ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಕಾರ್ಮಿಕ ಇಲಾಖೆ ಕಟ್ಟಡ ಕಾರ್ಮಿಕರಿಗೆ ಆಹಾರ ಕಿಟ್ ವಿತರಣೆ

0
178

ಧಾರವಾಡ : ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಬೆಂಗಳೂರಿನ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿ ಸಂಯುಕ್ತಾಶ್ರಯದಲ್ಲಿ ಕೋವಿಡ್-19 ಸಂಕಷ್ಟದಲ್ಲಿರುವ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಆಹಾರ ಸಾಮಗ್ರಿಗಳ ಕಿಟ್ ವಿತರಣಾ ಕಾರ್ಯಕ್ರಮವನ್ನು ಸಿವಿಲ್ ನ್ಯಾಯಾಲಯಗಳ ಆವರಣ ಎಡಿಆರ್ ಕಟ್ಟಡದಲ್ಲಿ ಇಂದು (ಜು.03) ಬೆಳಿಗ್ಗೆ ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಉಮೇಶ ಎಮ್. ಅಡಿಗ, ಉದ್ಘಾಟಿಸಿ, ಕಾರ್ಮಿಕರಿಗೆ ಕಾರ್ಮಿಕ ಇಲಾಖೆಯ ಆಹಾರ ಕಿಟ್ ವಿತರಣೆ ಮಾಡಿದರು. ಅತಿಥಿಗಳಾಗಿ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸಿಜೆಎಮ್ ಆಗಿರುವ ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಪ್ರಭಾರ ಸದಸ್ಯ ಕಾರ್ಯದರ್ಶಿಗಳಾಗಿರುವ ಸಂಜಯ ಪಿ. ಗುಡಗುಡಿ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಪ್ರಭಾರ ಸಹಾಯಕ ಕಾರ್ಮಿಕ ಆಯುಕ್ತ ಮಲ್ಲಿಕಾರ್ಜುನ.ಎಸ್. ಜೋಗುರ ಕಾರ್ಮಿಕ ಇಲಾಖೆಯ ಯೋಜನೆಗಳ ಕುರಿತು ಕಾರ್ಮಿಕರಿಗೆ ವಿವರಿಸಿದರು.

ಹಿರಿಯ ವಕೀಲರಾದ ವಾಯ್.ಪಿ. ಮದ್ನೂರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಮಂಜುನಾಥ ಅಂಜುಟಗಿ, ಕಾರ್ಮಿಕ ಇಲಾಖೆಯ ಹಿರಿಯ ನಿರೀಕ್ಷಕರಾದ ಮಿನಾಕ್ಷೀ ಸಿಂದಿಹಟ್ಟಿ, ಭುವನೇಶ್ವರಿ ಕೋಟಿಮಠ ಹಾಗೂ ಇತರರು ಭಾಗವಹಿಸಿದ್ದರು. ಕಾರ್ಮಿಕ ಇಲಾಖೆ ಅಧಿಕಾರಿ ಮಾರಿಕಾಂಬಾ ಹುಲಕೋಟಿ ಸ್ವಾಗತಿಸಿದರು.

LEAVE A REPLY

Please enter your comment!
Please enter your name here