ಕೋವಿಡ್ ಮಾರ್ಗಸೂಚಿ ಅನುಸರಿಸಿ ನರೇಗಾ ಕೆಲಸ ಮಾಡಲು ಕೂಲಿಕಾರ್ಮಿಕರಿಗೆ ಆಯುಕ್ತ ಅನಿರುದ್ಧ್ ಶ್ರವಣ್ ಸಲಹೆ

0
89

ಹೊಸಪೇಟೆ(ವಿಜಯನಗರ),ಜೂ.05 : ಪರಿಸರ ಉಳಿಸುವುದರ ಜೊತೆಗೆ ಗಿಡಗಳನ್ನು ನೆಡುವುದರ ಮೂಲಕ ಪರಿಸರವನ್ನು ಬೆಳೆಸಲು ಎಲ್ಲರೂ ಕೈ ಜೋಡಿಸಿ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಗ್ರಾಮೀಣಾಭಿವೃದ್ಧಿ ಆಯುಕ್ತರು ಹಾಗೂ ವಿಜಯನಗರ ಜಿಲ್ಲೆಯ ವಿಶೇಷಾಧಿಕಾರಿಗಳಾದ ಅನಿರುದ್ಧ್ ಶ್ರವಣ್ ಅವರು ಹೇಳಿದರು.
ಪರಿಸರ ದಿನಾಚರಣೆ ನಿಮಿತ್ತ ಹೊಸಪೇಟೆ ತಾಲೂಕಿನ, ಮಲಪನಗುಡಿ ಗ್ರಾಮ ಪಂಚಾಯಿತಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನರೇಗಾ ಯೋಜನೆಯಡಿ ಸಸಿ ನೆಡುವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕೋವಿಡ್ ಎರಡನೇ ಅಲೆ ಮಧ್ಯದಲ್ಲಿಯೂ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯಲ್ಲಿ ನರೇಗಾ ಯೋಜನೆಯನ್ನು ಉತ್ತಮವಾಗಿ ನಿರ್ವಹಿಸುತ್ತಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಕೋವಿಡ್ ಹಿನ್ನೆಲೆಯಲ್ಲಿ ನರೇಗಾ ಕೂಲಿಕಾರರು ಕೋವಿಡ್ ಮಾರ್ಗಸೂಚಿಗಳ ಅನುಸರಿಸಿ, ಕೆಲಸ ನಿರ್ವಹಿಸಿ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಪಅರಣ್ಯ ಸಂರಕ್ಷಣಾಧಿಕಾರಿ ಸಿದ್ರಾಮಪ್ಪ ಚಳಕಾಪೂರೆ, ಹೊಸಪೇಟೆ ಉಪ ವಿಭಾಗದ ಸಹಾಯಕ ಆಯುಕ್ತರಾದ ಸಿದ್ದರಾಮೇಶ್ವರ, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ವಿ.ಶಿವಪ್ಪ, ಉಪಾಧ್ಯಕ್ಷರಾದ ವಿರೂಪಾಕ್ಷ ನಾಯಕ, ತಾಪಂ ಇಒ ಹೆಚ್ ವಿಶ್ವನಾಥ್, ಹೊಸಪೇಟೆ ತಾಲೂಕು ನರೇಗಾ ಸಹಾಯಕ ನಿರ್ದೇಶಕರಾದ ಎಂ.ಉಮೇಶ್, ಆರ್‍ಎಫ್‍ಓಗಳಾದ (ಖಈಔ) ರಾಘವೇಂದ್ರ ಹಾಗೂ ಉಷಾ, ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಮಂಜುನಾಥ, ಮಲಪನಗುಡಿ ಗ್ರಾಮ ಪಂಚಾಯಿತಿ ಸದಸ್ಯರುಗಳು ಹಾಗೂ ನರೇಗಾ ಕೂಲಿಕಾರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here