ಆದ್ಯ ಜಗದ್ಗುರು ಶ್ರೀ ಶಂಕರಾಚಾರ್ಯ ಜಯಂತಿ ಆಚರಣೆ

0
83

ಧಾರವಾಡ.ಮೇ.17: ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ , ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕøತ ಇಲಾಖೆ ವತಿಯಿಂದ ಇಂದು (ಮೇ.17) ಬೆಳಿಗ್ಗೆ ಆದ್ಯ ಜಗದ್ಗುರು ಶ್ರೀ ಶಂಕರಾಚಾರ್ಯ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.

ಕೇಂದ್ರ ಸಂಸದೀಯ ವ್ಯವಹಾರಗಳ, ಕಲ್ಲಿದ್ದಲು ಮತ್ತು ಗಣಿ ಸಚಿವರಾದ ಪ್ರಲ್ಹಾದ ಜೋಶಿ ಅವರು ಆದ್ಯ ಜಗದ್ಗುರು ಶ್ರೀ ಶಂಕರಾಚಾರ್ಯ ಭಾವಚಿತ್ರಕ್ಕೆ ಪುಷ್ಪಾಱಪಣೆ ಮಾಡಿ ನಮಿಸಿದರು.

ಈ ಸಂದರ್ಭದಲ್ಲಿ ವಿಧಾನಸಭೆ ಶಾಸಕ ಅರವಿಂದ ಬೆಲ್ಲದ, ಜಿಲ್ಲಾಧಿಕಾರಿ ನಿತೇಶ ಪಾಟೀಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ಕೃಷ್ಣಕಾಂತ, ಕನ್ನಡ ಮತ್ತು ಸಂಸ್ಕೃತ ಇಲಾಖೆಯ ಸಹಾಯಕ ನಿರ್ದೇಶಕಿ ಮಂಜುಳಾ ಯಲಿಗಾರ, ವಾರ್ತಾ ಇಲಾಖೆಯ ಸಹಾಯಕ ವಾರ್ತಾಧಿಕಾರಿ ಡಾ. ಸುರೇಶ ಹಿರೇಮಠ ಸೇರಿದಂತೆ ಇಲಾಖೆ ಸಿಬ್ಬಂದಿ ಭಾಗವಹಿಸಿದ್ದರು.
ನಂತರ ಸಮಾಜ ಗಣ್ಯರಾದ ರಂಗಣ್ಣಾ ಕುಲಕರ್ಣಿ ಹಾಗೂ ಇತರರು ಶ್ರೀ ಶಂಕರಾಚಾರ್ಯರ ಭಾವಚಿತ್ರಕ್ಕೆ ಪುಷ್ರ್ಪಾಪಣೆ ಮಾಡಿದರು.

LEAVE A REPLY

Please enter your comment!
Please enter your name here