ಆದಿ ಶಂಕರಾಚಾರ್ಯರ ಜಯಂತಿ ಸರಳ ಆಚರಣೆ

0
88

ಬಾಗಲಕೋಟೆ : ಮೇ 17 : ಜಿಲ್ಲಾಡಳಿತದ ವತಿಯಿಂದ ಜಗದ್ಗುರು ಶ್ರೀ ಆದಿ ಶಂಕರಾಚಾರ್ಯರ ಜಯಂತಿಯನ್ನು ಕೋವಿಡ್ ಹಿನ್ನಲೆಯಲ್ಲಿ ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಸೋಮವಾರ ಸರಳವಾಗಿ ಆಚರಿಸಲಾಯಿತು.

ಆದಿ ಶಂಕರಾಚಾರ್ಯರ ಭಾವಚಿತ್ರಕ್ಕೆ ಸಂಸದ ಪಿ.ಸಿ.ಗದ್ದಿಗೌಡರ, ಶಾಸಕ ವೀರಣ್ಣ ಚರಂತಿಮಠ, ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ ಪೂಜೆ ಸಲ್ಲಿಸಿ ಪುಷ್ಪ ಅರ್ಪಿಸಿದರು. ಇದೇ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕಿ ಎನ್.ಹೇಮಾವತಿ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಜಯಶ್ರೀ ಎಮ್ಮಿ, ಸಮಾಜದ ಮುಖಂಡರಾದ ರವಿ ಮಠ, ಸುನೀಲ ಮಠ ಸೇರಿದಂತೆ ಇತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here