ಪ್ರಮಾಣವಚನ ಸ್ವೀಕರಿಸಿದ ರಾಜ್ಯದ ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ

0
349

ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಎಸ್.ಬೊಮ್ಮಾಯಿ ಯವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು. ದೇವರ ಹೆಸರಿನಲ್ಲಿ ಬೊಮ್ಮಾಯಿಯವರು ಪ್ರಮಾಣವಚನ ಸ್ವೀಕರಿಸಿದರು. ನೂತನ ಮುಖ್ಯಮಂತ್ರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಶಾಸಕರು, ಸಂಸದರು ಹಾಗೂ ಬಿಜೆಪಿ ನಾಯಕರು, ಮುಖಂಡರು ಅಭಿನಂದನೆ ಸಲ್ಲಿಸಿದರು. ಈ ವೇಳೆ ಬಸವರಾಜ್ ಬೊಮ್ಮಾಯಿಯವರ ಬೆಂಬಲಿಗರು ರಾಜಭವನದ ಹೊರಗಡೆ ಸಂಭ್ರಮಾಚರಣೆ ನಡೆಸಿದರು.

ರಾಜಭವನದಲ್ಲಿ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ನಡೆಯಿತು. ಕರ್ನಾಟಕದ 23ನೇ ಮುಖ್ಯಮಂತ್ರಿಯಾಗಿ ಬಸವರಾಜ್ ಎಸ್.ಬೊಮ್ಮಾಯಿಯವರು ಪ್ರಮಾಣ ವಚನ ಸ್ವೀಕರಿಸಿದರು. ನಿನ್ನೆ ಸಂಜೆ(ಜುಲೈ.27) 7 ಗಂಟೆಗೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಸಮಾರಂಭದಲ್ಲಿ ಬೊಮ್ಮಾಯಿಯವರನ್ನು ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆ ಮಾಡಲಾಗಿತ್ತು. ಕಾರ್ಯಕ್ರಮ ಮುಗಿದ ಬಳಿಕ ರಾಜಭವನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಬೊಮ್ಮಾಯಿ ಭೇಟಿ ಮಾಡಿದ್ದರು.

ಬಳಿಕ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ನಿಯೋಜಿತ ಮುಖ್ಯಮಂತ್ರಿ ಬಸವರಾಜ್ ಎಸ್.ಬೊಮ್ಮಾಯಿಯವರಿಗೆ ಭವ್ಯ ಸ್ವಾಗತ ಕೋರಲಾಯಿತು.

ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರು ಇಂದು ಸಂಸತ್ತಿನ ಪ್ರಧಾನ ಮಂತ್ರಿ ಕಚೇರಿಯಲ್ಲಿ ಸಭೆ ನಡೆಸಲಿದ್ದಾರೆ. ಈ ವೇಳೆ ರಾಜ್ಯದ ನೂತನ ಸಚಿವ ಸಂಪುಟದ ಕುರಿತು ಚರ್ಚೆ ನಡೆಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ಬಸವರಾಜ್ ಬೊಮ್ಮಾಯಿಯವರು ಇಂದು ಸಂಜೆ ದೆಹಲಿಗೆ ತೆರಳಲಿದ್ದಾರೆ. ಬಿಜೆಪಿ ರಾಷ್ಟ್ರೀಯ ನಾಯಕರನ್ನು ಭೇಟಿ ಮಾಡಲಿರುವ ಅವರು ನೂತನ ಸಚಿವ ಸಂಪುಟ ರಚನೆ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಎಸ್.ಬೊಮ್ಮಾಯಿಯವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು. ದೇವರ ಹೆಸರಿನಲ್ಲಿ ಬಸವರಾಜ್ ಬೊಮ್ಮಾಯಿಯವರು ಪ್ರಮಾಣವಚನ ಸ್ವೀಕರಿಸದರು. ನೂತನ ಮುಖ್ಯಮಂತ್ರಿಗೆ ರಾಜ್ಯಪಾಲರು ಸೇರಿದಂತೆ ಅನೇಕರು ಅಭಿನಂದನೆ ಸಲ್ಲಿಸಿದರು.

