ಜಿಲ್ಲೆಯಲ್ಲಿ ಲಾಕ್‍ಡೌನ್ ಯಶಸ್ವಿ ಗೊಳಿಸಲು ವ್ಯಾಪಕ ಜಾಗೃತಿ, ವಿವಿಧ ಇಲಾಖೆಗಳ ಸಿಬ್ಬಂದಿಗಳನ್ನು ನಿಯೋಜಿಸಿ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರವಿಕುಮಾರ ಸುರಪುರ.

0
88

ಧಾರವಾಡ : ಜಿಲ್ಲೆಯಲ್ಲಿ ಮೇ 24 ರಿಂದ ಜೂನ್ 7ರ ಬೆಳಿಗ್ಗೆ 6 ಗಂಟೆಯವರೆಗೆ ಜಾರಿಯಾಗಿರುವ ಲಾಕ್‍ಡೌನ್ ಯಶಸ್ವಿಗೊಳ್ಳಿಸಲು ಸಾರ್ವಜನಿಕರಲ್ಲಿ ವ್ಯಾಪಕ ಜಾಗೃತಿ ಮೂಡಿಸಬೇಕು ಮತ್ತು ಅರಣ್ಯ, ಅಬಕಾರಿ ಹಾಗೂ ಸಮವಸ್ತ್ರದಲ್ಲಿರುವ ಕೆಎಸ್‍ಆರ್‍ಟಿಸಿ ಸಿಬ್ಬಂದಿಗಳನ್ನು ನಿಯೋಜಿಸಿ, ಲಾಕ್‍ಡೌನ್ ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳಿಸಿ ಯಶಸ್ವಿಗೊಳ್ಳಿಸಬೇಕೆಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ರವಿಕುಮಾರ ಸುರಪುರ ಅವರು ಹೇಳಿದರು.
ಅವರು ಇಂದು ಸಂಜೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಕೋವಿಡ್-19ರ ನಿಯಂತ್ರಣ ಕುರಿತು ಪ್ರಗತಿ ಪರಿಶೀಲನಾ ಸಭೆ ಜರುಗಿಸಿ, ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಮದುವೆ, ಹುಟ್ಟು ಹಬ್ಬ ಆಚರಣೆ, ಗೃಹ ಪ್ರವೇಶದಂತಹ ಕಾರ್ಯಕ್ರಮಗಳನ್ನು ನಿರ್ಬಂಧಿಸಿ, ಜಿಲ್ಲಾಧಿಕಾರಿಗಳು ಈಗಾಗಲೇ ಆದೇಶ ಹೊರಡಿಸಿದ್ದಾರೆ. ಗ್ರಾಮ ಮಟ್ಟದಲ್ಲಿ ಈ ಆದೇಶ ಉಲ್ಲಂಘನೆ ಆಗದಂತೆ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ, ಗ್ರಾಮಲೆಕ್ಕಾಧಿಕಾರಿ ಹಾಗೂ ಗ್ರಾಮಸಹಾಯಕರು ಮುನ್ನೆಚ್ಚರಿಕೆ ವಹಿಸಬೇಕು.
ಲಾಕ್‍ಡೌನ್ ಕಠಿಣ ನಿಯಮಗಳನ್ನು ಉಲ್ಲಂಘಿಸಿ, ಜನ ಸಂಚಾರ ಮಾಡದಂತೆ ಕ್ರಮ ವಹಿಸಲು ಹೆಚ್ಚುವರಿಯಾಗಿ ವಾಹನ ಹಾಗೂ ಸಿಬ್ಬಂದಿಗಳನ್ನು ಬಳಸಿಕೊಂಡು ಲಾಕ್‍ಡೌನ್ ಯಶಸ್ವಿಗೊಳ್ಳಿಸಬೇಕು. ವಾಹನಗಳ ತಪಾಸಣೆ ಹಾಗೂ ಅನಗತ್ಯ ವಾಹನ ಸಂಚಾರಣೆಗಳನ್ನು ನಿಯಂತ್ರಿಸಲು ಅರಣ್ಯ, ಅಬಕಾರಿ ಹಾಗೂ ಸಮವಸ್ತ್ರದಲ್ಲಿರುವ ಕೆಎಸ್‍ಆರ್‍ಟಿಸಿ ಸಿಬ್ಬಂದಿಗಳನ್ನು ನಿಯೋಜಿಸಿ ಕಠಿಣ ಕ್ರಮಕೈಗೊಳ್ಳಬೇಕೆಂದು ಅವರು ನಿರ್ದೇಶಿಸಿದರು.
