ಕೋವಿಡ್-19 ಜನಜಾಗೃತಿ ರಥ ಜಿಲ್ಲೆಯಾದ್ಯಂತ ಸಂಚಾರ,ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ ಚಾಲನೆ,

0
91

ಬಳ್ಳಾರಿ,ಮೇ 25: ಬಳ್ಳಾರಿ ಮತ್ತು ವಿಜಯನಗರ ಜಿಲ್ಲಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಅಜಿಮ್ ಪ್ರೇಮ್‍ಜಿ ಫೌಂಡೇಶನ್ ಸಹಯೋಗದೊಂದಿಗೆ ಕೋವಿಡ್ ಜನಜಾಗೃತಿಯ ಜಾಗೃತಿ ರಥಕ್ಕೆ ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಅವರು ಜಿಲ್ಲಾಧಿಕಾರಿಗಳ ಕಾರ್ಯಾಲಯದ ಆವರಣದಲ್ಲಿ ಮಂಗಳವಾರ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ ಅವರು ಜಾಗೃತಿ ರಥವು ಕರೋನಾ ಮಾಹಿತಿಯ ಭಿತ್ತಿಪತ್ರವನ್ನು ಹೊಂದಿದ್ದು, ಮೈಕ್ ಮೂಲಕ ನಗರ ಮತ್ತು ಗ್ರಾಮೀಣ ಭಾಗದಲ್ಲಿ ಮುಂದಿನ ಒಂದು ತಿಂಗಳ ಕಾಲ ಜಿಲ್ಲೆಯಾದ್ಯಂತ ಸಂಚರಿಸಲಿದೆ ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಹೆಚ್.ಎಲ್.ಜನಾರ್ಧನ್ ಅವರು ಮಾತನಾಡಿ, ಕೋವಿಡ್ ಪ್ರಕರಣಗಳು ಹೆಚ್ಚಾಗಿ ಕಂಡು ಬರುವ ಪ್ರದೇಶಗಳಲ್ಲಿ ವಾಹನ ಮೂಲಕ ಜಾಗೃತಿ ಮಾಡಿಸಲಾಗುತ್ತದೆ. ಕೋವಿಡ್ ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದು. ಸರ್ಕಾರ ಹೊರಡಿಸಿದ ಕೋವಿಡ್-19 ಮಾರ್ಗಸೂಚಿ ಪಾಲನೆಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುತ್ತದೆ. ಮೊದಲ ನಾಲ್ಕು ದಿನ ಬಳ್ಳಾರಿ ನಗರದಲ್ಲಿ ಮತ್ತು ನಗರ ಪ್ರದೇಶದ ವ್ಯಾಪ್ತಿಯಲ್ಲಿ ಸ್ಥಾಪಿಸಿರುವ 16 ಕೋವಿಡ್-19 ಸಲಹಾ ಕೇಂದ್ರದ ವ್ಯಾಪ್ತಿಯಲ್ಲಿ ಕೋವಿಡ್ 19 ಕುರಿತು ಜಾಗೃತಿ ಮೂಡಿಸಲಾಗುತ್ತದೆ. ನಂತರದ ದಿನಗಳಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ ಪ್ರಕರಣಗಳು ಜಾಸ್ತಿ ಇರುವ ಗ್ರಾಮಗಳಲ್ಲಿ ಕೋವಿಡ್ ಬಗ್ಗೆ ಅರಿವು ಮೂಡಿಸಲಾಗುತ್ತದೆ ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ದಾಸಪ್ಪನವರ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶಾಂತಮ್ಮ, ಅಜಿಮ್ ಪ್ರೇಮ್‍ಜೀ ಸಂಸ್ಥೆಯ ಜಿಲ್ಲಾ ವ್ಯವಸ್ಥಾಪಕ ಉದಯ್ ಕುಮಾರ್, ಅಜಿಮ್ ಪ್ರೇಮ್ ಜೀ ಸಂಸ್ಥೆಯ ಸಿಬ್ಬಂದಿ ಶ್ವೇತಾ, ಮೆಹಬೂಬ್ ಪೀರಾ ಸೇರಿದಂತೆ ಇತರರು ಇದ್ದರು.

LEAVE A REPLY

Please enter your comment!
Please enter your name here