ಬಸವರಾಜ್ ಬೊಮ್ಮಾಯಿ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲು ಇನ್ನೂ ಕೆಲವೇ ಕ್ಷಣಗಳು ಮಾತ್ರ ಬಾಕಿ ಇವೆ. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ರಾಜಭವನಕ್ಕೆ ಆಗಮಿಸಿದ್ದಾರೆ. ರಾಷ್ಟ್ರಗೀತೆ ಮೊಳಗಿದ ತಕ್ಷಣ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ.

ಬಸವರಾಜ್ ಬೊಮ್ಮಾಯಿ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲು ಇನ್ನೂ ಕೆಲವೇ ಕ್ಷಣಗಳು ಮಾತ್ರ ಬಾಕಿ ಇವೆ. ರಾಜ್ಯದ ಮುಂದಿನ ಸಿಎಂ ಆಗಿ ಬೊಮ್ಮಾಯಿಯವರನ್ನು ಆಯ್ಕೆ ಮಾಡಿದ್ದಕ್ಕೆ ಬಿಜೆಪಿ ಕಾರ್ಯಕರ್ತರು ರಾಜಭವನದ ಹೊರಗಡೆ ಸಂಭ್ರಮಾಚರಣೆ ನಡೆಸಿದರು. ನಾವು ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ ಪಕ್ಷದ ಇನ್ನುಳಿದ ನಾಯಕರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇವೆ. ನಮ್ಮ ಕ್ಷೇತ್ರದ(ಶಿಗ್ಗಾಂವ) ಶಾಸಕರು ನೂತನ ಸಿಎಂ ಆಗಿ ಆಯ್ಕೆಯಾಗಿದ್ದಕ್ಕೆ ನಮಗೆ ತುಂಬಾ ಸಂತೋಷವಾಗಿದೆ ಎಂದು ಬೆಂಬಲಿಗರು ಹರ್ಷ ವ್ಯಕ್ತಪಡಿಸಿದ್ದಾರೆ.

ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಎಸ್.ಬೊಮ್ಮಾಯಿ ಪದಗ್ರಹಣ ಸಮಾರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಬಿಜೆಪಿ ನಾಯಕರು, ಮುಖಂಡರು, ಶಾಸಕರು, ಸಂಸದರು ರಾಜಭವನಕ್ಕೆ ಆಗಮಿಸಿದ್ದು, ಬಸವರಾಜ್ ಬೊಮ್ಮಾಯಿಯವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಬಸವರಾಜ್ ಬೊಮ್ಮಾಯಿ ಪದಗ್ರಹಣ ಹಿನ್ನೆಲೆ ಅವರ ಕುಟುಂಬ ಸದಸ್ಯರು ರಾಜಭವನಕ್ಕೆ ಆಗಮಿಸಿದ್ದಾರೆ. ಪತ್ನಿ, ಪುತ್ರ, ಪುತ್ರಿ ಸೇರಿದಂತೆ ಕುಟುಂಬ ಸದಸ್ಯರು ಸಮಾರಂಭಕ್ಕೆ ಆಗಮಿಸಿದ್ದು, ನಗುಮೊಗದಲ್ಲಿ ಕಂಡುಬಂದರು.

ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ನೂತನ ಸಿಎಂ ಬಸವರಾಜ್ ಬೊಮ್ಮಾಯಿಯವರು ಸರಿಪಡಿಸಲಿ- ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

ಇಂದು ಸಂಜೆ 5 ಗಂಟೆಗೆ ರಾಜ್ಯ ಬಿಜೆಪಿ ಕಚೇರಿಯಲ್ಲಿ ನೂತನ ಮುಖ್ಯಮಂತ್ರಿಗೆ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ. ಬಳಿಕ ಬಸವರಾಜ್ ಬೊಮ್ಮಾಯಿಯವರು ದೆಹಲಿಗೆ ತೆರಳಲಿದ್ದಾರೆ. ಬಿಜೆಪಿ ರಾಷ್ಟ್ರೀಯ ನಾಯಕರನ್ನು ಭೇಟಿಯಾಗಿ ನೂತನ ಸಚಿವ ಸಂಪುಟದ ಬಗ್ಗೆ ಮಹತ್ವದ ಚರ್ಚೆ ನಡೆಸಲಿದ್ದಾರೆ ಅಂತಾ ಹೇಳಲಾಗುತ್ತಿದೆ.

