‘ಸವಾಲುಗಳ ಮೀರಿದ, ಸಾಧನಾ ಪರ್ವ’ ಶೀರ್ಷಿಕೆಯುಳ್ಳ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದ ಕಿರುಹೊತ್ತಿಗೆ ಬಿಡುಗಡೆ

0
131

ಬೆಂಗಳೂರು ಗ್ರಾಮಾಂತರ ಜಿಲ್ಲೆ :ಪ್ರಸಕ್ತ ಸರ್ಕಾರವು ಅಧಿಕಾರಕ್ಕೆ ಬಂದು ಇಂದು ಎರಡು ವರ್ಷ ಪೂರ್ಣಗೊಳಿಸಿದ ಹಿನ್ನೆಲೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಹೊರತರಲಾದ ಸರ್ಕಾರದ ಯೋಜನೆಗಳ ಕುರಿತ ಎರಡು ವರ್ಷಗಳ ಸಮಗ್ರ ಮಾಹಿತಿಯುಳ್ಳ ‘ಸವಾಲುಗಳ ಮೀರಿದ, ಸಾಧನಾ ಪರ್ವ’ ಶೀರ್ಷಿಕೆಯುಳ್ಳ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದ ಕಿರುಹೊತ್ತಿಗೆಯನ್ನು ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಬಿಡುಗಡೆ ಮಾಡಿದರು.
ಅಪರ ಜಿಲ್ಲಾಧಿಕಾರಿ ಜಗದೀಶ‌.ಕೆ.ನಾಯಕ, ಜಿಲ್ಲಾ ಪಂಚಾಯಿತಿ ‌ಮುಖ್ಯ ಯೋಜನಾಧಿಕಾರಿ ವಿನುತಾರಾಣಿ, ಉಪ ವಿಭಾಗಾಧಿಕಾರಿ ಅರುಳ್‌ಕುಮಾರ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಕೃಷ್ಣಪ್ಪ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕಿ ಹೇಮಾವತಿ.ಜೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here