ರಾಜ್ಯಾದ್ಯಂತ ಭಾರೀ ಮಳೆ :ಕರಾವಳಿ, ಮಲೆನಾಡಲ್ಲಿ ಮುಂದುವರೆಲಿರುವ ವರ್ಷಧಾರೆ!

0
79

ರಾಜ್ಯದ ಹಲವೆಡೆ ವ್ಯಾಪಕ ಮಳೆಯಾಗುತ್ತಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ, ರಾಜ್ಯದ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಜುಲೈ 17ರವರೆಗೆ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಹಾಗೂ ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಈ ಭಾಗದಲ್ಲಿ ಆರೆಂಜ್ ಅಲರ್ಟ್ ಘೋಷಣೆಯಾಗಿದೆ.

ಇತ್ತ, ಉತ್ತರ ಕರ್ನಾಟಕದ ಜಿಲ್ಲೆಗಳಾದ ಬೀದರ್‌, ಕಲಬುರಗಿ, ಬೆಳಗಾವಿ, ಧಾರವಾಡ, ರಾಯಚೂರು, ಯಾದಗಿರಿ, ಹಾವೇರಿ, ಗದಗ, ಬಾಗಲಕೋಟೆಯಲ್ಲೂ ಹಲವೆಡೆ ಮಳೆಯಾಗುತ್ತಿದೆ. ಈ ಭಾಗದಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆಯಾಗಿದೆ.

ಇನ್ನುಳಿದಂತೆ ಹಳೆ ಮೈಸೂರು ಹಾಗೂ ಬೆಂಗಳೂರು ಭಾಗದಲ್ಲಿ ಅಲ್ಲಲ್ಲಿ ಚೆದುರಿದಂತೆ ಮಳೆಯಾಗುತ್ತಿದೆ. ಉಷ್ಣಾಂಶ ಕೂಡಾ ಕುಸಿತ ಕಂಡಿದೆ.

ಜುಲೈ 17ರವರೆಗೆ ರಾಜ್ಯದಲ್ಲಿ ವ್ಯಾಪಕವಾಗಿ ಮಳೆಯಾಗಲಿದೆ. ಜುಲೈ 13ರಿಂದ ಆರಂಭವಾದ ಮುಂಗಾರಿನ ಆರ್ಭಟ, ಶುಕ್ರವಾರದವರೆಗೆ ಮುಂದುವರೆಯಲಿದೆ. ರಾಜ್ಯಾದ್ಯಂತ ನದಿಗಳು ಉಕ್ಕಿ ಹರಿಯುತ್ತಿವೆ. ಜಲಾಶಯಗಳಿಗೂ ಭಾರೀ ಪ್ರಮಾಣದ ನೀರು ಹರಿದುಬರುತ್ತಿದೆ.

LEAVE A REPLY

Please enter your comment!
Please enter your name here