ಮಲ್ಲದಗುಡ್ಡದಲ್ಲಿ ನೂತನ ಬಸ್ ನಿಲ್ದಾಣ ಕಾರ್ಯ ಆರಂಭ: ಗ್ರಾಮ ಪಂಚಾಯಿತಿ ಸದಸ್ಯ ರವಿ ಗೌಡ ಮಲ್ಲದಗುಡ್ಡ

0
279

ಬಿಸಿಲನಾಡು ರಾಯಚೂರಿನಲ್ಲಿ ಈಗ ಬೆಳಗ್ಗೆ ಹೊತ್ತಲ್ಲೇ ಹೊರಗಡೆ ಓಡಾಡುವುದು ಕಷ್ಟ, ಅಂಥದ್ದರಲ್ಲಿ ಸಿಂಧನೂರು ತಾಲೂಕಿನ ಮಲ್ಲದಗುಡ್ಡ ಗ್ರಾಮಸ್ಥರು ಬಿಸಿಲಿನಲ್ಲೇ ಪ್ರತಿದಿನ ಬಸ್‍ಗಾಗಿ ಕಾಯಬೇಕಿತ್ತು. ಕೆಲವು ವರ್ಷಗಳ ಹಿಂದೆ ಸಿಂಧನೂರು-ಕುಷ್ಟಗಿ ರಾಜ್ಯ ಹೆದ್ದಾರಿ ರಸ್ತೆ ಕಾಮಗಾರಿಗಾಗಿ ಬಸ್ ನಿಲ್ದಾಣ ತೆರವುಗೊಳಿಸಲಾಗಿತ್ತು.

ನಂತರ ಅಂದಿನ ಜನಪ್ರತಿನಿಧಿಗಳ ಇಚ್ಛಾಶಕ್ತಿಯ ಕೊರತೆಯಿಂದ ಬಸ್ ನಿಲ್ದಾಣ ಆಗದೇ ಇದ್ದಾಗ ಅಲ್ಲಿನ ಬೇಸತ್ತು ಸರ್ದಾರ್ ವಲ್ಲಭಭಾಯ್ ಪಟೇಲ್ ಯುವ ಸಂಘ ಹಾಗೂ ಗ್ರಾಮಸ್ಥರು ತಾವೇ ಸ್ವತಃ ತಾತ್ಕಾಲಿಕ ಬಸ್ ನಿಲ್ದಾಣ ನಿರ್ಮಿಸಿಕೊಂಡಿದ್ದರು.

ಇದೀಗ ನೂತನ ಬಸ್ ನಿಲ್ದಾಣ ಕಾರ್ಯ ನಡೆದಿರುವುದು, ಕೆಲವೇ ದಿನಗಳಲ್ಲಿ ಬಸ್ ನಿಲ್ದಾಣ ಕಾರ್ಯ ಪೂರ್ಣ ಆಗಲಿದೆ ಎಂಬ ಆಶಾಭಾವನೆ ಯೊಂದಿಗೆ ಗ್ರಾಮದ ಯುವಕರು ಹಾಗೂ ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ ಎಂದು ಗ್ರಾಮ ಪಂಚಾಯಿತಿ ಸದಸ್ಯರಾದ ರವಿ ಗೌಡ ಮಲ್ಲದಗುಡ್ಡ ಈ ಮೂಲಕ ತಿಳಿಸಿದ್ದಾರೆ.

ವರದಿ: ಅವಿನಾಶ ದೇಶಪಾಂಡೆ

LEAVE A REPLY

Please enter your comment!
Please enter your name here