ವಿವಿಧ ಗ್ರಾಮ ಪಂಚಾಯತಿಗಳಲ್ಲಿ ಕೋವಿಡ್-19 ಸಂಬಂಧ ಸಭೆ

0
124

ಮಡಿಕೇರಿ -ಮಡಿಕೇರಿ ತಾಲೂಕಿನ ಕುಂದಚೇರಿ, ಕರಿಕೆ, ಭಾಗಮಂಡಲ, ಆಯ್ಯಂಗೆರಿ, ಬಲ್ಲಮಾವಟಿ, ಎಮ್ಮೆಮಾಡು, ಕಕ್ಕಬ್ಬೆ, ನಾಪೋಕ್ಲು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕೋವಿಡ್-19 ಮಹಾಮಾರಿಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಶಾಸಕರಾದ ಕೆ.ಜಿ.ಬೋಪಯ್ಯ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ಸಭೆ ನಡೆಯಿತು.
ಆಯಾಯ ಪಂಚಾಯ್ತಿ ವ್ಯಾಪ್ತಿಯಲ್ಲಿ ತಹಸೀಲ್ದಾರ್, ತಾಲೂಕು ಪಂಚಾಯತಿ ಆಡಳಿತಧಿಕಾರಿಗಳು, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ, ತಾಲ್ಲೂಕು ವೈದ್ಯಧಿಕಾರಿ, ನೋಡಲ್ ಅಧಿಕಾರಿಗಳು, ಪೆÇಲೀಸ್ ಅಧಿಕಾರಿಗಳು, ಸ್ಥಳೀಯ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ, ಕೋವಿಡ್ ಜಾಗೃತಿ ಸಮಿತಿ ಸದಸ್ಯರು, ಗ್ರಾಮ ಪಂಚಾಯ್ತಿ ಸದಸ್ಯರು, ಆಶಾ ಕಾರ್ಯಕರ್ತರು ಹಾಗೂ ಆರೋಗ್ಯ ಕಾರ್ಯಕರ್ತರುಗಳ ಸಮ್ಮುಖದಲ್ಲಿ ಸಭೆ ನಡೆಸಿ, ಕೋವಿಡ್-19 ಮಹಾಮಾರಿಯನ್ನು ಹತೋಟಿಗೆ ತರುವ ನಿಟ್ಟಿನಲ್ಲಿ ತೆಗೆದುಕೊಳ್ಳಬೇಕಾದ ಕ್ರಮಗಳು ಮತ್ತು ಸ್ಥಳೀಯ ಸಮಸ್ಯೆಗಳ ಬಗ್ಗೆ ಚರ್ಚಿಸಿ, ಉಪಯುಕ್ತ ಸಲಹೆ ಸೂಚನೆಗಳನ್ನು ನೀಡಲಾಯಿತು. ಹಾಗೆಯೇ ಕೋವಿಡ್ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಯಿತು.

LEAVE A REPLY

Please enter your comment!
Please enter your name here