ಧಾರವಾಡ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆಯುಷ್ ಇಲಾಖೆ ವತಿಯಿಂದ 7ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಧಾರವಾಡದ ಸತ್ಯಸಾಯಿ ಭವನದಲ್ಲಿ (ಜೂನ್ 21) ನಡೆಸಲಾಯಿತು.

0
105

ಕಾರ್ಯಕ್ರಮವನ್ನು ಹುಬ್ಬಳ್ಳಿ-ಧಾರವಾಡ (ಪಶ್ಚಿಮ) ಶಾಸಕರಾದ ಅರವಿಂದ ಬೆಲ್ಲದ ರವರು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿನಿತ್ಯ ಯೋಗ ಮಾಡಿ ಎಲ್ಲರು ಆರೋಗ್ಯ ಸುಧಾರಿಸಿಕೊಳ್ಳಬೇಕೆಂದು ಹೇಳಿದರು. ಕಳೆದ ವರ್ಷದಿಂದ ಕೊವಿಡ್-19 ಸಮಯದಲ್ಲಿ ಆಯುಷ್ ಇಲಾಖೆ ವತಿಯಿಂದ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಔಷಧಿ ನೀಡುತ್ತಿದ್ದು, ತುಂಬಾ ಪ್ರಯೋಜನಕಾರಿಯಾಗಿದೆ ಎಂದು ಹೇಳಿದರು.
ನಂತರ ಧಾರವಾಡ ಜಿಲ್ಲೆಯ ಆಯುಷ್ ಇಲಾಖೆಯ ಆಯುಷ್ ಕ್ಷೇಮ ಕೇಂದ್ರದ ಯೋಗ ತರಬೇತಿದಾರ ಶಿವಾನಂದ ಮಲ್ಲರ ಹಾಗೂ ಭೀಮಪ್ಪ ಲದ್ದಿ ರವರು ಯೋಗ ಪ್ರಾತ್ಯಕ್ಷಿಕೆ ಮಾಡಿಸಿದರು.

ಆಯುಷ್ ಇಲಾಖೆಯ ಜಿಲಾ ್ಲಆಸ್ಪತ್ರೆಯ ಪಂಚಕರ್ಮ ವಿಭಾಗದ ವ್ಯೆದ್ಯಾಧಿಕಾರಿ ಡಾ. ಸಂತೋಷ ತಾಡಪತ್ರಿ ಸೇರಿದಂತೆ ಎಲ್ಲ ವ್ಯೆದ್ಯಾಧಿಕಾರಿಗಳು, ಸಿಬ್ಬಂದಿಯವರು ಹಾಗೂ ಧಾರವಾಡ ಶಾಖೆಯ ಲಾಯನ್ಸ್ ಕ್ಲಬ್ ಪದಾಧಿಕಾರಿಗಳು ಉಪಸ್ಥಿತರಿದ್ದರು. ಹಾಗೂ ಝೂಮ್ ಆ್ಯಪ್ ಮೂಲಕ ಆನ್‍ಲೈನ್‍ನಲ್ಲಿ ವಿವಿಧ ಯೋಗಾಸಕ್ತರು, ಸಾರ್ವಜನಿಕರು ಪಾಲ್ಗೊಂಡು ಯೋಗ ದಿನಾಚರಣೆ ಪ್ರಯೋಜನ ಪಡೆದರು.

LEAVE A REPLY

Please enter your comment!
Please enter your name here