ಬಳ್ಳಾರಿಯಲ್ಲಿ ಅಂತರಾಷ್ಟ್ರೀಯ ಯೋಗ ದಿನ ಆಚರಣೆ

0
118

ಬಳ್ಳಾರಿ,ಜೂ.21: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಆಯುಷ್ ಇಲಾಖೆ, ಆರ್ಟ್ ಆಫ್ ಲಿವಿಂಗ್, ಪತಂಜಲಿ ಯೋಗ ಸಂಸ್ಥೆ ಸಹಯೋಗದೊಂದಿಗೆ 7ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಜಿಲ್ಲೆಯಾದ್ಯಂತ ಯೋಗ ಪ್ರಶಿಕ್ಷಣ ಕಾರ್ಯಕ್ರಮವನ್ನು ಸೋಮವಾರ ಹಮ್ಮಿಕೊಳ್ಳಲಾಗಿತ್ತು.
ಗೂಗಲ್ ವರ್ಚುವಲ್ ಮೀಟಿಂಗ್ ಮೂಲಕ ಮನೆಯಿಂದಲೇ ಯೋಗ ಎಂಬ ಘೋಷ ವಾಕ್ಯದೊಂದಿಗೆ ಈ ಬಾರಿ ಯೋಗಾಭ್ಯಾಸವನ್ನು ಮಾಡಲಾಯಿತು. ಅಂತರಾಷ್ಟ್ರೀಯ ಯೋಗ ದಿನದ ಪ್ರಯುಕ್ತ ಸೋಮವಾರ ಜಿಲ್ಲೆಯಾದ್ಯಂತ ಒಟ್ಟು 2300 ಜನ ಆನ್‍ಲೈನ್ ಮತ್ತು ಆಫ್‍ಲೈನ್ ಮೂಲಕ ಯೋಗಾಭ್ಯಾಸದಲ್ಲಿ ಪಾಲ್ಗೊಂಡಿದ್ದರು.
ಜಿಲ್ಲೆಯಲ್ಲಿ ಸಾಂಕೇತಿಕವಾಗಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭವನದ ಸಭಾಂಗಣದಲ್ಲಿ ಆನ್‍ಲೈನ್ ಮತ್ತು ಆಫ್‍ಲೈನ್ ಮೂಲಕ ಯೋಗ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ನುರಿತ ಯೋಗ ಶಿಕ್ಷಕರಾದ ಮಹೇಶ್ ಅವರು ಯೋಗಕ್ಕೆ ಸಂಬಂಧಿಸಿದ ವಿವಿಧ ಆಸನಗಳನ್ನು ಈ ಸಂದರ್ಭದಲ್ಲಿ ಪ್ರಸ್ತುತಪಡಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆಯುಷ್ ಅಧಿಕಾರಿಗಳಾದ ಡಾ.ಫಣಿಂದರ್, ಆಯುಷ್ ಇಲಾಖೆಯ ಸಹಾಯಕ ಆಡಳಿತ ಅಧಿಕಾರಿಗಳಾದ ಶರಣಬಸಪ್ಪ ಜಿನಗಾ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಶಿವಾಜಿರಾವ್, ಕೆ.ಜಿ.ಎಂ.ಓ ಅಧ್ಯಕ್ಷರಾದ ಡಾ.ವಿಜಯೇಂದ್ರ. ಬಳ್ಳಾರಿ ತಾಲೂಕಿನ ವೈದ್ಯಾಧಿಕಾರಿಗಳು ಮತ್ತು ಇತರರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here