ನಗರ ಕೇಂದ್ರ ಗ್ರಂಥಾಲಯದಲ್ಲಿ ಗ್ರಂಥಪಾಲಕರ ದಿನ ಆಚರಣೆ

0
120

ಕಲಬುರಗಿ,ಆ,13-ಭಾರತದ ಗ್ರಂಥಾಲಯ ಚಳುವಳಿಯ ಪಿತಾಮಹರಾದ ಡಾ.ಎಸ್.ಆರ್.ರಂಗನಾಥನ್ ಅವರ ಜನ್ಮದಿನದ ಹಿನ್ನೆಲೆಯಲ್ಲಿ ಕಲಬುರಗಿ ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಕಚೇರಿಯಲ್ಲಿ ಗುರುವಾರ ಕಲಬುರಗಿ ಮಹಾನಗರ ಪಾಲಿಕೆಯ ಆಯುಕ್ತ ಸ್ನೇಹಲ್ ಸುಧಾಕರ ಲೋಖಂಡೆ ಅವರು ಡಾ.ಎಸ್.ಆರ್.ರಂಗನಾಥನ್‍ರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಗ್ರಂಥಪಾಲಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ನಗರ ಕೇಂದ್ರ ಗ್ರಂಥಾಲಯದ ಉಪ ನಿರ್ದೇಶಕ ಅಜಯಕುಮಾರ ಹಾಗೂ ಸಿಬ್ಬಂದಿಗಳಾದ ದೀಪಕ ಎಂ ಕಮತರ, ಪ್ರಾಣೇಶ, ಹರ್ಷವರ್ಧನ ಜಾನೆ, ನಂದಿನಿ, ಸಿದ್ಧಮ್ಮ, ಬಸವರಾಜ ಡೋಣಿ, ಮಂಜುಳಾ, ಪದ್ಮಾವತಿ, ಸಂಗೀತಾ, ಗುಣವಂತ, ಅಬ್ದುಲ್ ಖದೀರ ಹಾಗೂ ಎಲ್ಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಗ್ರಂಥಪಾಲಕರ ದಿನಾಚರಣೆಯ ಅಂಗವಾಗಿ ಪುಸ್ತಕ ಪ್ರದರ್ಶನವನ್ನು ಸಹ ಏರ್ಪಡಿಸಲಾಗಿತ್ತು.

LEAVE A REPLY

Please enter your comment!
Please enter your name here