ಯುದ್ಧ ಸ್ಮಾರಕಕ್ಕೆ ಪುಷ್ಪಾರ್ಚನೆ ಮತ್ತು ಗೌರವ ನಮನ

0
132

ಮಡಿಕೇರಿ ಆ.11:-ಸ್ವಾತಂತ್ರ್ಯದ ವರ್ಷಾಚರಣೆಯ ಅಮೃತ ಮಹೋತ್ಸವ ಪ್ರಯುಕ್ತ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ಮ್ಯೂಸಿಯಂನಲ್ಲಿರುವ ಯುದ್ಧ ಸ್ಮಾರಕಕ್ಕೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರ, ಏರ್ ಮಾರ್ಷಲ್(ನಿವೃತ್ತ) ನಂದ ಕಾರ್ಯಪ್ಪ, ಜಿ.ಪಂ.ಸಿಇಒ ಭನ್ವರ್ ಸಿಂಗ್ ಮೀನಾ ಇತರರು ಪುಷ್ಪಾರ್ಚನೆ ಮಾಡಿ, ಗೌರವ ನಮನ ಸಲ್ಲಿಸಿದರು.

ಉಪ ಅರಣ್ಯ ಸಂರಕ್ಷಣಾಧಿಕಾರಿ ಚಿಣ್ಣಪ್ಪ, ತಹಶೀಲ್ದಾರ್ ಮಹೇಶ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಬಾನಾ ಎಂ.ಶೇಕ್, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಶಶಿಧರ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಕೆ.ಟಿ.ದರ್ಶನ್, ಪೌರಾಯುಕ್ತರಾದ ಎಸ್.ವಿ.ರಾಮದಾಸ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ದಯಾನಂದ, ಜಿಲ್ಲಾ ಕಾರ್ಮಿಕ ಅಧಿಕಾರಿ ಅನಿಲ್ ಬಗಟಿ, ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಪ್ರಮೋದ್, ಮಣಜೂರು ಮಂಜುನಾಥ್ ಅವರು ಯುದ್ದ ಸ್ಮಾರಕಕ್ಕೆ ಪುಷ್ಪಾರ್ಚನೆ ಮಾಡಿದರು. ಬಳಿಕ ಸನ್ನಿಸೈಡ್ ಆವರಣದಲ್ಲಿ ಗಿಡ ನೆಡುವ ಕಾರ್ಯಕ್ರಮ ನಡೆಯಿತು.

LEAVE A REPLY

Please enter your comment!
Please enter your name here