ಕೋವಿಡ್ ಪಾಸಿಟಿವ್ ಪ್ರಕರಣಗಳು 5 ಕ್ಕಿಂತ ಹೆಚ್ಚು ಕಂಡುಬಂದ ಪ್ರದೇಶಗಳನ್ನು ಸಿಲ್‍ಡೌನ್ ಮಾಡಿ, ಕಂಟೈನ್ಮೇಂಟ್ ಝೋನ್ ಆಗಿ ರೂಪಿಸಬೇಕು. ನಗರದಲ್ಲಿ ಮಹಾನಗರ ಪಾಲಿಕೆ ಹಾಗೂ ಗ್ರಾಮೀಣ ಭಾಗದಲ್ಲಿ ಪಂಚಾಯತ ಅಧಿಕಾರಿಗಳು ಈ ಕುರಿತು ಕ್ರಮವಹಿಸಬೇಕೆಂದು ಅವರು ಹೇಳಿದರು.
ಗ್ರಾಮೀಣ ಭಾಗದಲ್ಲಿ ಗ್ರಾಮ ಪಂಚಾಯತಿಗಳು ಸ್ವಚ್ಚ ಭಾರತ ಅಭಿಯಾನದಡಿ ಖರೀದಿಸಿರುವ ವಾಹನಗಳ ಮೂಲಕ ಹಾಗೂ ಧ್ವನಿವರ್ಧಕಗಳನ್ನು ಬಳಸಿ, ಸಾರ್ವಜನಿಕರಿಗೆ ಮಾಹಿತಿಯನ್ನು ನೀಡಿ, ಜಾಗೃತಗೊಳಿಸಬೇಕು. ಮತ್ತು ಸ್ವಚ್ಚತೆ ಹಾಗೂ ಕೋವಿಡ್ ಮಾರ್ಗಸೂಚಿಗಳನ್ನು ತಿಳಿಸುವ ರೇಕಾರ್ಡೆಡ್ ಪ್ರಕಟಣೆಗಳನ್ನು ಬಳಸಬೇಕು. ಮತ್ತು ಇದನ್ನು ಮಹಾನಗರ ಪಾಲಿಕೆ ಸೇರಿದಂತೆ ಎಲ್ಲ ನಗರ ಪ್ರದೇಶಗಳಲ್ಲೂ ಬಳಸಲು ಕ್ರಮಕೈಗೊಳ್ಳಬೇಕೆಂದು ಅವರು ತಿಳಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ನಿತೇಶ ಪಾಟೀಲ, ನಗರ ಪೊಲೀಸ ಆಯುಕ್ತ ಲಾಬುರಾಮ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಸುಶೀಲಾ.ಬಿ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ಕೃಷ್ಣಕಾಂತ, ಮಹಾನಗರ ಪಾಲಿಕೆ ಆಯುಕ್ತ ಡಾ.ಸುರೇಶ ಇಟ್ನಾಳ, ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಉಪ ವಿಭಾಗಾಧಿಕಾರಿ ಡಾ.ಗೋಪಾಲಕೃಷ್ಣ.ಬಿ, ಸ್ಮಾರ್ಟ್‍ಸಿಟಿ ಯೋಜನೆ ವ್ಯವಸ್ಥಾಪಕ ನಿರ್ದೇಶಕ ಶಕೀಲ್ ಅಹ್ಮದ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here