ಜಿಲ್ಲೆಗೆ ಬೆಂಗಳೂರಿನ ಇಂಟರಪ್ರೀನ್ಸ್ ಆರ್ಗನೈಜೆಷನ್ ದಿಂದ 25 ಆಕ್ಸಿಜನ್ ಕಾನ್ಸನ್ ಟ್ರೇಟರ್ ಗಳ ಕೊಡುಗೆ; ಜಿಲ್ಲಾಡಳಿತಕ್ಕೆ ಶಾಸಕ ಅರವಿಂದ ಬೆಲ್ಲದ ಅವರಿಂದ ಹಸ್ತಾಂತರ

0
83

ಧಾರವಾಡ.ಮೇ.22: ಬೆಂಗಳೂರಿನ ಇಂಟರಪ್ರೀನ್ಸ್ ಆರ್ಗನೈಜೆಷನ್ ಅವರು ನೀಡಿದ 25 ಆಕ್ಸಿಜನ್ ಕಾನ್ಸನ್ ಟ್ರೇಟರ್ ಗಳನ್ನು ಇಂದು ಸಂಜೆ ಧಾರವಾಡ ಸರ್ಕಿಟ್ ಹಾಸ್ ಮುಂಭಾಗದಲ್ಲಿ ಶಾಸಕ ಅರವಿಂದ ಬೆಲ್ಲದ ಅವರು ಜಿಲ್ಲಾಡಳಿತಕ್ಕೆ ಹಸ್ತಾಂತರಿಸಿದರು.

ನಂತರ ಅವರು ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದರು.ಜಿಲ್ಲೆಗೆ ಕೋವಿಡ್ ನಿಯಂತ್ರಣಕ್ಕಾಗಿ ಸರಕಾರದೊಂದಿಗೆ ವಿವಿಧ ಸಂಘ ಸಂಸ್ಥೆಗಳು ಸಹಾಯಹಸ್ತ ನೀಡುತ್ತಿವೆ. ಇದು ಸಂತೋಷದ ವಿಷಯವಾಗಿದೆ.

ಬೆಂಗಳೂರಿನ ಇಂಟರ್ ಪ್ರೀನ್ಸ್ ಆರ್ಗನೈಜೆಷನ್ ಮುಖ್ಯಸ್ಥ ರಿಷಿಯವರು ತಾವಾಗೀಯೇ ಬಂದು ಜಿಲ್ಲೆಗೆ 25 ಆಕ್ಸಿಜನ್ ಕಾನ್ಸನ್ ಟ್ರೇಟರ್ ಗಳನ್ನು ದೊಡ್ಡ ಪ್ರಮಾಣದ ಕೂಡುಗೆಯಾಗಿ ಜಿಲ್ಲೆಗೆ ನೀಡಿದ್ದಾರೆ. ಮುಂದೆಯೂ ವೈದ್ಯಕೀಯಕ್ಕೆ ಅಗತ್ಯವಿರುವ ಸಹಾಯವನ್ನು ಮಾಡಲು ಸಿದ್ಧವಿರುವದಾಗಿ ಅವರು ತಿಳಿಸಿದ್ದಾರೆ.
ಯಾವುದೇ ಫಲಾಪೇಕ್ಷೆ ಬಯಸದೆ ನಿಸ್ವಾರ್ಥ ಸೇವೆಯನ್ನು ನೀಡಿದ ಸಂಸ್ಥೆಗೆ ಶಾಸಕರು ಅಭಿನಂದನೆಗಳನ್ನು ಸಲ್ಲಿಸಿದರು.

ಅದೇ ರೀತಿ ಅಶ್ವೀನ ಮಹೇಶ ಹಾಗೂ ಮಿತ್ರರು ಜಿಲ್ಲೆಗೆ ಅಗತ್ಯವಿರುವ ಆಕ್ಸಿಜನ್ ಸಿಲೆಂಡರಗಳನ್ನು ಕೂಡುಗೆಯಾಗಿ ನೀಡಿದ್ದಾರೆ. ಅವರ ಸಂಸ್ಥೆಗೂ ಜಿಲ್ಲೆಯ ಪರವಾಗಿ ಶಾಸಕರು ಅಭಿನಂದನೆಗಳನ್ನು ಸಲ್ಲಿಸಿದರು.

ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಮಾತನಾಡಿ, ಶಾಸಕರದ ಅರವಿಂದ ಬೆಲ್ಲದ ಅವರ ಸಹಕಾರದಿಂದ ಬೆಂಗಳೂರಿನ ಇಂಟರ್ ಪ್ರೀನ್ಸ್ ಆರ್ಗನೈಜೆಷನ್ ಸಂಸ್ಥೆಯು 25 ಆಕ್ಸಿಜನ್ ಕಾನ್ಸನ್ ಟ್ರೇಟರ್ ಗಳನ್ನು ಧಾರವಾಡ ಜಿಲ್ಲಾಡಳಿತಕ್ಕೆ ಹಸ್ತಾಂತರಿಸಿದ್ದಾರೆ. ಮುಂದಿನ ದಿನಗಳಲ್ಲಿಯೂ ಅಗತ್ಯ ಸಹಾಯ ಮಾಡುವುದಾಗಿ ಹೇಳಿದ್ದಾರೆ. ಅವರು ನೀಡಿರುವ ಕಾನ್ಸನ್ ಟ್ರೇಟರ್ ಗಳಲ್ಲಿ 15 ಜಿಲ್ಲಾಸ್ಪತ್ರೆಗೆ ಮತ್ತು 10 ನ್ನು ವಿವಿಧ ಕೋವಿಡ್ ಕಾಳಜಿ (ಕೇರ್ ಸೆಂಟರ) ಕೇಂದ್ರಗಳಿಗೆ ನೀಡಲಾಗುವುದು ಎಂದು ಅವರು ಹೇಳಿದರು.

