ಜೂನ್ 22ರಿಂದ ಮಂತ್ರಾಲಯ ರಾಯರ ದರ್ಶನ ಪುನರಾರಂಭ

0
137

ಕೋವಿಡ್-19 ಎರಡನೇ ಅಲೆ ಹೆಚ್ಚಾಗಿದ್ದ ಕಾರಣ ಸ್ಥಗಿತಗೊಂಡಿದ್ದ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮೂಲ ಬೃಂದಾವನ ಜೂ.22ರಿಂದ ಪುನಾರಂಭ ಆಗಲಿದೆ.ಸರ್ಕಾರದ ಮಾರ್ಗಸೂಚಿಗಳನ್ವಯ ದರ್ಶನಕ್ಕೆ ಶ್ರೀ ಮಠದ ಆಡಳಿತ ಮಂಡಳಿ ಅವಕಾಶ ಮಾಡಿದೆ. ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಹಾಗೂ ಸಂಜೆ 4 ಗಂಟೆಯಿಂದ ರಾತ್ರಿ 9 ಗಂಟೆವರೆಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಮಠಕ್ಕೆ ಬರಲಾಗದ ಭಕ್ತರು //www.srsmatha.org/online ಮೂಲಕ ರಾಯರ ದರ್ಶನ ಪಡೆಯಬಹುದು ಎಂದು ಮಠದ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ:ಅವಿನಾಶ ದೇಶಪಾಂಡೆ

LEAVE A REPLY

Please enter your comment!
Please enter your name here