ಧೈರ್ಯವಾಗಿ ಕಾಲೇಜಿಗೆ ಆಗಮಿಸಿ ಕಲಿಕೆಗೆ ಗಮನ ಹರಿಸಿ: ಕೆ.ಗೋಪಾಲಯ್ಯ

0
117

ಹಾಸನ ಆ.23(ಕರ್ನಾಟಕ ವಾರ್ತೆ);ಅಬಕಾರಿ ಸಚಿವರು ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಗೋಪಾಲಯ್ಯ ಅವರು ಇಂದು ಜಿಲ್ಲೆಯ ಶಾಂತಿಗ್ರಾಮ ಪದವಿ ಪೂರ್ವ ಕಾಲೇಜಿಗೆ ಭೇಟಿ ನೀಡಿ ಕೊವಿಡ್ ಸುರಕ್ಷತಾ ಕ್ರಮಗಳು ಮತ್ತು ಬೋಧನಾ ವ್ಯವಸ್ಥೆಗಳನ್ನು ಪರಿಶೀಲಿಸಿ ದರು.

ಪ್ರಥಮ ಹಾಗೂ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗ ಳೊಂದಿಗೆ ಮಾತನಾಡಿದ ಅವರು ಧೈರ್ಯವಾಗಿ ಕಾಲೇಜಿಗೆ ಆಗಮಿಸಿ ಕಲಿಕೆ ಬಗ್ಗೆ ಗಮನ ಹರಿಸಿ, ಜಿಲ್ಲಾಡಳಿತ ಹಾಗೂ ಸರ್ಕಾರ ವಿದ್ಯಾರ್ಥಿಗಳ ಆರೋಗ್ಯ ಸುರಕ್ಷತೆ ಬಗ್ಗೆ ಕಾಳಜಿ ವಹಿಸಲಿದೆ ಎಂದರು.

ಜ್ವರ ಅಥವಾ ಆರೋಗ್ಯ ಸಮಸ್ಯೆ ಕಂಡು ಬಂದಲ್ಲಿ ತಕ್ಷಣ ಉಪನ್ಯಾಸಕರ ಗಮನಕ್ಕೆ ತರುವಂತೆ ಅವರು ಹೇಳಿದರು.

ಕಾಲೇಜಿನಲ್ಲಿ ಪ್ರತಿ ದಿನ ಎಲ್ಲಾ ವಿದ್ಯಾರ್ಥಿಗಳಿಗೆ ಕೊವಿಡ್ ಸ್ಕ್ರೀನಿಂಗ್ ಮಾಡಿ, ಸೋಂಕು ಹಾಗೂ ಸುರಕ್ಷತಾ ಕ್ರಮಗಳ ಬಗ್ಗೆ ತಿಳುವಳಿಕೆ ನೀಡಿ, ಅನಾರೋಗ್ಯ ಲಕ್ಷಣ ಕಂಡು ಬಂದರೆ ತಕ್ಷಣ ವೈದ್ಯಕೀಯ ತಪಾಸಣೆಗೆ ಒಳಪಡಿಸಿ ಎಂದು ಪ್ರಾಂಶುಪಾಲರು ಮತ್ತು ಉಪನ್ಯಾಸಕರಿಗೆ ಸೂಚನೆ ನೀಡಿದರು.

ಇದೇ ವೇಳೆ ಸಚಿವರು ಶಾಂತಿಗ್ರಾಮ ಹಾಗೂ ಬಾಣಾವಾರ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜು ಕಟ್ಟಡಗಳ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ತಲಾ 10 ಲಕ್ಷ ರೂ ಅನುದಾನ ಒದಗಿಸುವುದಾಗಿ ಸಚಿವರು ತಿಳಿಸಿದರು.

ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಕಡಿಮೆಯಾದ ನಂತರ ಪ್ರೌಢ ಶಾಲೆಯ ಪ್ರಾರಂಭಕ್ಕೆ ಕ್ರಮವಹಿಸಲಾ ಗುವುದು ಎಂದು ಅವರು ತಿಳಿಸಿದರು.

ಜಿಲ್ಲೆಯಲ್ಲಿ ಯಾವುದೇ ರೀತಿಯ ಲಸಿಕೆಯ ಕೊರತೆ ಯಿಲ್ಲ ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಕಡಿಮೆಯಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು .

ಶಾಸಕರಾದ ಸಿ.ಎನ್. ಬಾಲಕೃಷ್ಣ, ವಿಧಾನ ಪರಿಷತ್ ಸದಸ್ಯರಾದ ಎಂ.ಎ. ಗೋಪಾಲ ಸ್ವಾಮಿ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಸಾರ್ವಜ ನಿಕ ಶಿಕ್ಷಣ ಇಲಾಖೆ ಅಧಿಕಾರಿ ಗಳು ಹಾಜರಿದ್ದರ

LEAVE A REPLY

Please enter your comment!
Please enter your name here