ಜಿಲ್ಲೆಯ ಎಲ್ಲ ಕೋವಿಡ್ ಕೇರ್ ಸೆಂಟರ್ ಗಳಲ್ಲಿ 10 ಆಕ್ಸಿಜನ್ ಕಾನ್ಸನ್ ಟ್ರೇಟರ್ ಗಳನ್ನು ಅಳವಡಿಸಲಾಗಿದೆ.
ಆದ್ದರಿಂದ ಜಿಲ್ಲೆಯ ನಾಗರಿಕರು, ತಮ್ಮಲ್ಲಿ ಕೋರೊನಾ ಸೋಂಕು ಕಂಡುಬಂದರೆ ತಕ್ಷಣ ಕೋವಿಡ್ ಕೇರ್ ಸೆಂಟರ್ ಬಂದು ಸೇರಿಕೊಳ್ಳಬೇಕು. ಕೋವಿಡ್ ಕೇರ್ ಸೆಂಟರ್‌ನಲ್ಲಿ ಉಚಿತ ಊಟ, ಔಷಧ, ಆಕ್ಸಿಜನ್ ಗಳನ್ನು ನೀಡಿ ಚಿಕಿತ್ಸೆ ನೀಡಲಾಗುತ್ತದೆ.
ಗ್ರಾಮೀಣ ಭಾಗದಲ್ಲಿ ಸೋಂಕಿತರು ಮನೆಯಲ್ಲಿಯೇ ಇದ್ದು, ಆರೈಕೆ ಪಡೆಯಲು ಪ್ರತ್ಯೇಕವಾದ ರೂಮ್, ಶೌಚಾಲಯ ಇರುವುದು ವಿರಳ. ಹಳ್ಳಿಯಲ್ಲಿರುವ ಸೋಂಕಿತರು ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್ ಗೆ, ದಾಖಲಾಗಿ, ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದರು.
ಗ್ರಾಮೀಣ ಭಾಗದ ಜನರಿಗೆ ಅನುಕೂಲವಾಗುವಂತೆ ಜಿಲ್ಲಾಡಳಿತವು ತಾಲೂಕು, ಹೋಬಳಿ ಹಾಗೂ ಗ್ರಾಮ ಪಂಚಾಯತಿಗಳ ಸಹಕಾರದಲ್ಲಿ ಗ್ರಾಮ ಮಟ್ಟದಲ್ಲಿ ಐಸೋಲೆಷನ್ ಸೆಂಟರ್ ಗಳನ್ನು ಆರಂಭಿಸಿ, ಆಕ್ಸಿಜನ್ ಕಾನ್ಸನ್ ಟ್ರೇಟರ್ ಗಳನ್ನು ನೀಡಲಾಗುತ್ತಿದೆ. ಜಿಲ್ಲೆಯ ಜನರು ಸೋಂಕು ಹರಡದಂತೆ ಮುನ್ನೆಚ್ಚರಿಕೆ ವಹಿಸಿ, ಕೋವಿಡ್ ನಿಯಂತ್ರಿಸಿ, ಶೂನ್ಯಗೊಳಿಸಲು ಜಿಲ್ಲಾಡಳಿತಕ್ಕೆ ಸಹಕಾರ ನೀಡಬೇಕು ಎಂದರು.

ಈ ಸಂದರ್ಭದಲ್ಲಿ ಶಾಸಕರಾದ ಅಮೃತ ದೇಸಾಯಿ, ಮಹಾನಗರ ಪಾಲಿಕೆ ಆಯುಕ್ತ ಡಾ.ಸುರೇಶ ಇಟ್ನಾಳ, ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಉಪವಿಭಾಗಾಧಿಕಾರಿ ಡಾ.ಗೋಪಾಲಕೃಷ್ಣ ಬಿ,
ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಯಶವಂತ ಮದೀನಕರ,
ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಶಿವಕುಮಾರ ಮಾನಕರ,
ಜಿಲ್ಲಾ ಸಮೀಕ್ಷಣಾಧಿಕಾರಿ ಡಾ. ಸುಜಾತಾ ಹಸವಿಮಠ, ಆರ್.ಸಿ.ಎಚ್.ಓ ಡಾ.ಎಸ್.ಎಂ.ಹೊನಕೇರಿ, ನೊಡಲ್ ಅಧಿಕಾರಿ ಡಾ.ಶಶಿ ಪಾಟೀಲ, ತಹಸಿಲ್ದಾರ ಸಂತೋಷ ಬಿರಾದಾರ,
ಎನ್.ಜಿ.ಓ ಪ್ರತಿನಿಧಿಗಳು ಸೇರಿದಂತೆ ಇತರರು ಇದ್ದರು.

LEAVE A REPLY

Please enter your comment!
Please enter your name here