ಸಖಿ ಒನ್ ಸ್ಟಾಪ್ ಸೆಂಟರ್’ ಕಟ್ಟಡ ಉದ್ಘಾಟನೆ.

0
112

ದಾವಣಗೆರೆ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಜಿಲ್ಲಾ ಚಿಗಟೇರಿ ಆಸ್ಪತ್ರೆ ಆವರಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ‘ಸಖಿ ಒನ್ ಸ್ಟಾಪ್ ಸೆಂಟರ್’ ಕಟ್ಟಡವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖಾ ಸಚಿವರಾದ ಶಶಿಕಲಾ ಅ ಜೊಲ್ಲೆ, ಸಂಸದ ಡಾ.ಜಿ.ಎಂ.ಸಿದ್ದೇಶ್ವರ, ಮಾಯಕೊಂಡ ಶಾಸಕ ಪ್ರೊ.ಲಿಂಗಣ್ಣ ಅವರು ಮಂಗಳವಾರ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿ.ಪಂ. ಸಿಇಒ ಡಾ.ವಿಜಯ ಮಹಾಂತೇಶ ಬಿ ದಾನಮ್ಮನವರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ssಸಿ.ಬಿ.ರಿಷ್ಯಂತ್, ಉಪ ವಿಭಾಗಾಧಿಕಾರಿ ಮಮತಾ ಹೊಸಗೌಡರ್, ಡಿ.ಹೆಚ್.ಒ ಡಾ.ನಾಗರಾಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಲ್ಯಾಣ ಅಧಿಕಾರಿ ವಿಜಯ ಕುಮಾರ್ ಹಾಗೂ ವಿವಿಧ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here