ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಸಭೆಯ ಪ್ರಗತಿ ಪರಿಶೀಲನಾ ಸಭೆ 30 ದಿನದೊಳಗೆ ಧೂಮಪಾನ ಪ್ರದೇಶ ಸ್ಥಾಪಿಸದಿದ್ದಲ್ಲಿ ಕ್ರಮಕೈಗೊಳ್ಳಿ:ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ

0
168

ಬಳ್ಳಾರಿ,ಜು.31:ಜಿಲ್ಲೆಯಲ್ಲಿರುವ 30 ಆಸನಗಳ ಮೇಲ್ಪಟ್ಟ ಬಾರ್ ಮತ್ತು ರೆಸ್ಟೋರೆಂಟ್‌ಗಳಲ್ಲಿ ಕೋಟ್ಪಾ ಕಾಯ್ದೆಯ ಅನುಸಾರ ನಾಮಫಲಕ ಅಳವಡಿಸುವುದರ ಜೊತೆಗೆ ಧೂಮಪಾನ ಪ್ರದೇಶಗಳನ್ನು ಸ್ಥಾಪಿಸಬೇಕು;ಈ ಕುರಿತು ಕಟ್ಟುನಿಟ್ಟಿನ ಸೂಚನೆ ನೀಡಿ ಎಂದು ಅಬಕಾರಿ ಇಲಾಖೆಯ ಉಪ ಆಯುಕ್ತರಿಗೆ ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ ಅವರು ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿಯ ವಿಡಿಯೋ ಕಾನ್ಪರೆನ್ಸ್ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬಾರ್ ಮತ್ತು ರೆಸ್ಟೋರೆಂಟ್‌ಗಳಲ್ಲಿ ಕೋಟ್ಪಾ ಕಾಯ್ದೆಯ ಅನುಸಾರ ಕಟ್ಟುನಿಟ್ಟಿನ ಸೂಚನೆ ನೀಡಿದಾಗಿಯೂ ನಿರ್ಲಕ್ಷö್ಯ ಮುಂದುವರಿಸಿದ್ದಲ್ಲಿ ಅವರ ಮೇಲೆ ನಿಯಮಾನುಸಾರ ಕ್ರಮಕೈಗೊಳ್ಳುವಂತೆ ಅವರು ಸೂಚನೆ ನೀಡಿದರು.
ಅಬಕಾರಿ ಇಲಾಖೆಯ ಅಧಿಕಾರಿಗಳು ಇದುವರೆಗೆ 21ಬಾರ್ ಮತ್ತು ರೆಸ್ಟೋರೆಂಟ್‌ಗಳು ಕೋಟ್ಪಾ ಕಾಯ್ದೆಯ ಅನುಸಾರ ಧೂಮಪಾನ ಪ್ರದೇಶಗಳನ್ನು ಸ್ಥಾಪಿಸಿದ್ದು,ಉಳಿದವುಗಳಲ್ಲಿ ಶೀಘ್ರ ಸ್ಥಾಪಿಸುವ ನಿಟ್ಟಿನಲ್ಲಿ ಕ್ರಮವಹಿಸುವುದಾಗಿ ಅವರು ತಿಳಿಸಿದರು.

ಅಂಗಡಿ,ಹೋಟಲ್,ಬೇಕರಿ,ಲಾಡ್ಜ್,ಬಾರ್ ಮತ್ತು ರೆಸ್ಟೋರೆಂಟ್ ಹಾಗೂ ಇತರೇ ವಾಣಿಜ್ಯ ಮಳಿಗೆಗಳಲ್ಲಿ ಕಡ್ಡಾಯವಾಗಿ ಕೋಟ್ಪಾ ಕಾಯ್ದೆಗೆ ಸಂಬಂದಿಸಿದ ಸೆಕ್ಷನ್-4 ಮತ್ತು ಸೆಕ್ಷನ್-6ಎ ನಾಮಫಲಕಗಳನ್ನು ಹಾಕಬೇಕು; ಈ ನಿಟ್ಟಿನಲ್ಲಿ ಸಂಬಂಧಿಸಿದ ಅಧಿಕಾರಿಗಳು ಕ್ರಮವಹಿಸಬೇಕು; ನಾಮಫಲಕ ಹಾಕದ ಅಂಗಡಿಗಳಿಗೆ ನೋಟಿಸ್ ಜಾರಿ ಮಾಡಿ ಎಂದು ಅವರು ಹೇಳಿದರು.

