ಜಿಲ್ಲಾ ಎನ್.ಸಿ.ಡಿ ಘಟಕದ ಡಾ.ವಿ.ಎನ್.ಹಿರೇಮಠ ಅವರಿಗೆ ಸನ್ಮಾನ

0
87

ಧಾರವಾಡ ಜು.8: ಆಯುಷ್ಮನ್ ಭಾರತ ಆರೋಗ್ಯ ಕರ್ನಾಟಕ ಕಾರ್ಯಕ್ರಮದ 3 ನೇ ವಾರ್ಷಿಕ ದಿನಾಚರಣೆಯ ಅಂಗವಾಗಿ ನಡೆದ ರಾಜ್ಯ ಮಟ್ಟದ ಆಯುಷ್ಮನ್ಭಾರತ ಕ್ವಿಜ್ ಫೈರ್ ಆ್ಯಂಡ್ ಪಜಲ್ (Ayushman Bharat quiz fire & Puzzle) ಸ್ಪರ್ಧೆಯಲ್ಲಿ ರಾಜ್ಯಕ್ಕೆ ತೃತೀಯ ಸ್ಥಾನ ವಿಜೇತರಾದ ಜಿಲ್ಲಾ ಎನ್,ಸಿ,ಡಿ ಘಟಕದ ಜಿಲ್ಲಾ ಕಾರ್ಯಕ್ರಮ ಸಂಯೊಜಕ ಡಾ. ವಿ ಎನ್ ಹಿರೇಮಠ ಇವರನ್ನು ಇಂದು (ಜು.8) ಜಿಲ್ಲಾ ಪಂಚಾಯತ ಸಭಾ ಭವನದಲ್ಲಿ ನಡೆದ ಜಿಲ್ಲಾ ಆರೋಗ್ಯ ಸಂಘದ ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಸಂಘದ ಅಧ್ಯಕ್ಷೆ ಹಾಗೂ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಸುಶೀಲಾ ಬಿ. ಅವರು ಸನ್ಮಾನಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಯಶವಂತ ಮದೀನಕರ, ಜಿಲ್ಲಾ ಎನ್.ಸಿ.ಡಿ ಕಾರ್ಯಕ್ರಮಾಧಿಕಾರಿ ಹಾಗೂ ಜಿಲ್ಲಾ ಸಮೀಕ್ಷಣಾಧಿಕಾರಿ ಡಾ. ಸುಜಾತಾ ವ್ಹಿ ಹಸವೀಮಠ ಹಾಗೂ ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳು ಮತ್ತು ತಾಲೂಕಾ ಆರೋಗ್ಯಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here