ವ್ಯಕ್ತಿ ಕಾಣೆ: ಪ್ರಕರಣ ದಾಖಲು

0
275

ಬಳ್ಳಾರಿ,ಜು.07: ನಗರದ ತಾಳೂರು ರಸ್ತೆಯ ಮಹಾನಂದಿಕೊಟ್ಟಂ ನಿವಾಸಿ 55 ವರ್ಷದ ಮಲ್ಲಿಕಾರ್ಜುನ ಎಂಬ ವ್ಯಕ್ತಿ ಕಾಣೆಯಾಗಿರುವ ಕುರಿತು ಗಾಂಧಿನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಠಾಣೆಯ ಸಹಾಯಕ ಸಬ್ ಇನ್ಸ್‍ಪೆಕ್ಟರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಣೆಯಾದ ವ್ಯಕ್ತಿಯ ಚಹರೆ ಗುರುತು: 5.8 ಅಡಿ ಎತ್ತರ, ಸಾಧಾರಣ ಮೈಕಟ್ಟು, ಕಪ್ಪು ಮೈಬಣ್ಣ, ಕನ್ನಡ ಭಾಷೆ ಮಾತನಾಡುತ್ತಾನೆ. ಗೆರೆಯುಳ್ಳ ಬಿಳಿ ಅಂಗಿ, ನೀಲಿ ಪ್ಯಾಂಟ್ ಧರಿಸಿದ್ದು, ಹೊಟ್ಟೆಯ ಭಾಗದಲ್ಲಿ ಹಳೆ ಗಾಯದ ಗುರುತು ಇರುತ್ತದೆ.
ಕಾಣೆಯಾದ ವ್ಯಕ್ತಿಯ ಬಗ್ಗೆ ಮಾಹಿತಿ ಅಥವಾ ಸುಳಿವು ಸಿಕ್ಕಲ್ಲಿ ಬಳ್ಳಾರಿ ಕಂಟ್ರೋಲ್ ರೂಂ.ನಂ:08392-258100, ಗಾಂಧಿನಗರ ಪೊಲೀಸ್ ಠಾಣೆ ದೂ.ಸಂ:08392-272192, ಮತ್ತು ಪಿ.ಎಸ್.ಐ ಗಾಂಧಿನಗರ ರವರ ಮೊ.ನಂ:9480803082, ಹಾಗೂ ಪಿ.ಐ ಗಾಂಧಿನಗರ ಮೊ.ಸಂ:9480803046ಗೆ ಸಂಪರ್ಕಿಸಲು ಕೋರಿದೆ.

LEAVE A REPLY

Please enter your comment!
Please enter your name here