ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ತೊಂದರೆಯಾಗದಿರಲಿ; ಶಾಸಕ ಈ.ತುಕಾರಾಂ

0
110

ಸಂಡೂರು:ಜುಲೈ:28 ಕಾಲೇಜಿನ ಯಾವುದೇ ವಿದ್ಯಾರ್ಥಿಗೂ ಸಹ ಪರೀಕ್ಷೆಗೆ ತೊಂದರೆಯಾಗದ ರೀತಿಯಲ್ಲಿ ಮಾಸ್ಕ, ಸ್ಯಾನಿಟೈಸರ್ ಮತ್ತು ಸೂಕ್ತ ಪರೀಕ್ಷೆ ಮಾಡುವ ಮೂಲಕ ಪರೀಕ್ಷೆಗೆ ಅವಕಾಶ ನೀಡಿ, ಅಲ್ಲದೆ ಸಾರಿಗೆ ವ್ಯವಸ್ಥೆಯೂ ಸಹ ಉತ್ತಮವಾಗಿ ನೋಡಿಕೊಳ್ಳಿ ಎಂದು ಶಾಸಕ ಈ.ತುಕರಾಂ ತಿಳಿಸಿದರು.

ಪಟ್ಟಣದ ಸರ್ಕಾರಿ ಪ್ರಥಮದರ್ಜೆ ಕಾಲೇಜಿಗೆ ಭೇಟಿನೀಡಿ ಬಿ.ಎ., ಬಿ.ಎಸ್ಸಿ, ಬಿಕಾಂ ಹಾಗೂ ಬಿ.ಬಿ.ಎ ವಿದ್ಯಾರ್ಥಿಗಳ 1, 3, 5ನೇ ಸೇಮಿಸ್ಟ್ ವಿದ್ಯಾರ್ಥಿಗಳ ಪರೀಕ್ಷೆಗಳು ಪ್ರಾರಂಭವಾಗಿದ್ದು ಪರೀಕ್ಷಾ ಕೊಠಡಿಗಳಿಗೆ ಭೇಟಿ ನೀಡಿ ಸೂಕ್ತ ಪರಿಶೀಲನೆ ನಡೆಸಿ ಮಾಹಿತಿ ಪಡೆದರು, ಈ ಸಂದರ್ಭದಲ್ಲಿ ಮಾತನಾಡಿ ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಪರೀಕ್ಷೆಯಿಂದ ವಂಚಿತರಾಗಬಾರದು,ಅವರಿಗೆ ಬೇಕಾದ ಎಲ್ಲಾ ವ್ಯವಸ್ಥೆಯನ್ನು ಕಡ್ಡಾಯವಾಗಿ ಮಾಡಬೇಕು ಎಂದು ಪ್ರಾಚಾರ್ಯರಿಗೆ ತಿಳಿಸಿದರು.

ವಿದ್ಯಾರ್ಥಿಗಳು ಯಾವುದೇ ರೀತಿಯಿಂದ ಭಯ, ಅತಂಕದ ಮದ್ಯೆ ಪರೀಕ್ಷೆ ಬರೆಯದಂತೆ ನೋಡಿಕೊಳ್ಳಬೇಕು ಎಂದರು. ಕಾಲೇಜಿನಲ್ಲಿಯ ಎಲ್ಲಾ ರೀತಿಯ ನೀರಿನ, ಮೂಲಸೌಲಭ್ಯಗಳನ್ನು ಪರೀಶೀಲನೆ ಮಾಡಿ ಮಾಹಿತಿ ಪಡೆದುಕೊಂಡು, ಮುಂದಿನ ಪರೀಕ್ಷೆಯಿಂದ ಕಡ್ಡಾಯವಾಗಿ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಕುಡಿಯುವ ನೀರಿನ ಬಾಟಲಿ ಹಾಗೂ ಗ್ರಾಮೀಣ ವಿದ್ಯಾರ್ಥಿಗಳಿಗೆ ಸಾರಿಗೆ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪ್ರಾಂಶುಪಾಲರಾದ ಕೊಟ್ರೇಶ್.ಪಿ.ಅವರು ಮಾಹಿತಿ ನೀಡಿ ಕಾಲೇಜಿನಲ್ಲಿ ಇಂದು 314 ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಾಯಿಸಿಕೊಂಡಿದ್ದು ಅದರಲ್ಲಿ 299 ವಿದ್ಯಾರ್ಥಿಗಳು ಹಾಜರಾಗಿದ್ದಾರೆ, ಅಲ್ಲದೆ ಸಾಮಾಜಿಕ ಅಂತರ ಮತ್ತು ಸ್ಯಾನಿಟೈಸರ್, ಮಾಸ್ಕ ಎಲ್ಲಾ ವ್ಯವಸ್ಥೆ ಮಾಡಿರುವುದಾಗಿ ತಿಳಿಸಿದರು.

ಕಾಲೇಜಿನ ಉಪನ್ಯಾಸಕರಾದ ಸಿದ್ದೇಶ್ವರ, ಪ್ರಶಾಂತ್ ಮೋರೆ, ಜಬೀವುಲ್ಲಾ, ಹುಲಿಕುಂಟೆಪ್ಪ, ಮಂಜುನಾಥ ಇತರ ಉಪನ್ಯಾಸಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು, ಪರೀಕ್ಷೆಗಳು ಯಾವುದೇ ರೀತಿಯ ಗೊಂದಲಗಳಿಲ್ಲದೆ ಶಾಂತಿಯುತವಾಗಿ ನಡೆದವು.

LEAVE A REPLY

Please enter your comment!
Please enter your name here