ವಿಕಲಚೇತನರು ಹಾಗೂ ಅವರ ಆರೈಕೆದಾರರ ಲಸಿಕಾ ಅಭಿಯಾನಕ್ಕೆ ಸಚಿವೆ ಶಶಿಕಲಾ ಜೊಲ್ಲೆ ಅವರಿಂದ ಚಾಲನೆ

0
90

ಬೆಳಗಾವಿ : ವಿಕಲಚೇತನರು ಹಾಗೂ ಅವರನ್ನು ಆರೈಕೆ ಮಾಡುವವರಿಗೆ ಲಸಿಕೆ ನೀಡುವ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ, ವಿಶೇಷ ಅಭಿಯಾನವನ್ನು ಹಮ್ಮಿಕೊಳ್ಳಲು ತಿರ್ಮಾನಿಸಿದ್ದು, ಅದರಂತೆ ಈ ದಿನ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ.ಯಾವುದೆ ರೀತಿಯ ಭಯಕ್ಕೆ ಒಳಗಾಗದೆ ಲಸಿಕೆಯನ್ನು ಪಡೆದುಕೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು.

ನಗರದ ಬಸವರಾಜ ಕಟ್ಟಿಮಣಿ ಸಭಾಭವನದಲ್ಲಿ ಸೋಮವಾರ (ಜೂ.7)ವಿಕಲಚೇತನರು ಮತ್ತು
ಅವರ ಆರೈಕೆದಾರರಿಗೆ ಕೊವಿಡ್-19ರ ಲಸಿಕಾಕರಣ ಅಭಿಯಾನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕೋವಿಡ್ -19 ರ ಸಾಂಕ್ರಾಮಿಕ ರೋಗದ ಉಲ್ಬನತೆ ಹಿನ್ನೆಲೆಯಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ,
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ಲಸಿಕಾಕರಣ ಅಭಿಯಾನವನ್ನು ಹಮ್ಮಿಕೊಳ್ಳಲಾಯಿತು.

ಈ ಅಭಿಯಾನದಲ್ಲಿ ಭಾಗವಹಿಸಿದ ಕೃಷಿ ಸಚಿವರಾದ ಬಿ.ಸಿ. ಪಾಟೀಲ ಅವರು ಮಾತನಾಡಿ, ವ್ಯಾಕ್ಸಿನ್ ನೀಡಿದ ನಂತರ ರಾಜ್ಯದಲ್ಲಿ ಸಾವಿನ ಪ್ರಮಾಣ ಕಡಿಮೆಯಾಗಿದ್ದು ಸರಕಾರವು ಉಚಿತವಾಗಿ ನೀಡುತ್ತಿರುವ ಸೌಲಭ್ಯದ ಸದುಪಯೋಗವನ್ನು ಪಡೆದುಕೊಳ್ಳುವಂತೆ ಕರೆ ನೀಡಿದರು.

ಅದೇ ರೀತಿ, ಕಾರ್ಯಕ್ರಮದಲ್ಲಿ ಭಾಗವಹಿಸಿದ ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕರಾದ ಅನೀಲ ಬೆನಕೆ ಮಾತನಾಡಿ, ವಿಕಲಚೇತನರನ್ನು ಕೇಂದ್ರ ಸರಕಾರವು ವಿಶೇಷ ವ್ಯಕ್ತಿಗಳೆಂದು ಗುರುತಿಸಿ, “ದಿವ್ಯಾಂಗರು”
ಎಂದು ನಾಮಕರಣ ಮಾಡಿದೆ. ಈ ದಿವ್ಯಾಂಗರನ್ನು ಸಮಾಜದ ಮುಖ್ಯ ವಾಹಿನಿಗೆ ಕರೆತರುವ ಕೆಲಸವನ್ನು
ಇಲಾಖೆ ಹಾಗೂ ಜನ ಪ್ರತಿನಿಧಿಗಳು ಕೈಗೊಳ್ಳಬೇಕೆಂದು ಸೂಚಿಸಿದರು.

ಈ ಸಂರ್ಭದಲ್ಲಿ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ಎಸ್.ವಿ.ಮುನ್ಯಾಳ ಅವರು, ಹಂತ ಹಂತವಾಗಿ ಜಿಲ್ಲೆಯಲ್ಲಿರುವ ಎಲ್ಲ ವಿಕಲಚೇತನರಿಗೆ ಲಸಿಕೆಯನ್ನು ನೀಡುವುದಾಗಿ ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಕರಾದ ಬಸವರಾಜ ವರವಟ್ಟಿ,
ಅಭಿಯಾನದಲ್ಲಿ ಶಾಂತತೆ ಹಾಗೂ ಕೋವಿಡ್ ಸುರಕ್ಷತಾ ಕ್ರಮಗಳನ್ನು ಅನುಸರಿಸಿ ಲಸಿಕೆಯನ್ನು ಪಡೆಯಲು ತಿಳಿಸಿ, ಅಭಿಯಾನದಲ್ಲಿ ಪಾಲ್ಗೊಂಡ ಸಚಿವರು, ಜನಪ್ರತಿನಿಧಿಗಳು, ವಿಕಲಚೇತನರು ಹಾಗೂ ಆರೈಕೆದಾರರು ಮತ್ತು ಮಾಧ್ಯಮ ಪ್ರತಿನಿಧಿಗಳಿಗೆ
ವಂದನಾರ್ಪಣೆಗಳನ್ನು ತಿಳಿಸಿದರು.

ಕಾರ್ಯಕ್ರಮದಲ್ಲಿ ಸಂಸದರಾದ ಅಣ್ಣಾಸಾಹೇಬ ಜೊಲ್ಲೆ, ಮಂಗಳಾ ಸುರೇಶ ಅಂಗಡಿ, ಶಾಸಕರಾದ ಮಹೇಶ ಕುಮಟಳ್ಳಿ ಇವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here