ವಿಮ್ಸ್ ನಲ್ಲಿ ವೈದ್ಯಕೀಯ ವಿದ್ಯಾರ್ಥಿಗಳಿಗೆ ಮಕ್ಕಳ ಆರೋಗ್ಯದ ರಸಪ್ರಶ್ನೆ ಸ್ಪರ್ಧೆ ‘ಮಕ್ಕಳ ಆರೋಗ್ಯ’ ಆಸಕ್ತಿ ಹೆಚ್ಚಿಸುವ ಉದ್ದೇಶದಿಂದ ರಸಪ್ರಶ್ನೆ ಸ್ಪರ್ಧೆ:ವಿಮ್ಸ್ ನಿರ್ದೇಶಕ ಗಂಗಾಧರಗೌಡ

0
99

ಬಳ್ಳಾರಿ,ಜು.30: ಮಕ್ಕಳ ಆರೋಗ್ಯದ ಕುರಿತು ಹಾಗೂ ಮಕ್ಕಳ ಆರೋಗ್ಯದ ವಿಭಾಗದ ಬಗ್ಗೆ ವೈದ್ಯಕೀಯ ವಿದ್ಯಾರ್ಥಿಗಳಲ್ಲಿ ಆಸಕ್ತಿಯನ್ನು ಹೆಚ್ಚಿಸುವ ಉದ್ದೇಶದಿಂದ ರಸಪ್ರಶ್ನೆ ಸ್ಪರ್ಧೆ ಆಯೋಜಿಸಿಕೊಂಡು ಬರಲಾಗುತ್ತಿದೆ ಎಂದು ವಿಮ್ಸ್ ನಿರ್ದೇಶಕರಾದ ಡಾ.ಟಿ.ಗಂಗಾಧರ ಗೌಡ ಅವರು ಹೇಳಿದರು.

ವಿಮ್ಸ್ನ ಮಕ್ಕಳ ವಿಭಾಗ, ಭಾರತೀಯ ಮಕ್ಕಳ ವೈದ್ಯರ ಸಂಘ ಹಾಗೂ ಭಾರತೀಯ ವೈದ್ಯರ ಸಂಘದ ಸಹಯೋಗದಲ್ಲಿ ವಿಮ್ಸ್ನ ಶಿಕ್ಷಕರ ಭವನದಲ್ಲಿ ಗುರುವಾರ ವೈದ್ಯಕೀಯ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಮಕ್ಕಳ ಆರೋಗ್ಯದ ಕುರಿತ ರಸಪ್ರಶ್ನೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ವೈದ್ಯಕೀಯ ವಿದ್ಯಾರ್ಥಿಗಳಿಗೆ ಈ ರೀತಿಯ ಸ್ಫರ್ಧೆಗಳಲ್ಲಿ ಭಾಗವಹಿಸುವುದರಿಂದ ಸರ್ವತೋಮುಖ ಬೆಳವಣಿಗೆಯಾಗಲು ಸಾಧ್ಯ ಎಂದು ಹೇಳಿದ ವಿಮ್ಸ್ ನಿರ್ದೇಶಕ ಗಂಗಾಧರಗೌಡ ಅವರು ವಿದ್ಯಾರ್ಥಿಗಳು ಇಂತಹ ಸ್ಪರ್ಧೆಗಳಲ್ಲಿ ತಮ್ಮ ಜ್ಞಾನವನ್ನು ಒರೆಗೆ ಹಚ್ಚಿ ಎಂದರು.
ಸತತ 34 ವರ್ಷಗಳಿಂದ ರಸಪ್ರಶ್ನೆ ಸ್ಫರ್ಧೆ ನಡೆಸುತ್ತಿರುವ ಭಾರತೀಯ ಮಕ್ಕಳ ವೈದ್ಯರ ಸಂಘ ಹಾಗೂ ವಿಮ್ಸ್ ಮಕ್ಕಳ ಆರೋಗ್ಯ ವಿಭಾಗಗಳ ಕಾರ್ಯ ಶ್ಲಾಘನೀಯವಾಗಿದ್ದು ಇದು ಹೀಗೆ ನಿರಂತರವಾಗಿ ಸಾಗಲಿ ಎಂದು ಅವರು ಹೇಳಿದರು.
ಈ ರಸಪ್ರಶ್ನೆ ಸ್ಪರ್ಧೆ ಕಾಲೇಜು ಮಟ್ಟದ್ದಾಗಿದ್ದು,ಇದರಲ್ಲಿ ವಿಜೇತರಾದ ವಿದ್ಯಾರ್ಥಿಗಳು ಮುಂದೆ ವಲಯ ಮಟ್ಚ, ರಾಜ್ಯಮಟ್ಟ ಹಾಗೂ ರಾಷ್ಟ್ರಮಟ್ಟದಲ್ಲೂ ಸಹ ಭಾಗವಹಿಸಬಹುದಾಗಿದೆ.
ವಿಮ್ಸ್ನಲ್ಲಿ ನಡೆದ ಸ್ಫರ್ಧೆಯಲ್ಲಿ ನಾಲ್ಕನೇ ವರ್ಷದ ವಿದ್ಯಾರ್ಥಿಗಳನ್ನೊಳಗೊಂಡ ಪ್ರಜ್ವಲ್ ಗುಡಿ ಮತ್ತು ಅರವಿಂದ್ ತಂಡ ಅತಿ ಹೆಚ್ಚು ಅಂಕಗಳನ್ನು ಪಡೆದು ಮುಂದಿನ ಹಂತಕ್ಕೆ ಅರ್ಹತೆ ಪಡೆದಿದೆ.
ರಸಪ್ರಶ್ನೆ ಕಾರ್ಯಕ್ರಮದ ಸಂಯೋಜಕ ಡಾ.ರಿಯಾಜ್ ಅಹಮದ್ ಅವರು ಸ್ಪರ್ಧೆಯನ್ನು ನಿರ್ವಹಿಸಿದರು.

ಈ ಸಂದರ್ಭದಲ್ಲಿ ವಿಮ್ಸ್ನ ಮುಖ್ಯ ಆಡಳಿತಾಧಿಕಾರಿಗಳಾದ ಚೆನ್ನಪ್ಪ, ಪ್ರಾಂಶುಪಾಲರಾದ ಡಾ.ಕೃಷ್ಣಸ್ವಾಮಿ, ಮಕ್ಕಳ ಆರೋಗ್ಯ ವಿಭಾಗದ ಪ್ರಾಧ್ಯಾಪಕರು ಹಾಗೂ ಮುಖ್ಯಸ್ಥರಾದ ಡಾ.ದುರುಗಪ್ಪ, ಭಾರತೀಯ ಮಕ್ಕಳ ವೈದ್ಯರ ಸಂಘದ ಜಿಲ್ಲಾ ಕಾರ್ಯದರ್ಶಿಗಳಾದ ಡಾ.ಭಾವನಾ, ಭಾರತೀಯ ವೈದ್ಯಕೀಯ ಸಂಘದ ಜಿಲ್ಲಾ ಕಾರ್ಯದರ್ಶಿಗಳಾದ ಡಾ.ಬಿ.ಕೆ.ಶ್ರೀಕಾಂತ್, ಮಕ್ಕಳ ವಿಭಾಗದ ಪ್ರಾಧ್ಯಾಪಕರಾದ ಡಾ.ವಿಶ್ವನಾಥ್ ಮತ್ತು ವಿಮ್ಸ್ನ ವೈದ್ಯಕೀಯ ವಿದ್ಯಾರ್ಥಿಗಳು ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here