ಸಿರುಗುಪ್ಪ ನ್ಯಾಯಾಲಯದ ಆವರಣದಲ್ಲಿ ಅಸಂಘಟಿತ ಕಾರ್ಮಿಕರಿಗೆ ಆಹಾರ ಕಿಟ್ ವಿತರಣೆ

0
98

ಬಳ್ಳಾರಿ,ಆ.12: ಸಿರುಗುಪ್ಪ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ಕಾರ್ಮಿಕ ಇಲಾಖೆಯ ಸಹಯೋಗದೊಂದಿಗೆ ಸಿರುಗುಪ್ಪ ನ್ಯಾಯಾಲಯದ ಆವರಣದಲ್ಲಿ ಅಸಂಘಟಿತ ಕಾರ್ಮಿಕರಿಗೆ ಬುಧವಾರ ಆಹಾರ ಕಿಟ್‌ಗಳನ್ನು ವಿತರಿಸಲಾಯಿತು.
ನ್ಯಾಯಾಧೀಶರಾದ ಸಿ.ಎನ್.ಲೋಕೇಶ್ ಅವರು ಅಸಂಘಟಿತ ಕಾರ್ಮಿಕರಿಗೆ ಆಹಾರ ಕಿಟ್‌ಗಳನ್ನು ವಿತರಿಸಿದರು.
ಕಾರ್ಮಿಕ ಇಲಾಖೆಯ ಸಾಮಾಜಿಕ ಭದ್ರತಾ ಮಂಡಳಿ ಸಿದ್ದಪಡಿಸಿರುವ ಈ ಆಹಾರ ಕಿಟ್‌ನಲ್ಲಿ 5 ಕೆ.ಜಿ ಅಕ್ಕಿ, ಬೇಳೆ, ಗೋದಿಹಿಟ್ಟು, ಸಕ್ಕರೆ, ಅಡುಗೆ ಎಣ್ಣೆ, ಉಪ್ಪು, ಕಾರ ಹಾಗೂ ಮಸಾಲೆ ಪದಾರ್ಥಗಳನ್ನು ಈ ಕಿಟ್ ಒಳಗೊಂಡಿದೆ.
ಸಿರುಗುಪ್ಪ ತಾಲೂಕಿನ ವಿವಿಧ ಅಸಂಘಟಿತ ಕಾರ್ಮಿಕರಿಗೆ ಕೋವಿಡ್ ಸಂದರ್ಭದಲ್ಲಿ ಅನುಸರಿಸಬೇಕಾದ ಸುರಕ್ಷತಾ ಕ್ರಮಗಳ ಕುರಿತು ಹಾಗೂ ಸಾಮಾಜಿಕ ಭದ್ರತಾ ಮಂಡಳಿಯಲ್ಲಿ ನೊಂದಣಿಯಾಗುವ ಬಗ್ಗೆ ನ್ಯಾಯಾಧೀಶರು ಇದೇ ಸಂದರ್ಭದಲ್ಲಿ ಕಾನೂನು ಅರಿವು ಮೂಡಿಸಿದರು.
ಈ ಸಂದರ್ಭದಲ್ಲಿ ಕಾರ್ಮಿಕ ನಿರೀಕ್ಷಕ ಸಿ.ಎನ್.ರಾಜೇಶ್, ಡಾಟಾ ಎಂಟ್ರಿ ಆಪರೇಟರ್ ಕಲಂದರ್, ಕಾರ್ಮಿಕ ಬಂಧು ಹನುಮಂತಪ್ಪ, ಯಲ್ಲಪ್ಪ ಸೇರಿದಂತೆ ವಕೀಲರ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಮತ್ತು ಇತರರು ಇದ್ದರು.

LEAVE A REPLY

Please enter your comment!
Please enter your name here