ಸಿಡಿ ಪ್ರಕರಣದ ಆರೋಪಿ ರಮೇಶ್ ಜಾರಕಿಹೊಳಿ ಅವರನ್ನು ಬಂಧಿಸಿ, ಸಂತ್ರಸ್ಥೆಗೆ ನ್ಯಾಯ ಒದಗಿಸಿ. ಕಾಂಗ್ರೇಸ್ ಗ್ರಾಮೀಣ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಆಶಾಲತಾ ಸೋಮಪ್ಪ ಆರೋಪ.

0
83

ವರದಿ:-ರಾಜು ಪಾಳೇಗಾರ್
ಬಳ್ಳಾರಿ ಜಿಲ್ಲೆಯ ಸಂಡೂರು ನಗರದಲ್ಲಿ 31.05.2021 ರಂದು ಗ್ರಾಮೀಣ ಮಹಿಳಾ ಘಟಕದ ಪದಾಧಿಕಾರಿಗಳು ತಹಶೀಲ್ದಾರ್ ಕಚೇರಿಯಲ್ಲಿ ಮನವಿಯನ್ನು ಸಲ್ಲಿಸುತ್ತಾ ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಸಂತ್ರಸ್ತ ಯುವತಿಗೆ ನ್ಯಾಯ ದೊರಕಿಸಿಕೊಡುವ ಬದಲು ಆರೋಪಿ ಸ್ಥಾನದಲ್ಲಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಬೆಂಬಲಕ್ಕೆ ನಿಂತಿದ್ದಾರೆ ಎಂದು ಗ್ರಾಮೀಣ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಆಶಾಲತಾ ಸೋಮಪ್ಪ ಆರೋಪಿಸಿದರು.

ಸಂಡೂರು ಕಾಂಗ್ರೆಸ್ ಮಹಿಳಾ ಘಟಕದವತಿಯಿಂದ ಸಿಡಿ ಪ್ರಕರಣದಲ್ಲಿ ಸಂತ್ರಸ್ತೆಯ ಪರವಾಗಿ ರಾಜ್ಯ ಮಹಿಳಾ ಆಯೋಗಕ್ಕೆ ತಹಶೀಲ್ದಾರ್ ಕಛೇರಿ ಮೂಲಕ ಮನವಿ ಸಲ್ಲಿಸಿ ಮಾತನಾಡಿದರು.

ಮಾಜಿ ಮಂತ್ರಿ ಜಾರಕಿಹೊಳಿಯವರು ಸಿಡಿ ಯಲ್ಲಿರುವುದು ನಾನೇ ಎಂದು ಒಪ್ಪಿಕೊಂಡಿದ್ದಾರೆ, ಸಂತ್ರಸ್ತ ಯುವತಿ ವಿಶೇಷ ತನಿಖಾ ತಂಡದ ಎದುರು ಹೇಳಿಕೆ ನೀಡಿ ಒಂದು ತಿಂಗಳು ಕಳೆದರೂ ಆರೋಪಿಯನ್ನು ಬಂಧಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದರು. ಈ ಕುರಿತು ರಾಜ್ಯಪಾಲರಿಗೆ ಕೂಡ ಮನವಿ ಸಲ್ಲಿಸಲಾಗುವುದು ಎಂದರು.

ಸಂಡೂರು ತಹಶೀಲ್ದಾರ್ ಕಚೇರಿಯ ಶಿರಸ್ತೇದಾರ್ ಪ್ರಿಯದರ್ಶಿನಿ ಅವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷೆ ಅನಿತಾ ವಸಂತ್ ಕುಮಾರ್ ಮಾಜಿ ಉಪಾಧ್ಯಕ್ಷೆ ಸುಮಿತ್ರಮ್ಮ ಹೊಳಗುಂದಿ ರೈತರ ಸೇವಾ ಸಹಕಾರ ಸಂಘದ ನಿರ್ದೇಶಕಿ ಶೋಭಾ ಉಪ್ಪಾರಹಳ್ಳಿ , ಸುಧಾ ವೆಂಕಟೇಶ್, ನಿರ್ಮಲಾ, ಈಶ್ವರಿ, ಪರಿಮಳ ಪೂರ್ಣಿಮಾ, ಶಕೀಲಾ ಬಾನು ಇತರರಿದ್ದರು

LEAVE A REPLY

Please enter your comment!
Please enter your name here