ರೈತರು ಬೆಳೆ ವಿಮೆಯೋಜನೆಗೆ ನೋಂದಾಯಿಸಿಕೊಳ್ಳಿ:ಜಿಲ್ಲಾಧಿಕಾರಿ

0
77

ಮಂಡ್ಯ: ಜೂ.29 :- ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ಬೆಳೆ ನಷ್ಟ ಪರಿಹಾರಕ್ಕೆ ರೈತರು ಶೀಘ್ರವಾಗಿ ನೊಂದಾಯಿಸಿಕೊಳ್ಳಿ ಎಂದು ಜಿಲ್ಲಾಧಿಕಾರಿ ಎಸ್.ಅಶ್ವತಿ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ 2021-22 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಜಿಲ್ಲೆಯಲ್ಲಿ ಅನುμÁ್ಠನಗೊಳಿಸುವ ಸಂಬಂಧ ನಡೆದ ಜಿಲ್ಲಾ ಬೆಳೆ ವಿಮಾ ಯೋಜನೆ ಉಸ್ತುವಾರಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯ ಬೆಳೆ ವಿಮಾ ಸಂಸ್ಥೆಯಾಗಿ ಅಗ್ರಿಕಲ್ಚರ್ ಇನ್ಯೂರೆನ್ಸ್ ಕಂಪನಿಯನ್ನು ನಿಗದಿಪಡಿಸಲಾಗಿದೆ ಎಂದರು.
2021ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಜಿಲ್ಲೆ ಯಲ್ಲಿ 12 ಆಹಾರ ಧಾನ್ಯ, ಎಣ್ಣೆಕಾಳು ಬೆಳೆಗಳು ಮತ್ತು 2 ತೋಟಗಾರಿಕಾ ಬೆಳೆಗಳನ್ನು ಅಧಿಸೂಚಿಸಲಾಗಿದ್ದು, ಭತ್ತ (ನೀರಾವರಿ) ಬೆಳೆಗೆ ಮಂಡ್ಯ, ಮದ್ದೂರು, ಮಳವಳ್ಳಿ, ಕೆ.ಆರ್.ಪೇಟೆ, ಪಾಂಡವಪುರ ಮತ್ತು ಶ್ರೀರಂಗಪಟ್ಟಣ ಅಧಿಸೂಚಿತ ಗ್ರಾಪಂಗಳಲ್ಲಿ, ರಾಗಿ (ಮಳೆ ಆಶ್ರಿತ) ಬೆಳೆಗೆ ನಾಗಮಂಗಲ ಮತ್ತು ಪಾಂಡವಪುರ ತಾಲೂಕುಗಳ ಅಧಿಸೂಚಿತ ಗ್ರಾಪಂಗಳಲ್ಲಿ, ಮುಸುಕಿನಜೋಳ (ಮಳೆ ಆಶ್ರಿತ) ಬೆಳೆಗೆ ಮಳವಳ್ಳಿ ತಾಲೂಕಿನ ಅಧಿಸೂಚಿತ ಗ್ರಾಪಂಗಳಲ್ಲಿ ರೈತರು ವಿಮೆಗೆ ನೋಂದಾಯಿಸಿಕೊಳ್ಳ ಬಹುದಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಭತ್ತ (ನೀರಾವರಿ), ಭತ್ತ (ಮಳೆ ಆಶ್ರಿತ), ರಾಗಿ (ನೀರಾವರಿ), ರಾಗಿ (ಮಳೆ ಆಶ್ರಿತ), ಮುಸುಕಿನ ಜೋಳ (ನೀರಾವರಿ), ಜೋಳ (ಮಳೆ ಆಶ್ರಿತ), ತೊಗರಿ (ಮಳೆ ಆಶ್ರಿತ), ಹುರುಳಿ (ಮಳೆ ಆಶ್ರಿತ), ಎಳ್ಳು (ಮಳೆ ಆಶ್ರಿತ), ನೆಲಗಡಲೆ (ಮಳೆ ಆಶ್ರಿತ), ಅಲಸಂದೆ (ಮಳೆ ಆಶ್ರಿತ), ಟಮೋಟೊ, ಎಲೆ ಕೋಸು ಬೆಳೆಗಳಿಗೆ ಅಧಿಸೂಚಿತ ಹೋಬಳಿಗಳಲ್ಲಿ ರೈತರು ವಿಮೆಗೆ ನೋಂದಾಯಿಸಬಹುದು ಎಂದು ತಿಳಿಸಿದರು.
ಬೆಳೆ ಸಾಲ ಪಡೆಯದ ರೈತರಿಗೆ ಬೆಳೆ ವಿಮೆ ಕಡ್ಡಾಯ ವಾಗಿದ್ದು, ವಿವಿಧ ವಿಮಾ ಘಟಕಗಳಲ್ಲಿ ಅಧಿಸೂಚಿಸಲಾದ ಬೆಳೆಗಳಿಗೆ ಬೆಳೆ ಸಾಲ ಪಡೆಯದ ರೈತರು ಈ ಯೋಜನೆ ಯಡಿ ಅರ್ಜಿಯೊಂದಿಗೆ ಭೂಮಿ ಹೊಂದಿರುವುದಕ್ಕೆ ದಾಖಲೆಗಳಾದ ಪಹಣ , ಖಾತೆ, ಪಾಸ್ ಪುಸ್ತಕ ಹಾಗೂ ಕಂದಾಯ ರಶೀದಿ ನೀಡಬೇಕು ಎಂದರು.
ಜಂಟಿ ಕೃಷಿ ನಿರ್ದೇಶಕರಾದ ಬಿ.ಎಸ್ ಚಂದ್ರಶೇಖರ್ ಮಾತನಾಡಿ, ಬೆಳೆ ವಿಮೆ ಬಗ್ಗೆ ರೈತರಿಗೆ ಅರಿವು ಮೂಡಿಸಲು ತಾಲೂಕು ವ್ಯಾಪ್ತಿಯ ಎಲ್ಲಾ ಬ್ಯಾಂಕುಗಳು, ಗ್ರಾಪಂಗಳು, ತೋಟಗಾರಿಕೆ ಹಾಗೂ ಕಂದಾಯ ಇಲಾಖೆ ಸೇರಿದಂತೆ ಇತರೆ ಕೃಷಿಗೆ ಸಂಬಂಧಿಸಿದ ಇಲಾಖೆಗಳಿಗೆ ಹಸ್ತ ಪ್ರತಿಗಳನ್ನು ವಿತರಿಸಿ ವ್ಯಾಪಕ ಪ್ರಚಾರ ನೀಡಲು ಕ್ರಮವಹಿಸಲಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಜಿ.ಪಂ ಸಿ.ಇ ಒ ದಿವ್ಯಪ್ರಭು, ತೋಟಗಾರಿಕೆ ಉಪನಿರ್ದೇಶಕ ಮಂಜುನಾಥ್, ಲೀಡ್ ಬ್ಯಾಂಕ್ ನ ಕದ್ರಪ್ಪ, ಮೀನುಗಾರಿಕೆ ಉಪನಿರ್ದೇಶಕರಾದ ಬಿಬಿನ್ ಬೊಪ್ಪಣ್ಣ, ಸಾಮಾಜಿಕ ಅರಣ್ಯ ಇಲಾಖೆಯ ಉಪನಿರ್ದೇಶಕರಾದ ವೆಂಕಟೇಶ್, ಕೃಷಿ ಇಲಾಖೆಯ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here