ಬಿ.ಎಸ್.ಯಡಿಯೂರಪ್ಪನವರು ಹಿರಿಯ ನಾಯಕರು. ಅವರ ಮಾರ್ಗದರ್ಶನದಲ್ಲಿ ನಾನು ಮುಂದುವರೆಯುತ್ತೇನೆ- ಬಸವರಾಜ್ ಬೊಮ್ಮಾಯಿ

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಬಸವರಾಜ್ ಬೊಮ್ಮಾಯಿಯವರು ರಾಜಭವನಕ್ಕೆ ಆಗಮಿಸಿದ್ದಾರೆ. ಸಂಗೀತ ವಾದ್ಯಗಳ ಮೂಲಕ ಅವರನ್ನು ಬರಮಾಡಿಕೊಳ್ಳಲಾಯಿತು. ಇನ್ನು ಕೆಲವೇ ಕ್ಷಣಗಳಲ್ಲಿ ಬಸವರಾಜ್ ಬೊಮ್ಮಾಯಿಯವರು ಪದಗ್ರಹಣ ಸ್ವೀಕರಿಸಲಿದ್ದಾರೆ. ಬಿ.ಎಸ್.ಯಡಿಯೂರಪ್ಪ, ಎಂ.ಪಿ.ರೇಣುಕಾಚಾರ್ಯ ಸೇರಿದಂತೆ ಸಂಸದರು, ಶಾಸಕರು ಕೂಡ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ.

ಸಚಿವ ಸಂಪುಟದ ಬಗ್ಗೆ ಇದೀಗ ಯಾವುದೇ ಚರ್ಚೆ ನಡೆಯುತ್ತಿಲ್ಲ. ವೀಕ್ಷಕರು ದೆಹಲಿಗೆ ಹೋದ ಬಳಿಕ ಸಂಪುಟದ ಬಗ್ಗೆ ಚರ್ಚೆ ನಡೆಸುತ್ತೇವೆ. ಆದಷ್ಟು ಬೇಗ ಸಚಿವ ಸಂಪುಟ ರಚನೆ ಮಾಡುತ್ತೇವೆ ಎಂದು ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಪ್ರಮಾಣವಚನ ಸಮಾರಂಭಕ್ಕೂ ಮುನ್ನ ಬಸವರಾಜ್ ಬೊಮ್ಮಾಯಿಯವರು ಕೇಂದ್ರ ಬಿಜೆಪಿ ವೀಕ್ಷಕ ಮತ್ತು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಮತ್ತು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾದರು.

ಬಸವರಾಜ್ ಬೊಮ್ಮಾಯಿ ಪ್ರಮಾಣವಚನ ಸ್ವೀಕರಿಸಲಿರುವ ರಾಜಭವನದ ಸುತ್ತಮುತ್ತ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಕಾರ್ಯಕ್ರಮಕ್ಕೆ ಕೇವಲ 1 ಸಾವಿರ ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ. ಈಗಾಗಲೇ ಬಿಜೆಪಿ ನಾಯಕರು, ಮುಖಂಡರು ರಾಜಭವನಕ್ಕೆ ಆಗಮಿಸಿದ್ದಾರೆ.

ನೂತನ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸುವುದಕ್ಕೂ ಮುನ್ನ ಬಸವರಾಜ್ ಬೊಮ್ಮಾಯಿಯವರು ಬೆಂಗಳೂರಿನ ಭಗವಾನ್ ಶ್ರೀ ಮಾರುತಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

LEAVE A REPLY

Please enter your comment!
Please enter your name here