ಸ್ವಾತಂತ್ರ್ಯದಿನಾಚರಣೆ: ಪೂರ್ವ ಸಿದ್ಧತೆ ಬಗ್ಗೆ ಮಾಹಿತಿ ಪಡೆದ ಡಿಸಿ

0
76

ಮಡಿಕೇರಿ ಆ.11:-ಇದೇ ಆಗಸ್ಟ್, 15 ರಂದು ನಡೆಯುವ ಸ್ವಾತಂತ್ರ್ಯ ದಿನಾಚರಣೆಯ ಪೂರ್ವ ಸಿದ್ಧತೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಬುಧವಾರ ಅಧಿಕಾರಿಗಳಿಂದ ಮಾಹಿತಿ ಪಡೆದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಕಾರ್ಯಕ್ರಮ ನಡೆಯುವ ನಗರದ ಕೋಟೆ ಆವರಣದಲ್ಲಿ ವೇದಿಕೆ ನಿರ್ಮಾಣ ಮಾಡುವುದು, ಧ್ವಜಾರೋಹಣಕ್ಕೆ ಅಗತ್ಯ ಸಿದ್ಧತೆ, ಕೋಟೆ ಆವರಣದ ಸುತ್ತ ಸ್ವಚ್ಛಗೊಳಿಸುವುದು ಮತ್ತಿತರ ಬಗ್ಗೆ ಮಾಹಿತಿ ಪಡೆದರು.

ಸಾಂಸ್ಕøತಿಕ ಸಮಿತಿ ಕಾರ್ಯಗಳು, ಕೋವಿಡ್ ವಾರಿಯರ್ಸ್‍ಗೆ ಪ್ರಶಂಸನಾ ಪತ್ರ ನೀಡುವುದು, ಹೀಗೆ ಹಲವು ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ ಅವರು ವಿವಿಧ ಸಮಿತಿಗಳಿಗೆ ವಹಿಸಿರುವ ಜವಾಬ್ದಾರಿ ಸಂಬಂಧಿಸಿದಂತೆ ಇದುವರೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದರು.

ಪೌರಾಯುಕ್ತರಾದ ಎಸ್.ವಿ.ರಾಮದಾಸ್ ಅವರು ಕೋಟೆ ಆವರಣದಲ್ಲಿ ಸ್ವಚ್ಛ ಮಾಡಲಾಗಿದೆ. ಹಾಗೆಯೇ ಗಾಂಧಿ ಮಂಟಪದಲ್ಲಿ ಶುಚಿತ್ವ ಕಾರ್ಯ ಕೈಗೊಳ್ಳಲಾಗಿದೆ ಎಂದರು.
ಪೊಲೀಸ್ ಇನ್ಸ್‍ಪೆಕ್ಟರ್ ರಾಚಯ್ಯ ಅವರು ಪೊಲೀಸ್ ಕವಾಯತುನಲ್ಲಿ ಪೊಲೀಸ್ ಇಲಾಖೆಯಿಂದ ಎರಡು ತಂಡ, ಗೃಹ ರಕ್ಷಕ ದಳ ಹಾಗೂ ಅರಣ್ಯ ರಕ್ಷಕ ದಳ ಪಾಲ್ಗೊಳ್ಳಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಜಿ.ಪಂ.ಉಪಕಾರ್ಯದರ್ಶಿ ಲಕ್ಷ್ಮಿ ಅವರು ಕೊರೊನಾ ಸೈನಿಕರಾಗಿ ದುಡಿದವರಿಗೆ ಪ್ರಶಂಸನಾ ಪತ್ರ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.
ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಶಿವರಾಮ್ ಅವರು ಶುಕ್ರವಾರ ಮತ್ತು ಶನಿವಾರ ವೇದಿಕೆ ನಿರ್ಮಾಣ ಕಾರ್ಯ ನಡೆಯಲಿದೆ ಎಂದು ಅವರು ತಿಳಿಸಿದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ದೈಹಿಕ ಶಿಕ್ಷಣ ಅಧಿಕಾರಿ ವೆಂಕಟೇಶ್ ಅವರು ಸಾಂಸ್ಕøತಿಕ ಕಾರ್ಯಕ್ರಮ ಬಗ್ಗೆ ಮಾಹಿತಿ ನೀಡಿದರು. ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಎಚ್.ಶಶಿಧರ ಇತರರು ಇದ್ದರು.

LEAVE A REPLY

Please enter your comment!
Please enter your name here