75ನೇ ಸ್ವಾತಂತ್ರ್ಯ ದಿನಾಚರಣೆಯ ಆಜಾದಿ ಕಾ ಅಮೃತ್ ಮಹೋತ್ಸವ ನಿಮಿತ್ತ ಕೇಂದ್ರ ಗ್ರಂಥಾಲಯ ಸೇರಿ ಎಲ್ಲ ಗ್ರಂಥಾಲಯಗಳಲ್ಲಿ ಪುಸ್ತಕ ಪ್ರದರ್ಶನ

0
102

ಬಳ್ಳಾರಿ,ಆ.09: 75ನೇ ಸ್ವಾತಂತ್ರ್ಯ ದಿನಾಚರಣೆಯ ಆಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ ಸಾರ್ವನಿಕ ಗ್ರಂಥಾಲಯ ಇಲಾಖೆ ವ್ಯಾಪ್ತಿಯಡಿ ಬರುವ ನಗರದ ಕೇಂದ್ರ ಗ್ರಂಥಾಲಯ ಸೇರಿದಂತೆ ಜಿಲ್ಲೆಯಲ್ಲಿರುವ ಎಲ್ಲ ಗ್ರಂಥಾಲಯಗಳಲ್ಲಿ ಪುಸ್ತಕ ಪ್ರದರ್ಶನ ಸೋಮವಾರದಿಂದ ಆರಂಭವಾಗಿದೆ.
ಸಾಂಸ್ಕøತಿಕ ಸಮುಚ್ಛಯ ಆವರಣದಲ್ಲಿರುವ ನಗರದ ಕೇಂದ್ರ ಗ್ರಂಥಾಲಯದಲ್ಲಿ ಸೋಮವಾರ ಏರ್ಪಡಿಸಿದ್ದ ಪುಸ್ತಕ ಪ್ರದರ್ಶನಕ್ಕೆ ಜಿಲ್ಲಾ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕರಾದ ಬಿ.ಕೆ.ಲಕ್ಷ್ಮೀಕಿರಣ ಅವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಭಾರತ ಸ್ವಾತಂತ್ರ್ಯಕ್ಕಾಗಿ ದುಡಿದ ಹೊರಾಟಗಾರನ್ನು ಸ್ಮರಿಸುವುದು,ಅವರ ಜೀವನ ಚರಿತ್ರೆಯನ್ನು ಸಾರ್ವಜನಿಕರಿಗೆ ಹಾಗೂ ಮುಂದಿನ ಪೀಳಿಗೆಯ ಮಕ್ಕಳಿಗೆ ತಿಳಿಸುವುದು ಅತ್ಯಂತ ಅವಶ್ಯಕವಾಗಿದ್ದು, ಆ.09ರಿಂದ 15 ರವರೆಗೆ ಬಳ್ಳಾರಿ ಜಿಲ್ಲಾ/ನಗರ ಕೇಂದ್ರ ಗ್ರಂಥಾಲಯ ಹಾಗೂ ತಾಲೂಕು ಶಾಖಾ ಗ್ರಂಥಾಲಯಗಳಲ್ಲಿ ಪುಸ್ತಕ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ ಎಂದರು.

ಸಾರ್ವಜನಿಕರು ಮತ್ತು ಮಕ್ಕಳು ತಮ್ಮ ಹತ್ತಿರದ ಸಾರ್ವಜನಿಕ ಗ್ರಂಥಾಲಯಗಳಿಗೆ ಭೇಟಿ ನೀಡಿ ಸ್ವಾತಂತ್ರ್ಯ ಹೊರಾಟಗಾರರ ಪುಸ್ತಕಗಳನ್ನು ಪರಾಮರ್ಶಿಸಬಹುದು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ನಗರ ಕೇಂದ್ರ ಗ್ರಂಥಾಲಯ ಸಿಬ್ಬಂದಿ ಮತ್ತು ಓದುಗರು ಇದ್ದರು.

LEAVE A REPLY

Please enter your comment!
Please enter your name here