ಹರಿಹರ:ತಂಬಾಕು ನಿಯಂತ್ರಣ ಕಾಯ್ದೆ ಉಲ್ಲಂಘನೆಗೆ ದಂಡ

0
101

ದಾವಣಗೆರೆ, ಜು.13-ಜಿಲ್ಲೆಯ ತಂಬಾಕು ನಿಯಂತ್ರಣ ತನಿಖಾ ದಳವು ಮಂಗಳವಾರದಂದು ಹರಿಹರ ನಗರದ ವಿವಿಧ ಅಂಗಡಿಗಳ ಮೇಲೆ ದಾಳಿ ನಡೆಸಿ ಕೋಟ್ಪಾ ಕಾಯ್ದೆ ಉಲ್ಲಂಘನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿ ದಂಡ ವಿಧಿಸಿದೆ.

ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಬಾಲ ಕಾರ್ಮಿಕರ ಯೋಜನೆ, ಮಹಾನಗರ ಪಾಲಿಕೆ, ಶಿಕ್ಷಣ ಇಲಾಖೆ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ, ನಗರಸಭೆ ಹಾಗೂ ಪೊಲೀಸ್ ಇಲಾಖೆ ಇವರ ಸಹಯೋಗದೊಂದಿಗೆ ಕಾರ್ಯಾಚರಣೆ ಹಮ್ಮಿಕೊಳ್ಳಲಾಗಿತ್ತು.

ಜಿಲ್ಲಾ ತಂಬಾಕು ನಿಯಂತ್ರಣ ತನಿಖಾ ದಳವು ಸಿಗರೇಟು ಮತ್ತು ಇತರ ತಂಬಾಕು ಉತ್ಪನ್ನಗಳ ಅಧಿನಿಯಮ-2003 ಸೆಕ್ಷನ್ 4 ರಡಿ 32, ಸೆಕ್ಷನ್ 6ಎ ಅಡಿಯಲ್ಲಿ 04, ಸೇರಿದಂತೆ ನಿಯಮ ಉಲ್ಲಂಘನೆಯ ಒಟ್ಟು 36 ಪ್ರಕರಣಗಳನ್ನು ದಾಖಲಿಸಿ, ರೂ.7,200/- ಗಳ ದಂಡ ಸಂಗ್ರಹಿಸಿದೆ.

ತಂಡವು ಹರಿಹರ ನಗರದಲ್ಲಿ ಹೊಟೇಲ್, ಬಾರ್, ಪಾನ್‍ಶಾಪ್, ಬಸ್ ನಿಲ್ದಾಣ ಇತ್ಯಾದಿ ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳನ್ನು ಮಾರುವವರು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳನ್ನು ಸೇವಿಸುವವರಿಗೆ ಸ್ಥಳದಲ್ಲಿಯೇ ದಂಡ ಹಾಕುವ ಮೂಲಕ ಜಾಗೃತಿ ಮೂಡಿಸಿದರು. ಹಾಗೂ ಸಾರ್ವಜನಿಕ ಸ್ಥಳದಲ್ಲಿರುವ ಅಂಗಡಿ ಮಾಲೀಕರುಗಳು ಧೂಮಪಾನ ನಿಷೇಧÀದ ಬಗ್ಗೆ ಪ್ರದರ್ಶಿಸಬೇಕಾದ ಫಲಕಗಳನ್ನು ಕಟ್ಟುನಿಟ್ಟಾಗಿ ಅಳವಡಿಸಲು ತಾಕೀತು ಮಾಡಿದರು.

ಕೋಟ್ಪಾ ಕಾಯಿದೆಯ ಸೆಕ್ಷನ್ 6ಎ ಪ್ರಕಾರ 18 ವರ್ಷದೊಳಗಿನ ಮಕ್ಕಳಿಗೆ ತಂಬಾಕು ಉತ್ಪನ್ನಗಳನ್ನು ಮಾರುವುದು ಹಾಗೂ ಮಕ್ಕಳಿಂದ ತಂಬಾಕು ಉತ್ಪನ್ನಗಳ ಮಾರಾಟ ಮಾಡಿಸುವುದನ್ನು ನಿಷೇಧಿಸಿರುವುದರ ಬಗ್ಗೆ, ಹಾಗೂ ಶಾಲಾ ಕಾಲೇಜು, ಶಿಕ್ಷಣ ಸಂಸ್ಥೆಗಳ 100 ಯಾರ್ಡ್ ಅಂತರದಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡದಿರುವುದು, ಸೆಕ್ಷನ್ 4 ಸಾರ್ವಜನಿಕ ಪ್ರದೇಶದಲ್ಲಿ ಧೂಮಪಾನ ನಿಷೇಧ ಮತ್ತು ತಂಬಾಕು ಉತ್ಪನ್ನಗಳ ಪ್ಯಾಕ್‍ಗಳ ಮೇಲೆ ಎಚ್ಚರಿಕೆ ಚಿಹ್ನೆ ಇಲ್ಲದೆ ಮಾರಾಟ ಮಾಡುವುದನ್ನು ನಿಷೇಧÀ ಇರುವ ಬಗ್ಗೆ ತಂಡದ ಸದಸ್ಯರು ಮಾಹಿತಿ ನೀಡಿದರು.

ಹರಿಹರ ತಹಶೀಲ್ದಾರ್ ಕೆ.ಬಿ ರಾಮಚಂದ್ರಪ್ಪ ಅವರು, ತಂಬಾಕು ಉತ್ಪನ್ನಗಳ ಹೋಲ್‍ಸೇಲ್ ಹಾಗೂ ರಿಟೇಲ್ ಮಾರಾಟ ಅಂಗಡಿಗಳ ಮಾಲೀಕರು ಕೋಟ್ಪಾ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು, ತಪ್ಪಿದಲ್ಲಿ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು. ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಚಂದ್ರಮೋಹನ.ಡಿ.ಎಂ, ಜಿಲ್ಲಾ ಆರೋಗ್ಯ ಮೇಲ್ವಿಚಾರಣಾಧಿಕಾರಿ ಎಂ.ವಿ ಹೊರಕೇರಿ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಲಹೆಗಾರ ಸತೀಶ್ ಕಲಹಾಳ್, ಸಮಾಜ ಕಾರ್ಯಕರ್ತ ಕೆ.ಪಿ.ದೇವರಾಜ್, ಬಿ.ಹೆಚ್.ಈ.ಓ ಎಸ್.ಹೆಚ್ ಪಾಟೀಲ್, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಎಂ.ಉಮ್ಮಣ್ಣ, ಶಿಕ್ಷಣ ಸಂಯೋಜಕ ಅಶೋಕ್, ಕಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ದಾದಾಪೀರ್, ನಗರಸಭೆಯ ಆರೋಗ್ಯ ನಿರೀಕ್ಷಕ ರವಿಪ್ರಕಾಶ, ನಗರ ಪೊಲೀಸ್ ಠಾಣೆಯ ಪೇದೆ ಡಿ.ಹೆಚ್ ಸಿರಿಗೇರಿ ಮತ್ತು ಶೈಲಾ ಮದ್ದೂರು ಸೇರಿದಂತೆ ಇತರಿದ್ದರು.

LEAVE A REPLY

Please enter your comment!
Please enter your name here