ಆ.19ರಿಂದ ಸೆ.3ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ;ಆ.28,29ರಂದು ಸಾಮಾನ್ಯ ಪ್ರವೇಶ ಪರೀಕ್ಷೆ
ಸುಸೂತ್ರ ದ್ವಿತೀಯ ಪಿಯುಸಿ ಪರೀಕ್ಷೆಗೆ ಅಗತ್ಯ ಕ್ರಮಕೈಗೊಳ್ಳಿ: ಎಸಿ ಆಕಾಶ್ ಶಂಕರ್

0
113

ಬಳ್ಳಾರಿ,ಆ.17 : ಖಾಸಗಿಯಾಗಿ ನೋಂದಾಯಿಸಿಕೊಂಡ ವಿದ್ಯಾರ್ಥಿಗಳಿಗೆ
ಪರೀಕ್ಷಾ ಫಲಿತಾಂಶ ತಿರಸ್ಕಾರ ಮಾಡಿದ(ಅಂಕಗಳು ತೃಪ್ತಿ ಇರದ ಹಿನ್ನೆಲೆ)ಹೊಸ ವಿದ್ಯಾರ್ಥಿಗಳು ಮತ್ತು ಪುನಾರವರ್ತಿತ ವಿದ್ಯಾರ್ಥಿಗಳಿಗೆ ಇದೇ ಆ.19ರಿಂದ ಸೆ.3ರವರೆಗೆ ಜಿಲ್ಲೆಯ 8 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿವೆ. ಇದರ ಜೊತೆಗೆ ಆ.28 ಮತ್ತು 29ರಂದು 22 ಕೇಂದ್ರಗಳಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ)ನಡೆಸಲಾಗುತ್ತಿದೆ.
ಈ ಪರೀಕ್ಷೆಗಳು ಸುಸೂತ್ರವಾಗಿ ಜರುಗುವ ನಿಟ್ಟಿನಲ್ಲಿ ಪರೀಕ್ಷೆ ಸಮಯದಲ್ಲಿ ಯಾವುದೇ ರೀತಿಯ ಲೋಪವಾಗದಂತೆ ಎಲ್ಲ ರೀತಿಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಬಳ್ಳಾರಿ ಸಹಾಯಕ ಆಯುಕ್ತ ಡಾ.ಆಕಾಶ್ ಶಂಕರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಪರೀಕ್ಷೆ ಸಂಬಂಧಿತ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಆ.19ರಿಂದ ಸೆ.3ರವರೆಗೆ 8 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದೆ. ಇದರ ಜೊತೆಗೆ ಆ.28 ಮತ್ತು 29ರಂದು ಪ್ರಸಕ್ತ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಗಳು ನಡೆಯಲಿವೆ. ಈ ಸಮಯದಲ್ಲಿ ಪರೀಕ್ಷೆಗೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಿ, ಪರೀಕ್ಷಾ ಕೇಂದ್ರಗಳಲ್ಲಿ ಕೋವಿಡ್ ಮಾರ್ಗಸೂಚಿ ಅನ್ವಯ ಎಲ್ಲರೂ ಮಾಸ್ಕ್ ಮತ್ತು ಸಾಮಾಜಿಕ ಅಂತರ ಪಾಲಿಸಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಿ. ಸರಿಯಾದ ಸಮಯಕ್ಕೆ ಪ್ರಶ್ನೆ ಪತ್ರಿಕೆ ತಲುಪಿಸುವ ಕೆಲಸ ಮಾಡಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರಗಳ ವಿವರ: ಸಂಡೂರು ಬಾಲಕರ ಪದವಿ ಪೂರ್ವ ಕಾಲೇಜು,ಸಿರುಗುಪ್ಪ ವಿ.ಕೆ.ಜೆ. ಪದವಿ ಪೂರ್ವ ಕಾಲೇಜು, ಕೂಡ್ಲಿಗಿ ಸರ್ಕಾರಿ ಪದವಿ ಪೂರ್ವ ಕಾಲೇಜು,ಹೆಚ್.ಬಿ.ಹಳ್ಳಿ ಗಂ.