ಕಾರ್ಮಿಕರಿಗೆ ಕೋವಿಡ್ ಲಸಿಕೆ

0
61

ಬಳ್ಳಾರಿ : ಬಳ್ಳಾರಿ ನಗರದ ಮುಂಡರಗಿ ಬಳಿಯ ಮಹಾತ್ಮಗಾಂಧಿ ಟೌನ್ ಶಿಪ್ ಜಿ+2 ಮನೆಗಳ ನಿರ್ಮಾಣ ಕಾಮಗಾರಿಯಲ್ಲಿ ಭಾಗಿಯಾಗಿರುವ ಎನ್‍ಸಿಸಿ ಕಂಪನಿಯ ನೌಕರರಿಗೆ ಮತ್ತು ಕಾರ್ಮಿಕರಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ನ್ಯಾ.ಎಸ್.ಹೆಚ್. ಪುಷ್ಪಾಂಜಲಿದೇವಿಯವರು ಗುರುವಾರ ಚಾಲನೆ ನೀಡಿದರು.
ಚಾಲನೆ ನೀಡಿದ ನಂತರ ನ್ಯಾ.ಪುಷ್ಪಾಂಜಲಿದೇವಿ ಅವರು ಕೋವಿಡ್ ಲಸಿಕೆಯ ಬಗ್ಗೆ ಕಾರ್ಮಿಕರಲ್ಲಿ ಅರಿವು ಮೂಡಿಸಿ, ಕೊರಾನಾ ತಡೆಯಲು ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಪಾಲಿಸುವಂತೆ ಹೇಳಿದರು.
ಈ ಸಂದರ್ಭದಲ್ಲಿ 150 ಜನ ಕಾರ್ಮಿಕರು ಕೋವಿಡ್ ಲಸಿಕೆ ಪಡೆದರು.
ಈ ಸಮಯದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ.ಮೋಹನ್ ಕುಮಾರಿ, ಎನ್‍ಸಿಸಿ ಕಂಪನಿಯ ಸೈಟ್ ಇಂಜನಿಯರ್ ಶ್ರೀನಿವಾಸ್, ಕಾರ್ಮಿಕ ಇಲಾಖೆಯ ಉಪವಿಭಾಗ 1 ರ ಕಾರ್ಮಿಕ ಅಧಿಕಾರಿ ಕಮಲ್ ಷಾ ಅಲ್ತಾಫ್ ಅಹಮದ್, ಉಪವಿಭಾಗ 2 ರ ಕಾರ್ಮಿಕ ಅಧಿಕಾರಿ ಚಂದ್ರಶೇಖರ್ ಎನ್. ಐಲಿ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಮತ್ತು ಎನ್‍ಸಿಸಿ ಕಂಪನಿಯ ಆಡಳಿತ ಮಂಡಳಿಯವರು ಮತ್ತು ಇತರರು ಇದ್ದರು.

LEAVE A REPLY

Please enter your comment!
Please enter your name here