ಗಡಿ ಭಾಗದ ಕನ್ನಡಿಗರನ್ನು ಶೈಕ್ಷಣಿಕವಾಗಿ ಮತ್ತು ಸಾoಸ್ಕೃತಿಕವಾಗಿ ಅಭಿವೃದ್ಧಿ ಪಡಿಸಲಾಗುವುದು – ಡಾ.ಸಿ.ಸೋಮಶೇಖರ್

0
124

ಕೋಲಾರ : ಗಡಿ ಭಾಗದಲ್ಲಿ ಕನ್ನಡ ಸಂಸ್ಕೃತಿಯನ್ನು ಬೆಳೆಸಲು ಅಲ್ಲಿನ ಕನ್ನಡಿಗರನ್ನು ಶೈಕ್ಷಣಿಕವಾಗಿ ಮತ್ತು ಸಾoಸ್ಕೃತಿಕವಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದು ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಸಿ. ಸೋಮಶೇಖರ್ ರವರು ತಿಳಿಸಿದರು.
ಇಂದು ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ಸಭೆ ನಡೆಸಿ ಮಾತನಾಡಿದರು. 2010 ರಲ್ಲಿ ಗಡಿ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆ ಮಾಡಲಾಯಿತು ಇದರ ಮುಖ್ಯ ಆಶಯ ಗಡಿ ಭಾಗದ ಕನ್ನಡಿಗರ ಆಸ್ಮಿತೆ ಮತ್ತು ಸಂಸ್ಕೃತಿಯನ್ನು ಕಾಪಾಡುವುದು ಎಂದು ಅವರು ಹೇಳಿದರು.
ಗಡಿ ಪ್ರದೇಶಗಳಲ್ಲಿ ಜನರು ಬಹುಭಾಷಿತ ಬಹು ಸಂಸ್ಕೃತಿಯನ್ನು ಒಳಗೊಂಡಿರುತ್ತಾರೆ. ಅವರಿಗೆ ಸಾಂಸ್ಕೃತಿಕ, ಶೈಕ್ಷಣಿಕ ಮತ್ತು ಸಾಮಾಜಿಕ ಭದ್ರತೆಯನ್ನು ಒದಗಿಸಬೇಕು. ಗಡಿ ಭಾಗದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ, ಶಾಲೆ, ಆಸ್ಪತ್ರೆ, ರಸ್ತೆ ಹಾಗೂ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿ ಪಡಿಸಿ ಸರ್ಕಾರ ಅವರ ಜೊತೆ ಇದೆ ಎಂಬ ಧೈರ್ಯ ತುಂಬವ ಕಾರ್ಯ ನಡೆಯಬೇಕು ಎಂದು ಅವರು ಹೇಳಿದರು.
ಈ ಸಾಲಿನ ಅನುದಾನದಲ್ಲಿ ರಾಜ್ಯದ ಗಡಿ ಭಾಗದ 63 ತಾಲ್ಲೂಕುಗಳಲ್ಲಿ ಕನ್ನಡ ಸಂಸ್ಕೃತಿ ಉತ್ಸವ ಆಚರಿಸಲಾಗುವುದು. ಈ ಭಾರಿ ಶೈಕ್ಷಣಿಕವಾಗಿ ಹೆಚ್ಚಿನ ಒತ್ತು ಕೊಟ್ಟು ಗಡಿ ಭಾಗದಲ್ಲಿ ಶಾಲಾಕಟ್ಟಡ, ಶೌಚಾಲಯ ಮತ್ತು ಗ್ರಂಥಾಲಯಗಳ ನಿರ್ಮಿಸಲಾಗುವುದು. ಜಿಲ್ಲೆಯ ಐದು ತಾಲ್ಲೂಕುಗಳಾದ ಮುಳಬಾಗಿಲು, ಬಂಗಾರಪೇಟೆ, ಕೆಜಿಎಫ್, ಮಾಲೂರು ಮತ್ತು ಶ್ರೀನಿವಾಸಪುರದಲ್ಲಿ ನಿರ್ಮಿಸಲಾಗುವುದು ಎಂದು ಅವರು ಹೇಳಿದರು.
ಗಡಿ ಭಾಗದ ಕನ್ನಡಿಗರ ಸಂಸ್ಕೃತಿಯನ್ನು ಬೆಳೆಸಲು ಕನ್ನಡ ಹೋರಾಟಗಾರರ ಮತ್ತು ದಾರ್ಶನಿಕರ ಸ್ಮಾರಕಗಳು, ಸಾಕ್ಷಾ ಚಿತ್ರಗಳನ್ನು ಹಾಗೂ ಗಡಿಭಾಗದ ಹೆದ್ದಾರಿಯಲ್ಲಿ ಸ್ವಾಗತ ಧ್ವಜಸ್ತಂಭ ಗಳನ್ನು ನಿರ್ಮಿಸಲಾಗುವುದು. ಗಡಿಭಾಗದ ಪ್ರೌಢ ಪ್ರಬಂಧಗಳನ್ನು ಬರೆದಿರುವವರ ಪುಸ್ತಕಗಳನ್ನು ಪ್ರಕಟಿಸಲು ಸಹಾಯ ಮಾಡಲಾಗುವುದು. ಉತ್ತಮ ಸಾಧನೆ ಮಾಡಿದವರನ್ನು ಗುರುತಿಸಿ ಅವರಿಗೆ ಕೈಯಾರಕಿಯ್ಯಾಣ್ಣರೈ ಮತ್ತು ಜಯದೇವಿತಾಯಿ ಲಿಗಾಡೆ ಅವರ ಹೆಸರಿನಲ್ಲಿ ರಾಷ್ಟ್ರೀಯ ಪ್ರಶಸ್ತಿ ನೀಡಲಾಗುವುದು ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಡಾ|| ಆರ್.ಸೆಲ್ವಮಣಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ಎನ್.ಎಂ.ನಾಗರಾಜ್, ಕನ್ನಡ ಮತ್ತು ಸoಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ರವಿಕುಮಾರ್, ತಹಶೀಲ್ದಾರರಾದ ಶೋಭಿತಾ, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here