ಆಕ್ಸಿಮೀಟರ್‍ಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡಿದರೆ ಜಪ್ತಿ, ದಂಡ : ಎಚ್ಚರಿಕೆ

0
95

ದಾವಣಗೆರೆ ಮೇ 13 ಕೋವಿಡ್ ರೋಗಿಗಳಿಗೆ ಆಕ್ಸಿಮೀಟರ್‍ಗಳು ಅತ್ಯವಶ್ಯಕವಿರುವ ಸಂದರ್ಭವನ್ನು ದುರುಪಯೋಗ ಮಾಡಿಕೊಂಡು ಆಕ್ಸಿಮೀಟರ್‍ಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡಿದಲ್ಲಿ ಅಂತಹವರ ವಿರುದ್ಧ ತೀವ್ರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಕಾನೂನು ಮಾಪನಶಾಸ್ತ್ರ ಸಹಾಯಕ ನಿಯಂತ್ರಕರಾದ ಹೆಚ್.ಎಸ್. ರಾಜು ಎಚ್ಚರಿಕೆ ನೀಡಿದ್ದಾರೆ.
ಕೋವಿಡ್ ಸೋಂಕು ಸಂದರ್ಭದಲ್ಲಿ ಆಕ್ಸಿಮೀಟರ್‍ಗಳು ಅತ್ಯವಶ್ಯಕವಿರುವ ಸಂದರ್ಭವನ್ನು ದುರುಪಯೋಗ ಮಾಡಿಕೊಂಡು ನಿಗದಿತ ದರಕ್ಕಿಂತ ಹೆಚ್ಚಿನ ದರದಲ್ಲಿ ಮಾರಾಟ ಮಾಡುವ ಮೂಲಕ ಶೋಷಿಸಿದಲ್ಲಿ ನಿಯಾಮಾನುಸಾರ ಘೋಷಣೆಗಳಿಲ್ಲದ ಆಕ್ಸಿಮೀಟರ್‍ಗಳನ್ನು ಜಪ್ತಿ ಮಾಡುವುದರ ಜೊತೆಗೆ ದಂಡ ವಿಧಿಸಲಾಗುವುದು. ಪ್ಯಾಕೆಟ್‍ಗಳ ಮೇಲೆ ಎಂಆರ್‍ಪಿ ಮುದ್ರಿತವಾಗಿದ್ದರೂ ಸಹ ಹೆಚ್ಚಿನ ಬೆಲೆಗೆ ಮಾರಾಟ ಮಾಡುವವರ ಬಗ್ಗೆ ಈಗಾಗಲೇ ತೀವ್ರ ಕಾನೂನು ಕ್ರಮ ಜರುಗಿಸಲಾಗುತ್ತಿದೆ.
ನ್ಯಾಯಬೆಲೆ ಅಂಗಡಿಗಳು ಅನಧಿಕೃತ ತೂಕ/ಅಳತೆಗಳನ್ನು ಉಪಯೋಗಿಸಿ ಸಾರ್ವಜನಿಕರಿಗೆ ಮೋಸ ಮಾಡುವುದು ಕಂಡುಬಂದಲ್ಲಿ, ಅಂತಹವರ ವಿರುದ್ಧ ಮೊಕದ್ದಮೆ ದಾಖಲಿಸಿ, ಲೈಸೆನ್ಸ್ ರದ್ದತಿಗೆ ಶಿಫಾರಸ್ಸು ಮಾಡಲಾಗುವುದು, ಈಗಾಗಲೆ ನಿಯಮಿತವಾಗಿ ನ್ಯಾಯಬೆಲೆ ಅಂಗಡಿಗಳು ಹಾಗೂ ಇತರೆ ಅಂಗಡಿಗಳಿಗೆ ಆಕಸ್ಮಿಕ ಭೇಟಿ ನೀಡಿ ಪರಿಶೀಲನೆ ನಡೆಸುವ ಕಾರ್ಯ ಪ್ರಾರಂಭಿಸಲಾಗಿದೆ. ಇಂತಹ ಯಾವುದೇ ದೂರುಗಳಿಗೆ 8050024760 ಕ್ಕೆ ಸಂಪರ್ಕಿಸಬಹುದು ಎಂದು ಕಾನೂನು ಮಾಪನಶಾಸ್ತ್ರ ಸಹಾಯಕ ನಿಯಂತ್ರಕರಾದ ಹೆಚ್.ಎಸ್.ರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here