ಗ್ರಾಮಗಳಲ್ಲಿ ತಂಬಾಕು ನಿಯಂತ್ರಣ ಸಮಿತಿ ಸ್ಥಾಪಿಸಿ:
ಜಿಲ್ಲೆಯಲ್ಲಿರುವ ಎಲ್ಲ ಗ್ರಾಪಂಗಳಲ್ಲಿ ಹಾಗೂ ಗ್ರಾಮಗಳಲ್ಲಿ ತಂಬಾಕು ನಿಯಂತ್ರಣ ಸಮಿತಿಗಳನ್ನು ರಚನೆ ಮಾಡಬೇಕು ಎಂದು ಜಿಪಂ ಅಧಿಕಾರಿಗಳಿಗೆ ಸೂಚನೆ ನೀಡಿದ ಅಪರ ಜಿಲ್ಲಾಧಿಕಾರಿ ಮಂಜುನಾಥ ಅವರು ಕೋಟ್ಪಾ-2003ರ ಸೆಕ್ಷನ್ 4,5,6ಎ ಮತ್ತು 7ರ ಅನುಷ್ಠಾನಗೊಳಿಸಬೇಕು. ಐಇಸಿ ಚಟುವಟಿಕೆಗಳನ್ನ ಕೈಗೊಳ್ಳಬೇಕು ಹಾಗೂ ಕಾರ್ಯಾಚರಣೆ ನಡೆಸಿ ದಂಡ ಸಂಗ್ರಹಿಸುವಂತೆ ಅವರು ಸೂಚಿಸಿದರು.

ಜಿಲ್ಲೆಯ ಹರಪನಳ್ಳಿ,ಕೊಟ್ಟೂರು ಹಾಗೂ ಇನ್ನೀತರ ಪ್ರದೇಶಗಳಲ್ಲಿ ತಂಬಾಕು ಬೆಳೆಯುವ ರೈತರಿದ್ದು,ಆ ರೈತರಿಗೆ ತಂಬಾಕು ಬದಲಿಗೆ ಪರ್ಯಾಯ ಬೆಳೆಗಳನ್ನು ಬೆಳೆಯಲು ಅರಿವು ಮೂಡಿಸುವ ಕೆಲಸ ಕೃಷಿ ಇಲಾಖೆ ಅಧಿಕಾರಿಗಳು ಮಾಡಬೇಕು ಎಂದು ಅವರು ಹೇಳಿದರು.
ಕೋಟ್ಪಾ ಕಾಯ್ದೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ನಡೆಸುವ ಕಾರ್ಯಾಚರಣೆಗಳಲ್ಲಿ ಸಮಿತಿ ಸದಸ್ಯರಾಗಿರುವ ವಿವಿಧ ಇಲಾಖೆಗಳ ಅಧಿಕಾರಿಗಳು ಸಹ ಪಾಲ್ಗೊಳ್ಳಬೇಕು ಎಂದು ಹೇಳಿದರು.

ಜಿಲ್ಲೆಯಲ್ಲಿ 2021 ಜನೆವರಿಯಿಂದ ಇಲ್ಲಿಯವರೆಗೆ 2454 ಕ್ಷಯರೋಗ ಪ್ರಕರಣಗಳು ಪತ್ತೆಯಾಗಿದ್ದು, ಅವುಗಳಲ್ಲಿರುವ ತಂಬಾಕು ವ್ಯಸನಿಗಳನ್ನು ತಂಬಾಕು ಮುಕ್ತ ಕೇಂದ್ರಗಳಿಗೆ ಶಿಫಾರಸ್ಸು ಮಾಡಲಾಗಿದೆ ಎಂದು ಕ್ಷಯರೋಗ ನಿಯಂತ್ರಣಾಧಿಕಾರಿಗಳ ಕಚೇರಿಯ ಪ್ರತಿನಿಧಿ ತಿಳಿಸಿದರು.
ಕೋಟ್ಪಾ ಕಾಯ್ದೆಗೆ ಸಂಬಂಧಿಸಿದಂತೆ ವಿವಿಧ ವಿಷಯಗಳ ಕುರಿತು ಸಭೆಯಲ್ಲಿ ಸುಧೀರ್ಘವಾಗಿ ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂಬಿ, ಜಿಲ್ಲಾ ಶಸ್ತçಚಿಕಿತ್ಸಕ ಡಾ.ಬಸರೆಡ್ಡಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರಮೇಶ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

LEAVE A REPLY

Please enter your comment!
Please enter your name here