ಅಸಂಘಟಿತ ವರ್ಗದ ಕಾರ್ಮಿಕರಿಗೆ ಆಹಾರ ಧಾನ್ಯಗಳ ಕಿಟ್ ವಿತರಣೆ

0
96

ಕಲಬುರಗಿ.ಆ.11-ಕಲಬುರಗಿ ಜಿಲ್ಲಾ ಕಾರ್ಮಿಕ ಇಲಾಖೆಯ ಕರ್ನಾಟಕ ರಾಜ್ಯ ಅಸಂಘಟಿತ ಭದ್ರತಾ ಮಂಡಳಿಯಿಂದ ಮಂಗಳವಾರ ಕಲಬುರಗಿ ನಗರದ ಡಾನ್ ಬಾಸ್ಕೋ ಸಂಸ್ಥೆಯಲ್ಲಿ “ಶ್ರಮಿಕರ ಬದುಕಿಗೆ ನೆರವಿನ ಆಸರೆ” ಯಾಗಲೆಂದು ಅಸಂಘಟಿತ ವರ್ಗದ ಕಾರ್ಮಿಕರಿಗೆ ಆಹಾರ ಧಾನ್ಯಗಳ ಕಿಟ್‍ಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕಲಬುರಗಿ ಜಿಲ್ಲಾ ಕಾರ್ಮಿಕ ಅಧಿಕಾರಿ ರಮೇಶ ಸುಂಬಡ ಮಾತನಾಡಿ, ಕಾರ್ಮಿಕ ಇಲಾಖೆಯಿಂದ ಸಿಗುವ ಎಲ್ಲಾ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಬೇಕು. ಇಂತಹ ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಎಲ್ಲರಿಗೂ ಸಹಾಯವಾಗಲು ಅಸಂಘಟಿತ ವರ್ಗದವರಿಗೆ ಎರಡು ಸಾವಿರ ರೂ.ಗಳನ್ನು ಅವರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತಿದೆ. ಇದರ ಜೊತೆಗೆ “ಶ್ರಮಿಕರ ಬದುಕಿಗೆ ನೆರವಿನ ಆಸರೆ” ಯಾಗಲೆಂದು ಅಸಂಘಟಿತ ವರ್ಗದ ಕಾರ್ಮಿಕರಿಗೆ ಆಹಾರ ಧಾನ್ಯಗಳ ಕಿಟ್‍ಗಳನ್ನು ವಿತರಣೆ ಮಾಡಲಾಗುತ್ತಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕೆಂದರು.

ಕಾರ್ಯಕ್ರಮದಲ್ಲಿ ಕಲಬುರಗಿ ಜಿಲ್ಲಾ ಬಾಲಕಾರ್ಮಿಕ ನಿರ್ಮೂಲನ ಸಂಘದ ಯೋಜನಾ ನಿರ್ದೇಶಕ ಸಂತೋಷ ಕುಲಕರ್ಣಿ ಮಾತನಾಡಿದರು. ಕಲಬುರಗಿ ಡಾನ್ ಬೋಸ್ಕೋ ಸಂಸ್ಥೆಯ ನಿರ್ದೇಶÀ ಫಾದರ ಟಾಮ್ ಚಿರಕಲ್ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಕಲಬುರಗಿ ವೃತ್ತದ ಹಿರಿಯ ಕಾರ್ಮಿಕ ನಿರೀಕ್ಷಕ ರವಿಂದ್ರಕುಮಾರ ಬಲ್ಲೂರ, ಮಕ್ಕಳ ಹಕ್ಕುಗಳ ಜಾಗೃತಿ ಅಭಿಯಾನದ ಸಂಯೋಜಕರಾದ ಎಸ್. ಗೀತಾ, ಜಿಲ್ಲಾ ಸಾಮಾಜಿಕ ಹೋರಾಟಗಾರ ರಾಜಕುಮಾರ ಎಮ್ ದೇವರಮನಿ ಹಾಗೂ ಶೀಲಾ ಬಿ. ವಾಡೇಕರ ಉಪಸ್ಥಿತರಿದ್ದರು.

ಭೀಮಾಶಂಕರ ಕಾರ್ಯಕ್ರಮ ನಿರೂಪಿಸಿದರು. ಅವಿನಾಶ ಸ್ವಾಗತಿಸಿ ಕೊನೆಯಲ್ಲಿ ವಂದಿಸಿದರು.

LEAVE A REPLY

Please enter your comment!
Please enter your name here