ನರೇಗಾ ಕೂಲಿಕಾರರಿಗೆ ಕೋವಿಡ್ ಲಸಿಕಾ ಅಭಿಯಾನ

0
169

ಹೊಸಪೇಟೆ(ವಿಜಯನಗರ),ಜೂ.17 :ಹೊಸಪೇಟೆ ತಾಲೂಕು ಆಡಳಿತ, ತಾಪಂ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ತಾಲೂಕಿನ ಬೈಲುವದ್ದಿಗೇರಿ ಗ್ರಾಪಂ ವ್ಯಾಪ್ತಿಯ ಕರೋಟಿ ಹಳ್ಳ ಹೂಳು ತೆಗೆಯುವ ಕಾಮಗಾರಿ ಸ್ಥಳದಲ್ಲಿ ನರೇಗಾ ಕೂಲಿಕಾರರಿಗೆ ಕೋವಿಡ್ ಲಸಿಕಾ ನೀಡುವ ಅಭಿಯಾನಕ್ಕೆ ಸಹಾಯಕ ಆಯುಕ್ತ ಸಿದ್ದರಾಮೇಶ್ವರ ಅವರು ಗುರುವಾರ ಚಾಲನೆ ನೀಡಿದರು.

ಅಭಿಯಾನದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ನಿರ್ವಹಿಸುತ್ತಿರುವ ಕೂಲಿಕಾರರಿಗೆ ಲಸಿಕೆ ಹಾಕಲು ಕ್ರಮವಹಿಸಲಾಗಿತ್ತು. ಇದೇ ಸಮಯದಲ್ಲಿ ಕೊರೊನಾ ರೋಗಲಕ್ಷಣ ಕಂಡು ಬಂದವರಿಗೆ ಪರೀಕ್ಷೆಯನ್ನು ಮಾಡಲಾಯಿತು. ಲಸಿಕೆ ಪಡೆಯಲು ಹಿಂಜರಿಕೆ ತೋರಿದ ಕೆಲ ಕೂಲಿಕಾರರಿಗೆ ಸಹಾಯಕ ಆಯುಕ್ತರು ಲಸಿಕೆ ಪಡೆಯುವ ಅವಶ್ಯಕತೆ ಬಗ್ಗೆ ಮನವರಿಕೆ ಮಾಡಿಕೊಟ್ಟ ನಂತರ ಲಸಿಕೆ ಪ್ರಕ್ರಿಯೆಗೆ ಹೆಚ್ಚಿನ ಆಸಕ್ತಿ ತೋರಿಸಿದರು.

ತಾಲೂಕು ವೈದ್ಯಾಧಿಕಾರಿ ಡಿ.ಭಾಸ್ಕರ್ ಅವರು ತಾವು ಲಸಿಕೆ ಪಡೆಯುವುದರಿಂದ ಮುಂದಿನ ದಿನಗಳಲ್ಲಿ ಕೋವಿಡ್ ಹರಡುವಿಕೆಯಿಂದ ತಮ್ಮನ್ನು ರಕ್ಷಿಸಿಕೊಳ್ಳುವುದರ ಜೊತೆಗೆ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂದು ಹೇಳುವ ಮೂಲಕ ಲಸಿಕೆಯ ಉಪಯುಕ್ತತೆ ಬಗ್ಗೆ ಮಾಹಿತಿ ನೀಡಿದರು.
85 ಜನ ನರೇಗಾ ಕೂಲಿಕಾರರು ಲಸಿಕೆ ಪಡೆದರು.

ಈ ಅಭಿಯಾನದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ವಿಶ್ವನಾಥ್, ಸಹಾಯಕ ನಿರ್ದೇಶಕ ಎಂ.ಉಮೇಶ್, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಈರಮ್ಮ ನಾಯಕರ, ಉಪಾಧ್ಯಕ್ಷರಾದ ಮಂಜುನಾಥ್ ಗುಜ್ಜಲ್ ಹಾಗೂ ಪಿಡಿಒ ಬಸವರಾಜ್ ಮತ್ತು ಇತರರು ಇದ್ದರು.

LEAVE A REPLY

Please enter your comment!
Please enter your name here