇತ್ತು. ಈಗಿನ ಸಮಯದಲ್ಲಿ ಇಲ್ಲ ಹಾಗಾಗಿ ಜನರಿಗೆ ಸೂಕ್ತ ತಿಳುವಳಿಕೆ ನೀಡಿ ವ್ಯಾಕ್ಸಿನ್ ಪಡೆದುಕೊಳ್ಳುವಂತೆ ತಿಳಿಸಬೇಕು ಎಂದರು.
ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಆಸ್ಪತ್ರೆಗೆ ಬರುವ ರೋಗಿಗಳು ಮತ್ತು ವ್ಯಾಕ್ಸಿನ್ ಪಡೆಯುವವರ ಬಗ್ಗೆ ಮಾಹಿತಿ ಪಡೆದರು.
ಈ ಸಂದರ್ಭದಲ್ಲಿ ಎಸ್‍ಪಿ ಹನುಮಂತರಾಯ, ಸಿಇಓ ವಿಜಯ್ ಮಹಾಂತೇಶ್ ದಾನಮ್ಮನವರ್, ಉಪವಿಭಾಗಧಿಕಾರಿ ಮಮತ ಹೊಸಗೌಡರ್, ಡಿಹೆಚ್‍ಒ ಡಾ.ನಾಗರಾಜ್, ಆಸ್ಪತ್ರೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here