ಭೀ ಸರ್ಕಾರಿ ಪದವಿ ಪೂರ್ವ ಕಾಲೇಜು,ಬಳ್ಳಾರಿ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಹೊಸಪೇಟೆ ಚಿತ್ತವಾಡ್ಗಿ ಸರ್ಕಾರಿ ಪದವಿ ಪೂರ್ವ ಕಾಲೇಜು, ಹಡಗಲಿಯ ಎಸ್‍ಎಸ್‍ಕೆ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು,ಹರಪನಹಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜು ಒಳಗೊಂಡಂತೆ ಒಟ್ಟು 8 ಪರೀಕ್ಷಾ ಕೇಂದ್ರಗಳಲ್ಲಿ 1129 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಬರೆಯಲಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಂ.ರಾಜು ಅವರು ವಿವರಿಸಿದರು.
ಆ.29 ಮತ್ತು 29ರಂದು 22 ಪರೀಕ್ಷಾ ಕೇಂದ್ರಗಳಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ: ಬಳ್ಳಾರಿಯ 9, ಹೊಸಪೇಟೆಯ 5, ಕೂಡ್ಲಿಗಿ, ಸಂಡೂರು, ಹರಪನಹಳ್ಳಿ ಹಾಗೂ ಸಿರುಗುಪ್ಪ ಒಳಗೊಂಡಂತೆ ನಾಲ್ಕು ತಾಲೂಕಿನ ತಲಾ 2 ಪರೀಕ್ಷಾ ಕೇಂದ್ರಗಳು ಸೇರಿದಂತೆ ಒಟ್ಟು 22 ಪರೀಕ್ಷಾ ಕೇಂದ್ರಗಳಲ್ಲಿ 7824 ಜನ ವಿದ್ಯಾರ್ಥಿಗಳು ಆ.28 ಮತ್ತು 29ರಂದು ಸಾಮಾನ್ಯ ಪ್ರವೇಶ ಪರೀಕ್ಷೆ ಬರೆಯುತ್ತಿದ್ದು,ಇದಕ್ಕೆ ಎಲ್ಲ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಾಜು ಅವರು ವಿವರಿಸಿದರು.
ಆ.30ರಂದು ಸರಕಾರಿ ಮಾಜಿ ಪುರಸಭೆ ಪದವಿ ಪೂರ್ವ ಕಾಲೇಜಿನಲ್ಲ್ಲಿ(ಹೊರನಾಡು ಕನ್ನಡಿಗ ಮತ್ತು ಗಡಿನಾಡ ಕನ್ನಡಿಗರಿಗೆ ಕನ್ನಡ ಸಾಮಾನ್ಯ ಪ್ರವೇಶ ಪರೀಕ್ಷೆ) 200 ವಿದ್ಯಾರ್ಥಿಗಳು ಪರೀಕ್ಷೆಯ ಬರೆಯಲಿದ್ದಾರೆ ಎಂದರು.
ಸಹಾಯಕ ಆಯುಕ್ತ ಆಕಾಶ ಶಂಕರ್ ಅವರು ಪರೀಕ್ಷಾ ಕೇಂದ್ರಕ್ಕೆ ಸಮಯಕ್ಕೆ ಸರಿಯಾಗಿ ಪ್ರಶ್ನೆ ಪತ್ರಿಕೆಯನ್ನು ತಲುಪಿಸುವುದು ಮತ್ತು ಪರೀಕ್ಷೆಗೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಕೈಗೊಳ್ಳಲು ಪ್ರತಿ ತಾಲೂಕಿನಲ್ಲಿ ತ್ರಿ ಸದಸ್ಯ ಸಮಿತಿ ನೇಮಕ ಮಾಡಲಾಗಿದೆ. ಸಾಮಾನ್ಯ ಪ್ರವೇಶ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಪ್ರವೇಶ ಪತ್ರದ ಜೊತೆಗೆ ಕಡ್ಡಾಯವಾಗಿ ಒಂದು ಗುರುತಿನ ಚೀಟಿಯನ್ನು ತರಬೇಕು ಎಂದು ಅವರು ತಿಳಿಸಿದರು.
ಯಾವುದೇ ರೀತಿಯ ಅಕ್ರಮಗಳು ನಡೆಯದಂತೆ ನೋಡಿಕೊಳ್ಳಲಾಗುತ್ತದೆ. ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಮತ್ತು ಬಿಗಿ ಬಂದೋಬಸ್ತ್ ತಡೆಯುವ ಕಾರ್ಯವನ್ನು ಪೊಲೀಸ್ ಇಲಾಖೆಯಿಂದ ಮಾಡಲಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಇತರೆ ಸಿಬ್ಬಂದಿ ಹಾಜರಿದ್ದರು.

LEAVE A REPLY

Please enter your comment!
Please enter your name here